ಹುದ್ದೆಯಿಂದ ವಿಮುಕ್ತಿಗೆ ಸರ್ಕಾರದ ಸೂಚನೆ
Team Udayavani, Mar 31, 2019, 12:23 PM IST
ಬೆಂಗಳೂರು: ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಪ್ರೊ.ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಿಸಿದ್ದು, ಕೂಡಲೇ ಅವರನ್ನು ಹುದ್ದೆಯಿಂದ ವಿಮುಕ್ತಿಗೊಳಿಸುವಂತೆ ಸರ್ಕಾರದಿಂದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗೆ ನಿರ್ದೇಶಿಸಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಅಧಿನಿಯಮ 2000ರ ಪ್ರಕರಣ 34(7)ರಲ್ಲಿ ಗೊತ್ತುಪಡಿಸಿರುವಂತೆ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಪ್ರಾಧ್ಯಾಪಕರನ್ನು ವಿಭಾಗದ ಮುಖ್ಯಸ್ಥರನ್ನಾಗಿ ಮಾಡುವಂತಿಲ್ಲ. ಹೀಗಾಗಿ, ಪ್ರೊ.ಮೈಲಾರಪ್ಪ ಅವರು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರ ಹುದ್ದೆಗೆ ಅರ್ಹರಾಗಿರುವುದಿಲ್ಲ. ಅವರ ಬದಲಿಗೆ ಅರ್ಹ ಪ್ರಾಧ್ಯಾಪಕರನ್ನು ನೇಮಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಹಾಗೆಯೇ, ವಿಶ್ವವಿದ್ಯಾಲಯದ ಅನುದಾನ ಆಯೋಗ (ಮುಕ್ತ ಮತ್ತು ಅಂಚೆತೆರಪಿನ ಕಲಿಕೆ) ಕಾಯ್ದೆ 2017ರಂತೆ ಮೈಲಾರಪ್ಪ ಅವರನ್ನು ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಯಿಂದ ತೆರವುಗೊಳಿಸಿ, ಅರ್ಹ, ಅನುಭವಿ ಪ್ರಾಧ್ಯಾಪಕರನ್ನು ನೇಮಿಸಲು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.