ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟ ವಿಳಂಬ
Team Udayavani, Oct 23, 2018, 6:30 AM IST
ಬೆಂಗಳೂರು : ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಾಂತ್ರಿಕ ಸಮಸ್ಯೆ ಪದೇಪದೇ ಎದುರಾಗುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇತ್ತೀಚಿಗೆ ಹೊರಡಿಸಿದ್ದ ಪರಿಷ್ಕೃತ ವೇಳಾಪಟ್ಟಿಯಂತೆ ಸೋಮವಾರ ಸರ್ಕಾರಿ ಪ್ರೌಢಶಾಲೆಯ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗಬೇಕಿತ್ತು. ವರ್ಗಾವಣೆ ಸಾಫ್ಟ್ವೇರ್‌ನ ತಾಂತ್ರಿಕ ಸಮಸ್ಯೆಯಿಂದ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗಿಲ್ಲ.
ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲೂ ಕೂಡ ತಾಂತ್ರಿಕ ದೋಷಗಳಿಂದಾಗಿ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಪ್ರೌಢಶಾಲಾ ವಿಭಾಗದ ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟವಾಗದೇ ಇರುವುದರಿಂದ ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ಕೂಡ ವಿಳಂಬವಾಗುವ ಸಾಧ್ಯತೆ ಇದೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.
ಹೆಚ್ಚುವರಿ ಶಿಕ್ಷಕರ ನಿಯೋಜನೆಯ ನಂತರ ಕಡ್ಡಾಯ ಶಿಕ್ಷಕರ ವರ್ಗಾವಣೆ ನಡೆಯಲಿದೆ. ಇದಾದ ನಂತರ ಕೋರಿಕೆ ಹಾಗೂ ಪರಿಸ್ಪರ ವರ್ಗಾವಣೆ ನಡೆಸಲಾಗುತ್ತದೆ. ಹೆಚ್ಚುವರಿ ಶಿಕ್ಷಕರ ನಿಯೋಜನೆಯಾಗದೇ ಮುಂದಿನ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ. ಹೆಚ್ಚುವರಿ ಶಿಕ್ಷಕರ ಎಲ್ಲ ಮಾಹಿತಿ ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದ ಸಂಬಂಧಿಸಿದ ತಂತ್ರಾಂಶದ ಮೂಲಕವೇ ಸಂಗ್ರಹಿಸಲಾಗಿದೆ. ಸಾಫ್ಟ್ವೇರ್ ಮೂಲಕ ಪ್ರಕಟಿಸುವುದಷ್ಟೇ ಬಾಕಿ ಇದೆ. ಸಾಫ್ಟ್ವೇರ್‌ಗೆ ಅಳವಡಿಸಿದ ತಕ್ಷಣವೇ ಪ್ರಕಟವಾಗಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.