ಐಎಂಎ ವಂಚನೆಯಲ್ಲಿ ಸರ್ಕಾರ ಶಾಮೀಲು


Team Udayavani, Jun 25, 2019, 3:06 AM IST

im-vanchane

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಪಾರದರ್ಶಕತೆ ತನಿಖೆಗಾಗಿ ಸಿಬಿಐಗೆ ವ‌ಹಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ತಿಳಿಸಿದ್ದಾರೆ. ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಎಂಎ ಸಂಸ್ಥೆಯ ಮಾಲೀಕ ಮನ್ಸೂರ್‌ ಖಾನ್‌ ವಿಡಿಯೋ ಗಮನಿಸಿದರೆ ಮೇಲ್ನೋಟಕ್ಕೆ ಪ್ರಕರಣದಲ್ಲಿ ಸರ್ಕಾರ ಶಾಮೀಲಾಗಿರುವ ಶಂಕೆಯಿದೆ ಎಂದು ಗಂಭೀರ ಆರೋಪ ಮಾಡಿದರು.

ಸರ್ಕಾರದ ಸಹಕಾರದಲ್ಲಿ ವಂಚನೆ ನಡೆದಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಸಿಬಿಐ ತನಿಖೆಯೇ ಸೂಕ್ತ ಎಂದರು. ಐಎಂಎ ಸಂಸ್ಥೆಯ ಮಾಲೀಕ ಮನ್ಸೂನ್‌ ಖಾನ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆದರೆ, ಅವರ ಪಾರ್ಸ್‌ಪೋರ್ಸ್‌ ವಶಕ್ಕೆ ಪಡೆದುಕೊಂಡಿರಲಿಲ್ಲ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಸಾಕ್ಷ್ಯಗಳನ್ನು ನಾಶ ಪಡಿಸುವ ಉದ್ದೇಶವಾಗಿದೆ ಎಂದು ದೂರಿದರು.

ಜನರನ್ನು ಹೂಡಿಕೆದಾರರನ್ನಾಗಿ ಮಾಡದೆ ಸಂಸ್ಥೆಯ ಷೇರುದಾರರನ್ನಾಗಿ ಮಾಡಿಕೊಂಡಿದೆ ಎಂದು ಸರ್ಕಾರ ಹೇಳಿದೆ. ಆದರೆ, ಐಎಂಎ ಜನರನ್ನು ಹೂಡಿಕೆದಾರರನ್ನಾಗಿ ಮಾಡಿಕೊಂಡಿದೆಯೇ ಹೊರತು ಷೇರುದಾರರನ್ನಾಗಿ ಮಾಡಿಕೊಂಡಿಲ್ಲ. ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದರು. ಮನ್ಸೂರ್‌ ಖಾನ್‌ ಮಾತನಾಡಿರುವ ವಿಡಿಯೋ ಕುರಿತು ಕೂಲಂಕಷ ತನಿಖೆ ನಡೆಸಬೇಕಿರುವ ಕಾರಣ ಸರ್ಕಾರ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು.

ಪ್ರತಿಪಕ್ಷದ ಒತ್ತಡಕ್ಕೆ ಮಣಿಯದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಹೇಳಿದರು. ದಿವಾಳಿ ಹಂತಕ್ಕೆ ಬಂದಿರುವ ಕಂಪನಿಯನ್ನು ಉಳಿಸಲಾಗದೆ ದೇಶಬಿಟ್ಟು ಪರಾರಿಯಾಗಿರುವ ಮನ್ಸೂರ್‌ ಖಾನ್‌ ಸಾವಿರಾರು ಹೂಡಿಕೆದಾರರನ್ನು ಅತಂತ್ರ ಸ್ಥಿತಿಗೆ ತಂದಿದ್ದಾರೆ.

ಹಲವು ವರ್ಷಗಳಿಂದ ನಡೆಯುತ್ತಿರುವ ವಹಿವಾಟಿನ ದಿವಾಳಿತನದ ಬಗ್ಗೆ ಕಳೆದ ವರ್ಷವೇ ತಿಳಿದಿದ್ದರೂ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಈ ಕುರಿತು ಮೌನ ವಹಿಸಿದೆ. ಕಂಪನಿಯನ್ನು ಉಳಿಸುವ ನಿಟ್ಟಿನಲ್ಲಿ ಎನ್‌ಬಿಎಫ್ಸಿಯಿಂದ ನಿರಾಕ್ಷೇಪಣಾ ಪತ್ರಕ್ಕಾಗಿ (ಎನ್‌ಒಸಿ) ಐಎಎಸ್‌ ಅಧಿಕಾರಿಯೊಬ್ಬರಿಗೆ ಲಂಚ ನೀಡಲು ಸಾಧ್ಯವಾಗದಿರುವುದು ಸೇರಿದಂತೆ ಕೆಲವು ರಾಜಕಾರಣಿಗಳ ಹೆಸರು ವಿಡಿಯೋದಲ್ಲಿ ಪ್ರಸ್ತಾಪವಾಗಿದೆ.

ಈ ನಿಟ್ಟಿನಲ್ಲಿ ಸಮ್ಮಿಶ್ರ ಸರ್ಕಾರದಿಂದ ನಿಷ್ಪಕ್ಷಪಾತದಿಂದ ತನಿಖೆಯಾಗುವ ಬಗ್ಗೆ ಸಂಶಯ ಇದೆ ಎಂದು ತಿಳಿಸಿದರು. ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್‌ ರೀತಿಯಲ್ಲಿ ನೋಡುತ್ತಿರುವ ಸಮ್ಮಿಶ್ರ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕೇಳಿಸುತ್ತಿಲ್ಲ. ಪ್ರಭಾವಿ ವ್ಯಕ್ತಿಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.