ಕೊಲ್ಲಾಪುರ ಪಾದರಕ್ಷೆಗಳಿಗೆ ಜಾಗತಿಕ ಮಾನ್ಯತೆ?

Team Udayavani, Dec 19, 2017, 7:25 AM IST

Kolhapur-Footwear.jpg

ಬೆಂಗಳೂರು: ಕೊಲ್ಲಾಪುರ ಪಾದರಕ್ಷೆಗಳಿಗೆ ಶೀಘ್ರದಲ್ಲೇ ಜಾಗತಿಕ ಮಾನ್ಯತೆ ಸಿಗಲಿದೆ. ಹೌದು, ಸಾಂಪ್ರದಾಯಿಕ ಕೊಲ್ಲಾಪುರ ಪಾದರಕ್ಷೆಗಳ ತಯಾರಿಕೆ ಮತ್ತು ಮಾರಾಟದ ಪೇಟೆಂಟ್‌ (ಹಕ್ಕುಸ್ವಾಮ್ಯ)ಗಾಗಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಒಂದು ವೇಳೆ ಪೇಟೆಂಟ್‌ ಸಿಕ್ಕರೆ, ಕೊಲ್ಲಾಪುರ ಪಾದರಕ್ಷೆಗಳಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಸಿಗಲಿದೆ. ಇದರಿಂದ ತನ್ನದೇ ಆದ ವಿಶಿಷ್ಟ ವಿನ್ಯಾಸ ಹೊಂದಿರುವ ಕೊಲ್ಲಾಪುರ ಪಾದರಕ್ಷೆಗಳನ್ನು ನಕಲು ಮಾಡುವುದು, ಸ್ಥಳೀಯವಾಗಿ ಎಲ್ಲೆಂದರಲ್ಲಿ ಮಾರಾಟ ಮಾಡುವುದಕ್ಕೆ ಬ್ರೇಕ್‌ ಬೀಳಲಿದೆ. ಜತೆಗೆ ಕೊಲ್ಲಾಪುರ ಪಾದರಕ್ಷೆಗೆ ಹಾಗೂ ಅವುಗಳನ್ನು ತಯಾರಿಸುವ ಕುಶಲಕರ್ಮಿಗಳಿಗೆ ಬೇಡಿಕೆ ಹೆಚ್ಚಲಿದೆ.

3 ಸಾವಿರ ಕುಶಲಕರ್ಮಿಗಳು: ಪ್ರಸ್ತುತ ರಾಜ್ಯದ ಬೆಳಗಾವಿ ಜಿಲ್ಲೆಯ ಅಥಣಿ, ನಿಪ್ಪಾಣಿ, ಮಧುಬಾವಿ, ಐನಾಪುರ, ಗೊಂಡೇವಾಡಿ ಸೇರಿ ಸುತ್ತಲಿನ ಭಾಗದಲ್ಲಿ ಮೂರು ಸಾವಿರಕ್ಕೂ ಅಧಿಕ ಕುಶಲಕರ್ಮಿಗಳು ಕೊಲ್ಲಾಪುರ ಪಾದರಕ್ಷೆಗಳ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ.

