ಗೋರಕ್ಷಕ ಕಾಯ್ದೆ: ರಾಜ್ಯ ಸರ್ಕಾರದ ಸ್ಪಷ್ಟನೆ


Team Udayavani, May 5, 2017, 10:56 AM IST

kar-govt-05.jpg

ಬೆಂಗಳೂರು: ಕರ್ನಾಟಕ ಗೋವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964ರ ಪರಿಚ್ಛೇಧ 15ರ ಅಡಿಯಲ್ಲಿ “ಕಾನೂನು ರೀತ್ಯಾ ರಚಿಸಲಾದ ಗುಂಪು ಅಥವಾ ಈ ಕಾನೂನಿನಡಿ ಕ್ರಮ ಕೈಗೊಳ್ಳಬಹುದಾದ ಅಧಿಕಾರವುಳ್ಳ ವ್ಯಕ್ತಿಗಳು ಉತ್ತಮ ಉದ್ದೇಶದಿಂದ ಕಾನೂನಿ ನಲ್ಲಿ ನೀಡಲಾಗಿರುವ ಅವಕಾಶದನ್ವಯ ಜರುಗಿಸಿದ ಕ್ರಮಗಳಿಗೆ ರಕ್ಷಣೆ ನೀಡುತ್ತದೆಯೇ ಹೊರತು, ಯಾವುದೇ ವ್ಯಕ್ತಿ, ಸಮೂಹಗಳು ಗೋರಕ್ಷಣೆಯ ಹೆಸರಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್‌ ಚಟುವಟಿಕೆಗಳಿಗೆ ರಕ್ಷಣೆ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ಸರ್ಕಾರವು ಗೋರಕ್ಷಕ ರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿ ರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸ ಲಾಗಿರುವ ಕೌಂಟರ್‌ ಅಫಿಡವಿಟ್‌ನಲ್ಲಿ ಹೇಳಲಾಗಿರುವ ಅಂಶಗಳನ್ನು ಉದ್ಧರಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿ ರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದರಲ್ಲಿ ಗೋವಿನ ರಕ್ಷಣೆಯ ಹೆಸರಲ್ಲಿ ಹಿಂಸೆಯನ್ನು ಮಾಡುವ ಗುಂಪುಗಳನ್ನು ನಿಷೇಧಿಸಬೇಕು ಎಂಬುದಾಗಿ ಕೋರಲಾಗಿತ್ತು. ಇದೇ ವೇಳೆ, ಕರ್ನಾಟಕ ಗೋವಧೆ ತಡೆ ಹಾಗೂ ಜಾನುವಾರ ಸಂರಕ್ಷಣಾ ಕಾಯ್ದೆ 1964ರ ಪರಿಚ್ಛೇಧ 15 ಅಸಂವಿಧಾನಿಕ ಎಂದು ಪರಿಗಣಿಸುವಂತೆಯೂ ಕೋರಲಾಗಿತ್ತು. ಈ ಸಂಬಂಧ ಕರ್ನಾಟಕ ಸರ್ಕಾರವು ನ್ಯಾಯಾಲಯದ ನಿರ್ದೇಶನದಂತೆ ಕೌಂಟರ್‌ ಅಫ‌ಡವಿಟ್‌ ಸಲ್ಲಿಸಿದೆ. 

ಪಿಐಎಲ್‌ ವಜಾಗೆ ಮನವಿ: ಗೋ ರಕ್ಷಕ ದಳದ ಚಟುವಟಿಕೆ ವಿಚಾರವಾಗಿ ರೂಪಿಸಲಾಗಿರುವ ಕಾಯ್ದೆಯನ್ನು ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಸಮರ್ಥಿಸಿಕೊಂಡಿದೆ. ಕಾಯ್ದೆಗೆ ಸಂಬಂಧಿಸಿ ಅರ್ಜಿ ವಿಚಾರಣೆಯ ವೇಳೆ, ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವಂತಹ ಪಿಐಎಲ್‌ ವಜಾಗೊಳಿಸುವಂತೆ ಮನವಿ ಮಾಡಿಕೊಂಡಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.