ಪ್ರತ್ಯೇಕ ಸಾಂಸ್ಕೃತಿಕ ನೀತಿಗೆ ಸರಕಾರ‌ ಆಸಕ್ತಿ…!


Team Udayavani, Aug 7, 2017, 6:30 AM IST

vidhana-soudha-750.jpg

ಬೆಂಗಳೂರು: ಭಾಷೆ, ಸಂಸ್ಕೃತಿಯ ಹೆಸರಿನಲ್ಲಿ ಜನರಿಗೆ ಹತ್ತಿರವಾಗಲು ಯತ್ನಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ‌, ನಾಡಧ್ವಜ ರಚನೆ ಕುರಿತಂತೆ ಪ್ರತ್ಯೇಕ ಸಮಿತಿ ರಚಿಸಿದ್ದರ ಬೆನ್ನಲ್ಲೇ ಈಗ ರಾಜ್ಯಕ್ಕೆ ಪ್ರತ್ಯೇಕ ಸಾಂಸ್ಕೃತಿಕ ನೀತಿ  ಬೇಕೆಂಬ ದಶಕಗಳ ಬೇಡಿಕೆ ಈಡೇರಿಸಲು ಮುಂದಾಗಿದೆ.

ಹಿರಿಯ ಸಾಹಿತಿ ಡಾ| ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿರುವ ವರದಿಯ ಶಿಫಾರಸುಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿದ್ದ ಕೆಲವು ಅಂಶಗಳನ್ನು ಸೇರಿಸಿ ಸಾಂಸ್ಕೃತಿಕ ನೀತಿ ಸಿದ್ಧಪಡಿಸ ಲಾಗಿದ್ದು, ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ 2013ರಲ್ಲಿ ಕಾಂಗ್ರೆಸ್‌ ಸರಕಾರ‌ ಅಧಿಕಾರಕ್ಕೆ ಬಂದಾಗಿನಿಂದಲೇ ಸಾಂಸ್ಕೃತಿಕ ನೀತಿ ರೂಪಿಸಲು ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಪ್ರತಿ ಬಾರಿ ಅದನ್ನು ಮುಂದೂಡುತ್ತಲೇ ಬರ ಲಾಗುತ್ತಿತ್ತು. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಚರ್ಚೆಗೆ ಬಂದಿದೆ.

ಏನಿದು ಸಾಂಸ್ಕೃತಿಕ ನೀತಿ?: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜತೆಜತೆಯಾಗಿ ಕೊಂಡೊಯ್ಯುವುದರ  ಜತೆಗೆ ಇವುಗಳ ಒಟ್ಟಾರೆ ಬೆಳವಣಿಗೆಗೆ ಪೂರಕವಾಗುವಂತೆ ರಾಜ್ಯಕ್ಕೊಂದು ಪ್ರತ್ಯೇಕ ಸಾಂಸ್ಕೃತಿಕ ನೀತಿ ಬೇಕು ಎಂಬುದು ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲದಿಂದ ಇದ್ದ ಬೇಡಿಕೆ. ಜೆ.ಎಚ್‌. ಪಟೇಲ್‌, ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿರುವಾಗ ಈ ಕುರಿತ ಪ್ರಯತ್ನಗಳು ನಡೆದಿತ್ತಾದರೂ ಫ‌ಲಪ್ರದವಾಗಿರಲಿಲ್ಲ.

2013ರಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ‌ ಅಧಿಕಾರಕ್ಕೆ ಬಂದು ಉಮಾಶ್ರೀ ಅವರು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾಗಿ ಆಯ್ಕೆಯಾದ ಬಳಿಕ ಅದಕ್ಕೆ ಮತ್ತೆ ಜೀವ ಬಂತು. 2013ರ ಆಗಸ್ಟ್‌ನಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ನೀತಿಗಾಗಿ ಶಿಫಾರಸುಗಳನ್ನು ಸಲ್ಲಿಸಲು ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿ 2014ರ ಮಧ್ಯಂತರದಲ್ಲಿ ಸರಕಾರ‌ಕ್ಕೆ ವರದಿ ನೀಡಿತ್ತು.

