ಗ್ರಾಪಂ ನೌಕರರಿಗೆ ರಾಜ್ಯ ಸರ್ಕಾರದಿಂದಲೇ ವೇತನ
Team Udayavani, Mar 3, 2018, 6:35 AM IST
ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಬಹುದಿನ ಬೇಡಿಕೆಯಾದ ರಾಜ್ಯ ಸರ್ಕಾರದಿಂದಲೇ ವೇತನವನ್ನು ನೇರ ಬ್ಯಾಂಕ್ ಖಾತೆಗೆ ಪಾವತಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಿರುವ ಸರ್ಕಾರ ಮಾರ್ಚ್ 1ರಿಂದಲೇ ಆರ್‌ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸೂಚನೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್,ರಾಜ್ಯದ 6024 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಬಿಲ್ ಕಲೆಕ್ಟರ್, ಕ್ಲರ್ಕ್/ಡಾಟಾ ಎಂಟ್ರಿ ಆಪರೇಟರ್, ವಾಟರ್‌ಮನ್, ಪಂಪ್ ಆಪರೇಟರ್, ಪಂಪ್ ಮೆಕ್ಯಾನಿಕ್, ಜವಾನ ಮತ್ತು ಸ್ವತ್ಛತಾಗಾರರು ಸೇರಿ ಒಟ್ಟು 50,114 ನೌಕರರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ನೌಕರರಿಗೆ ಉದ್ಯೋಗ ಭದ್ರತೆ ಇಲ್ಲದೆ ವೇತನ ಸರಿಯಾಗಿ ಸಿಗದ ಸ್ಥಿತಿ ಇತ್ತು. ನಮ್ಮ ಸರ್ಕಾರ ಬಂದ ನಂತರ ಕಾರ್ಮಿಕ ಇಲಾಖೆ ಪ್ರಕಾರ ಕನಿಷ್ಠ ವೇತನ ನಿಗದಿಪಡಿಸಲಾಯಿತು. ಕನಿಷ್ಠ ವೇತನವೂ ಕಾಲ ಕಾಲಕ್ಕೆ ಸಿಗುತ್ತಿಲ್ಲವೆಂಬ ದೂರು ಕೇಳಿ ಬಂದಿತ್ತು. ಹೀಗಾಗಿ, ಸರ್ಕಾರದ ವತಿಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಅವರಿಗೆ ಉದ್ಯೋಗ ಭದ್ರತೆಯೂ ಸಿಕ್ಕಿದಂತಾಯಿತು ಎಂದು ಹೇಳಿದರು.
ಗ್ರಾಪಂ ನೌಕರರು ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ನೈರ್ಮಲ್ಯ ಮತ್ತು ಪಂಚಾಯಿತಿ ಸಂಪನ್ಮೂಲ ಸಂಗ್ರಹಣೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ.
ಹೀಗಾಗಿ, ಅವರಿಗೆ ಉದ್ಯೋಗ ಭದ್ರತೆ ಹಾಗೂ ವೇತನ ಸಕಾಲದಲ್ಲಿ ಸಿಗುವಂತೆ ಮಾಡುವುದು ಸರ್ಕಾರದ ಕರ್ತವ್ಯ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.