ಸರ್ಕಾರಿ ಶಾಲೆಗಳ ಕೊಠಡಿ ದುರಸ್ತಿಗೆ ಕ್ರಮ: ತನ್ವೀರ್
Team Udayavani, Feb 9, 2017, 3:45 AM IST
ವಿಧಾನಪರಿಷತ್ತು: ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಕಾಂಗ್ರೆಸ್ ನ ಮೋಟಮ್ಮ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ 66 ಸಾವಿರ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಅವುಗಳ ದುರಸ್ತಿಗೆ ಕೇಂದ್ರದ ನೆರವು ಕೋರುವುದರ ಜತೆಗೆ ಈ ಬಾರಿಯ ಬಜೆಟ್‌ನಲ್ಲೂ ಹೆಚ್ಚಿನ ಹಣ ನೀಡುವಂತೆ ಮುಖ್ಯಮಂತ್ರಿಯವರಿಗೆ ಪ್ರಸ್ತಾಪವೆ ಸಲ್ಲಿಸಲಾಗುವುದು ಎಂದು ಹೇಳಿದರು.
ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ದುರಸ್ಥಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತನ್ವೀರ್ ಸೇಠ್ ಹೇಳಿದರು.
ರಾಷ್ಟ್ರೀಯ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿಗೆ ಹಿಂದಿನ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ. ಈ ವರ್ಷ 1,879 ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲಾಗಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,127 ಕೋಟಿ ರೂ. ಬರಬೇಕಾಗಿತ್ತು. ಆದರೆ, ಬಂದಿದ್ದು ಕೇವಲ 544 ಕೋಟಿ ರೂ. ಮಾತ್ರ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.