ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್
Team Udayavani, Apr 12, 2017, 11:01 AM IST
ಬೆಂಗಳೂರು: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಚಿಕಿತ್ಸೆ ನೀಡಲು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಯ ಪ್ರಕಾರ ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆ ನೀಡಬೇಕು. ಆದರೆ, ಪ್ರಸ್ತುತ ಹಲವು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ವಿವಿಧ ರೀತಿಯಲ್ಲಿ ಶುಲ್ಕ ವಿಧಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.
ಹೀಗಾಗಿ, ಇನ್ಮುಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಳಪಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದ ರೋಗಿಗಳಿಂದ ಯಾವುದೇ ಶುಲ್ಕ ವಸೂಲಿ ಮಾಡದಂತೆ ಸೂಚನೆ ನೀಡಲಾಗಿದೆ. ಎಲ್ಲ ವರ್ಗದ ರೋಗಿಗಳಿಗೂ ಉಚಿತ ಡಯಾಲಿಸಿಸ್ ಚಿಕಿತ್ಸೆ ನೀಡಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಒಳಪಟ್ಟ 20 ಜಿಲ್ಲಾಸ್ಪತ್ರೆ, 3 ಪ್ರಧಾನ ಆಸ್ಪತ್ರೆ, 35 ತಾಲೂಕು ಸಾರ್ವಜನಿಕ ಆಸ್ಪತ್ರೆ, ಹೊಸದಾಗಿ ಸ್ಥಾಪಿಸಿರುವ 44 ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಅಡಿಯಲ್ಲಿ ನಡೆಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.