ಕೋಲಾರ ಮೀಸಲು ಕ್ಷೇತ್ರಕ್ಕೂ ಗೌಡರ ಪಟ್ಟು
Team Udayavani, Jan 4, 2019, 12:45 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಯಡಿ ಬೆಂಗಳೂರು ಉತ್ತರ ಅಷ್ಟೇ ಅಲ್ಲದೆ ಕೋಲಾರ ಕ್ಷೇತ್ರಕ್ಕೂ ಜೆಡಿಎಸ್‌ಗೆ ಪಟ್ಟು ಹಿಡಿದಿದೆ.
ಕೋಲಾರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದು ಕಾಲದ ಆಪ್ತ ಎಚ್.ಸಿ. ಮಹದೇವಪ್ಪ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.ವಿಧಾನಸಭೆ ಚುನಾವಣೆಯಲ್ಲಿ ಟಿ.ನರಸೀಪುರ ಕ್ಷೇತ್ರದಿಂದ ಸೋಲು ಅನುಭವಿಸಿದ ನಂತರ ರಾಜಕೀಯವಾಗಿ ತೆರೆಮರೆಗೆ ಸರಿದಿರುವ ಎಚ್.ಸಿ.ಮಹದೇವಪ್ಪ ಮತ್ತೆ ಮುಖ್ಯವಾಹಿನಿಗೆ ಬರಲು ಲೋಕಸಭೆ ಚುನಾವಣೆಯಲ್ಲಿ ಕೋಲಾರ ಮೂಲಕ ರಂಗಪ್ರವೇಶಕ್ಕೆ ಮಾನಸಿಕವಾಗಿ ಸಿದಟಛಿತೆ ನಡೆಸಿದ್ದಾರೆ.
ಇತ್ತೀಚೆಗೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಹಾಗೂ ಕೇರಳ, ಉತ್ತರಪ್ರದೇಶ ಸೇರಿ 10 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿರುವ ಜೆಡಿಎಸ್ ಕ್ಷೇತ್ರಗಳನ್ನು ಪಡೆಯುವ ವಿಚಾರದಲ್ಲಿ ಬಿಗಿ ನಿಲುವು ಹೊಂದಿದ್ದು,ಹಾಲಿ ಕಾಂಗ್ರೆಸ್ ಸದಸ್ಯರಿದ್ದರೂ ಸರಿ ಮೈತ್ರಿಧರ್ಮದಡಿ ಬಿಟ್ಟುಕೊಡಲೇಬೇಕು ಎಂದು ಪಟ್ಟು ಹಿಡಿದಿದೆ.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ಜೆಡಿಎಸ್ ಬಯಸುವ ಹತ್ತು ಕ್ಷೇತ್ರಗಳ ಪಟ್ಟಿ ಸಹ ನೀಡಿದ್ದು, ಪ್ರತಿ ಕ್ಷೇತ್ರದ ರಾಜಕೀಯ ಸ್ಥಿತಿಗತಿ ಹಾಗೂ ಸ್ಥಳೀಯ ವಾತಾವರಣದ ಮಾಹಿತಿಯನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ.
ಕೋಲಾರ, ಮೈಸೂರು, ತುಮಕೂರು ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗಳಿಸಿರುವ ಮತಗಳ ಅಂಕಿ-ಸಂಖ್ಯೆ ನೀಡಿದ್ದಾರೆ. ಕೋಲಾರದಲ್ಲಿ ಹಾಲಿ ಕಾಂಗ್ರೆಸ್ ಸಂಸದ ಕೆ.ಎಚ್.ಮುನಿಯಪ್ಪ ಅವರಿದ್ದರೂ ಸತತ ಏಳು ಬಾರಿ ಗೆದ್ದಿರುವ ಅವರ ವಿರುದಟಛಿ ಕ್ಷೇತ್ರದಲ್ಲಿ ವಿರೋಧಿ ಅಲೆ ವ್ಯಾಪಕವಾಗಿದ್ದು ಈ ಬಾರಿ ಮೈತ್ರಿ ಅಭ್ಯರ್ಥಿಯಾದರೂ ಕಷ್ಟ ಎಂಬ ಮಾತುಗಳಿವೆ. ಇದೇ ವಿಚಾರ ಮುಂದಿಟ್ಟು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋಲಾರ ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದಾರೆ.