44 ಅಂಶಗಳ ಶಿಫಾರಸು
ಕನ್ನಡ ಭಾಷೆ ಮತ್ತು ಸ್ಥಳೀಯ ಸಂಸ್ಕೃತಿ ಕುರಿತು ಸರಕಾರ‌ ತನ್ನ ಬದ್ಧತೆ ಪ್ರದರ್ಶಿಸಲು ಅನುಕೂಲವಾಗುವಂತೆ ಸಮಿತಿ 44 ಪ್ರಮುಖ ಅಂಶಗಳನ್ನು ಶಿಫಾರಸು ಮಾಡಿತ್ತು. ಸಾಂಸ್ಕೃತಿಕ ಉನ್ನತಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ವಿಕೇಂದ್ರೀಕರಣಗೊಳಿಸಬೇಕು. ಪ್ರತಿ ಕಂದಾಯ ವಿಭಾಗಕ್ಕೂ (ನಾಲ್ಕು ವಿಭಾಗ) ಪ್ರತ್ಯೇಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸ್ಥಾಪಿಸಬೇಕು ಎಂಬ ಅಂಶವೂ ಈ ಶಿಫಾರಸಿನಲ್ಲಿ ಸೇರಿತ್ತು.

ಇದಲ್ಲದೆ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಅಭಿವೃದ್ಧಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ, ಸುಗಮ ಸಂಗೀತ ಕ್ಷೇತ್ರಕ್ಕೆಂದೇ ಪ್ರತ್ಯೇಕ ಅಕಾಡೆಮಿ ಸ್ಥಾಪನೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಸಂಬಂಧಿಸಿದಂತೆ ಇರುವ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಅಧಿಕಾರಯುತ ಮತ್ತು ಸರಕಾರ‌ದ ಮಧ್ಯಪ್ರವೇಶಕ್ಕೆ ಅವಕಾಶವಾಗದ ವಿಶೇಷ ತಜ್ಞರ ಸಮಿತಿ ರಚನೆ, ಕಲಾವಿದರ ಮಕ್ಕಳಿಗೆ ಉನ್ನತ ಶಿಕ್ಷಣದಲ್ಲಿ ಸಾಂಸ್ಕೃತಿಕ ಒಳಮೀಸಲಾತಿ ಕಲ್ಪಿಸುವುದು, ಪ್ರೌಢಶಾಲಾ ಮಟ್ಟದಲ್ಲಿ ರಾಜ್ಯದ ಸಾಂಸ್ಕೃತಿಕ ಲೋಕದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರೌಢಶಾಲೆಗಳಲ್ಲಿ ಪ್ರತ್ಯೇಕವಾಗಿ ಸಾಂಸ್ಕೃತಿಕ ಅಧ್ಯಾಪಕರ ನೇಮಕ, ಜಿಲ್ಲೆಗೊಂದು ಕಲಾಗ್ರಾಮ ಮತ್ತು ಚಿತ್ರಕಲಾ ಗ್ಯಾಲರಿ ಸ್ಥಾಪನೆ ಇತ್ಯಾದಿ ಈ ವರದಿಯಲ್ಲಿತ್ತು.

ಇವೆಲ್ಲದರ ಜತೆಗೆ ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ರಾಜಕಾರಣಿಗಳನ್ನು ಆಹ್ವಾನಿಸ ಬೇಕು ಎಂಬ ಶಿಷ್ಟಾಚಾರದಿಂದ ವಿನಾಯಿತಿ ನೀಡಬೇಕು ಎಂದು ಹೇಳಿತ್ತು.

