ನಗರದ ವಿವಿಧೆಡೆ ಧಾರಾಕಾರ ಮಳೆ
Team Udayavani, Sep 20, 2020, 1:08 PM IST
ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಹಲವು ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆಯಾಗಿದೆ.
ಶನಿವಾರ ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ನಗರ ಕೇಂದ್ರ ಭಾಗವಾದ ಮೆಜೆಸ್ಟಿಕ್, ಕೃಷ್ಣರಾಜೇಂದ್ರ ಮಾರುಕಟ್ಟೆ, ಕಾರ್ಪೋರೆಷನ್, ಎಂ.ಜಿ ರಸ್ತೆ ಹಾಗೂ ಟ್ರಿನಿಟಿ ಸೇರಿದಂತೆ ಹಲವು ಭಾಗದಲ್ಲಿ ಮಳೆಯಾಗಿದೆ.
ನಗರದ ವಿವಿಧೆಡೆ ಶನಿವಾರ ಸಾಧಾರಣ ಮಳೆ ಸುರಿದರೂ ರಸ್ತೆಗಳಲ್ಲಿ ಹಾಗೂ ಪ್ರಮುಖ ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರು ಪರದಾಡುವ ಪರಿಸ್ಥಿತಿನಿರ್ಮಾಣವಾಗಿತ್ತು. ಆದರೆ, ಮಳೆಯಿಂದ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ.
ಮುರು ದಿನ ಮಳೆ ಸಾಧ್ಯತೆ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಗರದಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.