ಶಿಕ್ಷಕರ ಬಡ್ತಿಗೆ ಸರ್ಕಾರ ಚಿಂತನೆ
Team Udayavani, Sep 14, 2017, 6:25 AM IST
ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಪಿಯು ಕಾಲೇಜಿಗೆ ಹಾಗೂ ಪಿಯು ಉಪನ್ಯಾಸಕರನ್ನು ಪದವಿ ಕಾಲೇಜಿಗೆ ಸೇವಾ ಜೇಷ್ಠತೆಯ ಆಧಾರದಲ್ಲಿ ಬಡ್ತಿ ನೀಡಲು ಕಾನೂನು ತಿದ್ದುಪಡಿಗೆ ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆ ನಿವಾರಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಸರ್ಕಾರಿ ಶಾಲೆಯ ಗುಣಮಟ್ಟ ಸುಧಾರಣೆ ಹಾಗೂ ಶಿಕ್ಷಕರ ಸಬಲೀಕರಣಕ್ಕಾಗಿ 4 ಸರ್ಕಾರೇತರ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಉಪನ್ಯಾಸಕರನ್ನು ಯಾವ ರೀತಿ ಶೈಕ್ಷಣಿಕವಾಗಿ ಬಳಸಿಕೊಳ್ಳಬಹುದು ಎಂಬುದರ ಬಗ್ಗೆಯೂ ಇಲಾಖೆಯ ಅಧಿಕಾರಿಗಳು ಕಾರ್ಯತಂತ್ರರೂಪಿಸುತ್ತಿದ್ದಾರೆ. ಪ್ರೌಢಶಾಲಾ ಶಿಕ್ಷಕರನ್ನು ಪಿಯು ಉಪನ್ಯಾಸಕರಾಗಿ ಬಡ್ತಿ ನೀಡುವ ವ್ಯವಸ್ಥೆ 2012ರಲ್ಲಿ ಸ್ಥಗಿತಗೊಂಡಿದೆ. ಹಾಗೆಯೇ ಪಿಯು ಉಪನ್ಯಾಸಕರನ್ನು ಪದವಿ ಕಾಲೇಜಿಗೆ ಬಡ್ತಿ ನೀಡುವ ವ್ಯವಸ್ಥೆ ಸದ್ಯ ನಮ್ಮಲ್ಲಿ ಇಲ್ಲ. ಹೀಗಾಗಿ ಸರ್ಕಾರದ ವೃಂದ ಮತ್ತು ನೇಮಕಾತಿ ನಿಯಮದ ತಿದ್ದುಪಡಿಯ ಬಗ್ಗೆಯೂ ಯೋಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಪಿಯುಸಿ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ 1357 ಪಿಯು ಉಪನ್ಯಾಸಕರು ಹೆಚ್ಚುವರಿಯಾಗಿದ್ದಾರೆ. ಇವರನ್ನು ಅನುದಾನಿತ ಶಿಕ್ಷಣ ಸಂಸ್ಥೆಗೆ ನಿಯೋಜಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.