ದೇವರ ನಾಮ “ಸೆಕ್ಸ್‌ ಸಿಂಬಲ್‌’ ಎಂಬ ಆರೋಪ


Team Udayavani, Jul 25, 2018, 12:03 PM IST

Lorry-02.jpg

ಬೆಂಗಳೂರು: ಸುದ್ದಿವಾಹಿನಿಯೊಂದರ ಚರ್ಚೆಯಲ್ಲಿ ಪಾಲ್ಗೊಂಡಿದ್ದ ವೇಳೆ ತಿರುಪತಿ ವೆಂಕಟೇಶ್ವರ ಸ್ವಾಮಿ ಹಣೆಯ ಮೇಲಿರುವ ನಾಮದ ಗುರುತನ್ನು ಅವಹೇಳನಾಕಾರಿಯಾಗಿ ಟೀಕಿಸಿದ್ದ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಬಂಧನ ವಿಳಂಬ ಸಂಬಂಧ ಹೈಕೋರ್ಟ್‌ ತರಾಟೆ ಬಳಿಕ ಎಚ್ಚೆತ್ತ ಪೊಲೀಸರು ಆರೋಪಿಯನ್ನು  ಬಂಧಿಸಿದ ಘಟನೆ ಮಂಗಳವಾರ ಜರುಗಿತು.

ದೇವರನಾಮದ ಬಗ್ಗೆ ಅವಹೇಳನಕಾರಿ ಪದ ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ನರಸಿಂಹಮೂರ್ತಿ ವಿರುದ್ಧ  ದೂರು ನೀಡಿ ಮೂರು ತಿಂಗಳಾದರೂ ಯಶವಂತಪುರ ಠಾಣೆ ಪೊಲೀಸರು ಬಂಧಿಸಿಲ್ಲ ಎಂದು ಆಕ್ಷೇಪಿಸಿ ಬಿ.ಎಂ ಸುರೇಶ್‌ ಎಂಬುವವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆಯನ್ನು ಮಂಗಳವಾರ ಬೆಳಿಗ್ಗೆ ನಡೆಸಿದ ನ್ಯಾ. ಅರವಿಂದಕುಮಾರ್‌ ಅವರಿದ್ದ ಏಕಸದಸ್ಯಪೀಠ, ಪೊಲೀಸರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಮ್ಮದು ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದೇ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಬಾರದು. ಯಾವುದೇ ಧರ್ಮದ ವ್ಯಕ್ತಿಯಾಗಿದ್ದರೂ ಕಾನೂನು ಕ್ರಮಜರುಗಿಸಬೇಕಲ್ಲವೇ ಎಂದು ತರಾಟೆ ತೆಗೆದುಕೊಂಡಿತು.

ಅರ್ಜಿದಾರರು ದೂರು ನೀಡಿ ಮೂರು ತಿಂಗಳು ಕಳೆದರೂ ಇದುವರೆಗೂ ಯಾಕೆ ಆರೋಪಿಯನ್ನು ಬಂಧಿಸಿಲ್ಲ,  ಇತರೆ ಪ್ರಕರಣಗಳಲ್ಲಿಯೂ ಹೀಗೆ ಮಾಡುತ್ತೀರಾ ಎಂದು ಪ್ರಶ್ನಿಸಿದ ನ್ಯಾಯಪೀಠ, ಆರೋಪಿಯನ್ನು ತತ್‌ಕ್ಷಣ ಬಂಧಿಸಿ ಮೆಮೊ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಬಳಿಕ ಸಂಜೆ ನಾಲ್ಕು ಗಂಟೆ ಸುಮಾರಿಗೆ ನ್ಯಾಯಪೀಠದ ಮುಂದೆ ಹಾಜರಾದ ಯಶವಂತಪುರ ಠಾಣೆ ಪೊಲೀಸರು, ಆರೋಪಿ ನರಸಿಂಹಮೂರ್ತಿಯನ್ನು ಬಂಧಿಸಿರುವುದಾಗಿ ಮೆಮೊ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

“ಸೆಕ್ಸ್‌ ಸಿಂಬಲ್‌’ ಆರೋಪದ ವಿರುದ್ಧ ಎಫ್ಐಆರ್‌: ಏಪ್ರಿಲ್‌ 27ರಂದು ಖಾಸಗಿ ಸುದ್ದಿವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನರಸಿಂಹಮೂರ್ತಿ, ತಿರುಪತಿ ವೆಂಕಟೇಶ್ವರ ದೇವರನಾಮ “ಸೆಕ್ಸ್‌ ಸಿಂಬಲ್‌’ ಕಾಣುತ್ತದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿ.ಎಂ  ಸುರೇಶ್‌ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ನರಸಿಂಹಮೂರ್ತಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಬಂಧಿಸಿರಲಿಲ್ಲ. ಈ ಕ್ರಮ ಪ್ರಶ್ನಿಸಿ ಅವರು ಕೋರ್ಟ್‌ ಮೊರೆಹೋಗಿದ್ದರು.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.