ಹತ್ತಾರು ವಿನ್ಯಾಸಗಳಲ್ಲಿ ಈ ಪಾದರಕ್ಷೆಗಳು ತಯಾರಾಗುತ್ತಿವೆ. ಆದರೆ, ಇವುಗಳನ್ನು ಕಡಿಮೆ ಬೆಲೆಯಲ್ಲಿ ಖರೀದಿಸಿ, ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಕುಶಲಕರ್ಮಿಗಳಿಗೆ ಅನ್ಯಾಯ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪೇಟೆಂಟ್‌ ಪಡೆಯಲು ಉದ್ದೇಶಿಸಲಾಗಿದೆ. ಜತೆಗೆ ಈ ರೀತಿ ಮಾಡದಿರಲು ಅಲ್ಲಿನ ನಿಗಮದೊಂದಿಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದು ಡಾ.ಬಾಬು ಜಗಜೀನರಾಂ ಚರ್ಮ ಕೈಗಾರಿಕೆ ಅಭಿವೃದಿಟಛಿ ನಿಗಮದ ಅಧ್ಯಕ್ಷ ಓ. ಓಂಕಾರ್‌ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದಲೂ ಅರ್ಜಿ: ಮಹಾರಾಷ್ಟ್ರದಲ್ಲೂ ಈ ಕೊಲ್ಲಾಪುರ ಪಾದರಕ್ಷೆಗಳನ್ನು ತಯಾರಿಸುವ ಕುಶಲಕರ್ಮಿಗಳಿದ್ದಾರೆ. ಹಾಗಾಗಿ, ಅಲ್ಲಿನ ನಿಗಮವೂ ಪೇಟೆಂಟ್‌ಗೆ ಅರ್ಜಿ ಸಲ್ಲಿಸಿದೆ. ಚೆನ್ನೈನಲ್ಲಿರುವ ಜಿಯಾಗ್ರμಕಲ್‌ ಇಂಡಿಕೇಷನ್‌ನಲ್ಲಿ ಎರಡೂ ರಾಜ್ಯಗಳು ನೋಂದಣಿ ಮಾಡಿವೆ. ಎರಡೂ ರಾಜ್ಯಗಳಿಗೆ ಪೇಟೆಂಟ್‌ ಸಿಗುವ ವಿಶ್ವಾಸ ಇದೆ ಎಂದರು.

ಯಾವುದೇ ಒಂದು ವಸ್ತು ಸ್ಥಳೀಯವಾಗಿ ವಿಶಿಷ್ಟ ಗುಣಮಟ್ಟ ಹೊಂದಿದ್ದರೆ, ಅದರ ಪೇಟೆಂಟ್‌ ಪಡೆಯಲು ಅವಕಾಶ ಇದೆ.
ಕೊಲ್ಲಾಪುರ ಪಾದರಕ್ಷೆ ಆ ಅರ್ಹತೆ ಹೊಂದಿದೆ. ಇದನ್ನು ಉಳಿಸಿ, ಬೆಳೆಸಲು ಪೇಟೆಂಟ್‌ ಅನುಕೂಲ ಆಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ನಟರಾಜ್‌ ತಿಳಿಸಿದರು.

ಎಂ.ಜಿ.ರಸ್ತೆಯಲ್ಲಿ
ಕೊಲ್ಲಾಪುರ ಪಾದರಕ್ಷೆ!

ಕಾವೇರಿ ಎಂಪೋರಿಯಂ ಮಾದರಿಯಲ್ಲೇ ಎಂ.ಜಿ.ರಸ್ತೆಯಲ್ಲಿ ಕೊಲ್ಲಾಪುರ ಪಾದರಕ್ಷೆಗಳ ಮಾರಾಟಕ್ಕಾಗಿಯೇ ಪ್ರತ್ಯೇಕ ಮಳಿಗೆ
ತೆರೆಯಲು ಉದ್ದೇಶಿಸಲಾಗಿದೆ ಎಂದು ಡಾ.ನಟರಾಜ್‌ ತಿಳಿಸಿದರು. ಸದ್ಯ ರಾಜಾಜಿನಗರ, ಮೆಜೆಸ್ಟಿಕ್‌ ಸುತ್ತ ಕೊಲ್ಲಾಪುರ ಪಾದರಕ್ಷೆಗಳು ಸಿಗುತ್ತವೆ. ಆದರೆ, ಈ ಪಾದರಕ್ಷೆಗಳಿಗಾಗಿಯೇ ಪ್ರತ್ಯೇಕ ಮಳಿಗೆ ಎಲ್ಲಿಯೂ ಇಲ್ಲ. ಮೈಸೂರು ಮತ್ತು ನಗರದ ಎಂ.ಜಿ.ರಸ್ತೆಯಲ್ಲಿ ಪ್ರತ್ಯೇಕ ಮಾರಾಟ ಮಳಿಗೆ ತೆರೆಯಲು ಉದ್ದೇಶಿಸಲಾಗಿದೆ. ಈ ಸಂಬಂಧ ಜಾಗದ ಹುಡುಕಾಟ ಸೇರಿದಂತೆ ಪೂರಕ ಪ್ರಕ್ರಿಯೆಗಳಿಗೆ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.