ಸರ್ಕಾರ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ಡಾ. ಜಿ ಪರಮೇಶ್ವರ್ ಆಕ್ರೋಶ
ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಅಂತ ಹೇಳಲಾಗುತ್ತಿದೆ. ಈ ಕುರಿತು ಶ್ವೇತಪತ್ರ ಹೊರಡಿಸಲಿ
Team Udayavani, Oct 10, 2019, 11:42 AM IST
ತುಮಕೂರು: ವಿಧಾನಸೌಧದಲ್ಲಿ ಮಾಧ್ಯಮಕ್ಕೆ ನಿರ್ಬಂಧ ವಿಧಿಸಿರುವುದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ. ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸರ್ಕಾರದ ನಿರ್ಧಾರದ ವಿರುದ್ಧ ನಾವು ಸದನದಲ್ಲಿ ಹೋರಾಟ ಮಾಡುತ್ತೇನೆ. ಮಾಧ್ಯಮಕ್ಕೆ ನಿರ್ಬಂಧ ಹಾಕಿರುವುದನ್ನು ಕಲಾಪದಲ್ಲಿ ಪ್ರಶ್ನಿಸುತ್ತೇವೆ ಎಂದು ತಿಳಿಸಿದ್ದಾರೆ.
ನಾನು ವಿರೋಧ ಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಹೈಕಮಾಂಡ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಅದಕ್ಕೆ ನಾನು ಬದ್ದನಾಗಿದ್ದೇನೆ. ಸಿದ್ದರಾಮಯ್ಯ ಸಮರ್ಥರಾಗಿದ್ದಾರೆ. ಹಿಂದೆ ಕೂಡ ವಿಪಕ್ಷ ನಾಯಕರಾಗಿದ್ದವರು,ಮುಖ್ಯಮಂತ್ರಿಯಾಗಿದ್ದವರು. ಹಾಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ. ಎಚ್ ಕೆ ಪಾಟೀಲರು ಹಿರಿಯವರು. ಅವರಿಗೆ ಅಪಾರ ಅನುಭವವಿತ್ತು. ಹಾಗಾಗಿ ತಮಗೆ ಆ ಸ್ಥಾನ ಬೇಕು ಅಂತ ಕೇಳಿದ್ದರು. ಆದರೆ ಅದು ಅಸಮಾಧಾನ ಅಂತ ಅಲ್ಲ ಎಂದು ಸ್ಪಷ್ಠನೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವೇ ಇಲ್ಲ ಎಂದರು.
ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ. ನಮ್ಮ ತಪ್ಪುಗಳಿದ್ದರೆ ದಾಳಿ ಮಾಡಲಿ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಅಂತ ಹೇಳಲಾಗುತ್ತಿದೆ. ಆದರೇ ಬೇಕಾದಷ್ಟು ಹಣ ಇದೆ. ಅಷ್ಟಿದ್ದರೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.