ಲೆಕ್ಕಾಚಾರದ ಅಂಕಿ-ಅಂಶ ಹೈಕಮಾಂಡ್‌ಗೆ: ಕೋಲಾರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಂಟು ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ಶಾಸಕರು ಆಯ್ಕೆಯಾದರೂ ಜೆಡಿಎಸ್‌ಗೆ ಒಟ್ಟು 5,03,627 ಮತ ಬಂದಿದ್ದು,ಕಾಂಗ್ರೆಸ್‌ಗೆ 4,28,280 ಮತ ಬಂದಿದೆ. ಮುಳಬಾಗಿಲಿನಲ್ಲಿ ಕೊತ್ತನೂರು ಮಂಜುನಾಥ್ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಮಾಡಿದ್ದ ನಾಗೇಶ್ 74213 ಮತ, ಚಿಂತಾಮಣಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಧಾಕರ್ 82080 ಮತ ಪಡೆದಿದ್ದು, ಈ ಇಬ್ಬರೂ ಕೆ.ಎಚ್.ಮುನಿಯಪ್ಪ ವಿರೋಧ ಬಣದಲ್ಲಿರುವುದರಿಂದ ಆ ಮತಗಳು ಜೆಡಿಎಸ್‌ಗೆ ಬರಲಿವೆ. ಹೀಗಾಗಿ, ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೆ ಜಯ ಖಚಿತ ಎಂಬ ಲೆಕ್ಕಾಚಾರ ಅಂಕಿ-ಅಂಶದ ಸಮೇತ ಕಾಂಗ್ರೆಸ್ ಹೈಕಮಾಂಡ್ ಮುಂದೆ ಗೌಡರು ಇಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಹದೇವಪ್ಪಗೆ ಆದ್ಯತೆ: ಕೋಲಾರದಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವಿಧಾನಸಭೆ ಟಿಕೆಟ್ ತಪ್ಪಿದ ಕೊತ್ತನೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ ಇತ್ಯರ್ಥಗೊಂಡರೆ ಜೆಡಿಎಸ್ ಅಭ್ಯರ್ಥಿಯಾಗಲು ಉತ್ಸುಕರಾಗಿದ್ದಾರೆ. ಕೆ.ಎಚ್. ಮುನಿಯಪ್ಪ ಅವರ ಕುಟುಂಬ ಸದಸ್ಯರೊಬ್ಬರೂ ಜೆಡಿಎಸ್ ಜತೆ ಸಂಪರ್ಕದಲ್ಲಿದ್ದು, ಸ್ಪರ್ಧೆಗೆ ಆಸಕ್ತಿ ಹೊಂದಿದ್ದಾರೆ. ಆದರೆ, ಗೌಡರ ಕುಟುಂಬಕ್ಕೆ ಆಪ್ತರಾಗಿರುವ ಎಚ್.ಸಿ.ಮಹದೇವಪ್ಪ ಅವರಿಗೆ ಜೆಡಿಎಸ್‌ನ ಮೊದಲ ಆದ್ಯತೆಯಾಗಿದೆ ಎಂದು ಹೇಳಲಾಗಿದೆ.
ಹಿಂದುಳಿದವರಿಗೂ ಸ್ಥಾನ: ಲೋಕಸಭೆ ಚುನಾವಣೆಯಲ್ಲಿ ಒರ್ವ ದಲಿತ, ಹಿಂದುಳಿದ, ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಜೆಡಿಎಸ್ ಲೆಕ್ಕಾಚಾರ. ಹೀಗಾಗಿಯೇ ರಾಜ್ಯದಲ್ಲಿ ಮೀಸಲು ಕ್ಷೇತ್ರವೊಂದು ಬಿಟ್ಟುಕೊಡಲು ಹಠ ಹಿಡಿದಿದೆ. ಚಾಮರಾಜನಗರ, ಕಲಬುರಗಿ, ವಿಜಯಪುರ,ಬಳ್ಳಾರಿ, ಕೋಲಾರ, ರಾಯಚೂರು, ಚಿತ್ರದುರ್ಗ ಕ್ಷೇತ್ರಗಳ ಪೈಕಿ ಜೆಡಿಎಸ್ ಶಕ್ತಿಯುತವಾಗಿರುವುದು ಕೋಲಾರದಲ್ಲಿ. ಹೀಗಾಗಿ, ಕೋಲಾರ ಮೀಸಲು ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ. ಅಲ್ಲಿ ಎಸ್‌ಸಿ ಅಭ್ಯರ್ಥಿ ಕಣಕ್ಕಿಳಿಸಿ, ಶಿವಮೊಗ್ಗದಲ್ಲಿ ಹಿಂದುಳಿದ ವರ್ಗದ ಮಧು ಬಂಗಾರಪ್ಪ ಅವರಿಗೆ ಟಿಕೆಟ್ ಕೊಟ್ಟು ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿಗೆ ಉತ್ತರಪ್ರದೇಶದಲ್ಲಿ ಟಿಕೆಟ್ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಾಸನಕ್ಕೆ ಪ್ರಜ್ವಲ್ ಆದರೆ ಮಂಡ್ಯಕ್ಕೆ ನಿಖೀಲ್?
ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಖಚಿತವಾಗಿದ್ದು, ಮಂಡ್ಯದಿಂದ ನಿಖೀಲ್ ಕುಮಾರಸ್ವಾಮಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಈಗಾಗಲೇ ಮಂಡ್ಯ ಕ್ಷೇತ್ರದಲ್ಲಿ ಒಂದೆರಡು ಬಾರಿ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡು ತಮ್ಮ ಆಗಮನದ ಮುನ್ಸೂಚನೆ ಸಹ ನೀಡಿದ್ದಾರೆ. ಹಾಸನ ಮೊಮ್ಮಗನಿಗೆ ಬಿಟ್ಟುಕೊಟ್ಟು ಮಂಡ್ಯ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧೆಗೆ ಬಯಸಿದ್ದರಾದರೂ ನಿಖೀಲ್ ಅಲ್ಲಿಂದ ಸ್ಪರ್ಧೆ ಮಾಡುವ ಬಯಕೆ ಹೊಂದಿರುವುದರಿಂದ ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಶಿಫ್ಟ್ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೂಂದು ಮೂಲದ ಪ್ರಕಾರ ದೇವೇಗೌಡರು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಇನ್ನೂ ಅಂತಿಮಗೊಂಡಿಲ್ಲ. ಕಾಂಗ್ರೆಸ್ ಸೇರಿ ಮಹಾಘಟಬಂಧನ್ ನಾಯಕರು ದೇಶವ್ಯಾಪಿ ಪ್ರಚಾರದಲ್ಲಿ ತೊಡಗುವಂತೆ ಗೌಡರಿಗೆ ಮನವಿ ಮಾಡಿವೆ. ಹೀಗಾಗಿ ಗೊಂದಲದಲ್ಲಿದ್ದಾರೆ ಎನ್ನಲಾಗಿದೆ.
– ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.