ಕೆಲಸಕ್ಕೆ ಸೇರಿದ ವಾರದಲ್ಲೇ 58 ಲಕ್ಷ ರೂ. ಚಿನ್ನ ಕದ್ದಳು!
Team Udayavani, Jan 8, 2023, 3:52 PM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಶಾಪ್ನಲ್ಲಿ ನಕಲಿ ಚಿನ್ನಾಭರಣಗಳನ್ನು ಇಟ್ಟು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ಮಹಿಳೆಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೀದರ್ನ ವಾಣಿ ವಾಡೇಕರ್ (22)ಬಂಧಿತೆ. ಆರೋಪಿಯಿಂದ 58.60 ಲಕ್ಷ ರೂ.ಮೌಲ್ಯದ 36.455 ಗ್ರಾಂ ಚಿನ್ನದ ಸರಗಳು, 8.8 ಗ್ರಾಂ ವಜ್ರದ ಇಯರಿಂಗಳು, 21.34 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.
ಮಳಿಗೆಯ ಮ್ಯಾನೇಜರ್ ಮೊಹಮ್ಮದ್ ಅಫ್ಜಲ್ ಎಂಬುವರು ನೀಡಿದ ದೂರಿನ ನ್ವಯ ಪ್ರಕರಣ ದಾಖಲಿಸಿಕೊಂಡ ಈಕೆ ಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಯಲಹಂಕದ ಆರ್.ಎಂ.ಜೆಡ್ ಗ್ಯಾಲೆರಿಯಾ ಮಾಲ್ನಲ್ಲಿರುವ ಜ್ಯುವೆಲ್ಲರಿ ಶಾಪ್ನಲ್ಲಿ ಮಾರಾಟ ಪ್ರತಿನಿಧಿಯಾಗಿರುವ ವಾಣಿ ವಾಡೇಕರ್, ಕಳೆದ ವರ್ಷ ಡಿ.10ರಂದು ಕೆಲಸಕ್ಕೆ ಸೇರಿಕೊಂಡಿದ್ದರು. ಕೆಲಸಕ್ಕೆ ಸೇರಿದ ಒಂದೇ ವಾರದಲ್ಲಿ ಶಾಪ್ನಲ್ಲಿದ್ದ ಅಸಲಿ ಚಿನ್ನಾಭರಣಗಳನ್ನು ಹಂತ-ಹಂತವಾಗಿ ಕಳವು ಮಾಡಿ, ಬಳಿಕ ಅದೇ ಮಾದರಿಯ ನಕಲಿ ಚಿನ್ನಾಭರಣಗಳನ್ನು ಇಟ್ಟಿದ್ದಾಳೆ. ಕೆಲ ದಿನಗಳ ಹಿಂದೆ ಸ್ಟಾಕ್ ಪರಿಶೀಲಿಸಿದಾಗ ಚಿನ್ನಾಭರಣದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಜತೆಗೆ ನಕಲಿ ಚಿನ್ನಾಭರಣ ಕಂಡು ಬಂದಿದೆ. ಅದರಿಂದ ಅನುಮಾನಗೊಂಡು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ವಾಣಿಯ ಕೈಚಳಕ ಬಯಲಾಗಿದೆ ಎಂದು ಪೊಲೀಸರು ಹೇಳಿದರು. ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.