Accused arrested: ಅಂಗಡಿಯಲ್ಲಿ ಚಿನ್ನದ ಸರ ಕೊರಳಿಗೆ ಹಾಕಿಕೊಂಡು ಪರಾರಿಯಾಗಿದ್ದವನ ಸೆರೆ
Team Udayavani, Sep 12, 2023, 10:08 AM IST
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಸರ ಕೊರಳಿಗೆ ಹಾಕಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.
ಯವಂತಪುರದ ಸುಬೇದಾರ್‌ಪಾಳ್ಯ ನಿವಾಸಿ ರೋಹಿತ್(24) ಬಂಧಿತ. ಆರೋಪಿಯಿಂದ 2.50 ಲಕ್ಷ ರೂ. ಮೌಲ್ಯದ 45 ಗ್ರಾಂ ತೂಕದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ಆರೋಪಿ ವೃತ್ತಿಪರ ಕಳ್ಳನಾಗಿದ್ದು, ಈತನ ವಿರುದ್ಧ ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಆರೋಪಿ ಐದು ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಹೊರಬಂದು ಮತ್ತೆ ಅಪರಾಧ ಕೃತ್ಯ ಎಸಗಿದ್ದಾನೆ.
ಆರೋಪಿ ರೋಹಿತ್ ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ತೆರಳಿ 30 ಗ್ರಾಂ ತೂಕದ ಚಿನ್ನದ ಸರ ತೋರಿಸುವಂತೆ ಕೇಳಿದ್ದಾನೆ. ಅಂಗಡಿ ಸಿಬ್ಬಂದಿ ವಿವಿಧ ವಿನ್ಯಾಸದ ಸರಗಳನ್ನು ತೋರಿಸಿದ್ದಾರೆ. ಈ ಪೈಕಿ ಒಂದು ಸರ ಎತ್ತಿಕೊಂಡು ಕೊರಳಗೆ ಹಾಕಿಕೊಂಡು ಕನ್ನಡಿ ಮುಂದೆ ನಿಂತು ನೋಡಿಕೊಳ್ಳುವಂತೆ ಡ್ರಾಮಾ ಮಾಡಿದ್ದ ಆರೋಪಿ, ಸಿಬ್ಬಂದಿ ಗಮನ ಬೇರೆಡೆ ಸೆಳೆದು ಏಕಾಏಕಿ ಅಂಗಡಿಯಿಂದ ಪರಾರಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.