ಬಜೆಟ್‌ನಲ್ಲಿ ಘೋಷಣೆ ಹುಸಿಯಾಯ್ತು
ಬರಗೂರು ನೇತೃತ್ವದ ಸಮಿತಿ ಸಿದ್ಧಪಡಿಸಿದ ಸಾಂಸ್ಕೃತಿಕ ನೀತಿ ಶಿಫಾರಸುಗಳಲ್ಲಿ ಕೆಲವು ಬದಲಾವಣೆಗಳಾಗಬೇಕು ಎಂಬ ಕೂಗು ಕೇಳಿಬಂದಿದ್ದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇನ್ನಷ್ಟು ಅಂಶಗಳನ್ನು ಸೇರಿಸಿ 2015ರ ಜನವರಿ ವೇಳೆಗೆ ಸಾಂಸ್ಕೃತಿಕ ನೀತಿ ಸಿದ್ಧಪಡಿಸಿತ್ತು. ಆದರೆ ಕೆಲವು ಅಂಶಗಳು ವೆಚ್ಚದಾಯಕ ಎಂಬ ಕಾರಣಕ್ಕೆ ಆರ್ಥಿಕ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲಾಯಿತು. 

2016ರ ಜನವರಿಯಲ್ಲೇ ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದರಿಂದ ಕಳೆದ ವರ್ಷದ ಬಜೆಟ್‌ನಲ್ಲೇ ಘೋಷಣೆಯಾಗುವ ನಿರೀಕ್ಷೆ ಇತ್ತು, ಆದರೆ ಆಗಲಿಲ್ಲ. 2017-18ನೇ ಸಾಲಿನ ಬಜೆಟ್‌ನಲ್ಲೂ ಈ ಬಗ್ಗೆ ಪ್ರಸ್ತಾವವಾಗಿರಲಿಲ್ಲ.

ಪ್ರಮುಖ ಶಿಫಾರಸುಗಳು
– ಸಾಂಸ್ಕೃತಿಕ ಉನ್ನತಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ವಿಕೇಂದ್ರೀಕರಣಗೊಳಿಸಿ ಪ್ರತಿ ಕಂದಾಯ ವಿಭಾಗಕ್ಕೂ (ನಾಲ್ಕು ವಿಭಾಗ) ಪ್ರತ್ಯೇಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸ್ಥಾಪಿಸಬೇಕು.
– ಸರಕಾರ‌ದ ವತಿಯಿಂದ ನಡೆಸುವುದೂ ಸಹಿತ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜಕಾರಣಿಗಳನ್ನು ಆಹ್ವಾನಿಸಬೇಕು ಎಂಬ ಶಿಷ್ಟಾಚಾರದಿಂದ ವಿನಾಯಿತಿ ನೀಡಬೇಕು.
– ಬುಡಕಟ್ಟು ಸಮುದಾಯದ ಸಂಸ್ಕೃತಿಯ ಅಭಿವೃದ್ಧಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆಂದೇ ಪ್ರತ್ಯೇಕ ಅಕಾಡೆಮಿ ರಚನೆ ಮಾಡಬೇಕು.
– ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಸಂಬಂಧಿಸಿದಂತೆ ಇರುವ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸರಕಾರ‌ ಮಧ್ಯಪ್ರವೇಶಿದಂತೆ ವಿಶೇಷ ತಜ್ಞರ ಸಮಿತಿ ರಚಿಸಬೇಕು.
– ಪ್ರೌಢಶಾಲಾ ಮಟ್ಟದಲ್ಲಿ ರಾಜ್ಯದ ಸಾಂಸ್ಕೃತಿಕ ಲೋಕದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರತ್ಯೇಕವಾಗಿ ಸಾಂಸ್ಕೃತಿಕ ಅಧ್ಯಾಪಕರ ನೇಮಕ, ಜಿಲ್ಲೆಗೊಂದು ಕಲಾಗ್ರಾಮ ಮತ್ತು ಚಿತ್ರಕಲಾ ಗ್ಯಾಲರಿ ಸ್ಥಾಪನೆ.

– ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.