ಮಂಡೂರು ಗ್ರಾ.ಪಂ.ನಲ್ಲಿ ಗ್ರಾಮ ಸಭೆ
Team Udayavani, Jul 14, 2017, 11:21 AM IST
ಮಹದೇವಪುರ: ಮಳೆಗಾಲ ಆರಂಭವಾಗಿರುವುದರಿಂದ ಡೆಂಘಿ, ಚಿಕನ್ ಗುನ್ಯಾದಂಥ ಕಾಯಿಲೆಗಳು ಜನರನ್ನು ಬಾಧಿಸುತ್ತವೆ. ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ರೋಗ ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಅಧಿಕಾರಿಗಳನ್ನು ಒತ್ತಾಯಿಸಿದರು.
ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ ಮಂಡೂರು ಗ್ರಾಮ ಪಂಚಾಯಿತಿಯ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, “ಮಳೆಗಾಲ ಆರಂಭವಾಗುತ್ತಲೇ ತೇವಾಂಶಯುಕ್ತ ವಾತಾವರಣ ನಿರ್ಮಾಣಗೊಂಡು ಸೊಳ್ಳೆಗಳು, ಕ್ರಿಮಿಕೀಟಗಳು ಹೆಚ್ಚು ಉತ್ಪತ್ತಿಯಾಗುತ್ತವೆ. ಡೆಂಘಿ ಮತ್ತು ಚಿಕನ್ ಗುನ್ಯ ಸೇರಿದಂತೆ ಇತರೆ ಖಾಯಿಲೆಗಳು ಜನರನ್ನು ಬಾಧಿಸಲಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಅಗತ್ಯ. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು,’ ಎಂದು ಸೂಚಿಸಿದರು.
ಬೋಮ್ಮೆನಹಳ್ಳಿಯಲ್ಲಿರುವ ರುದ್ರ ಭೂಮಿ ಒತ್ತುವರಿಯಾಗಿದೆ ಎಂದು ಮೋಜಣಿದಾರ ಮರಿಗೌಡ ಎಂಬುವವರು ಸರ್ಕಾರಕ್ಕೆ ವರದಿ ನೀಡಿರುವುದರಿಂದ ರೈತರು ನ್ಯಾಯಾಲಯಕ್ಕೆ ಅಲೆಯುವಂತಾಗಿದೆ ಎಂದು ಉಪತಹಸಿಲ್ದಾರ್ ಭಾಗ್ಯಮ್ಮ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಧ್ಯಪ್ರವೇಶಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆಂಪರಾಜು, ಸಾರ್ವಜನಿಕರನ್ನು ಸಮಾಧಾನಪಡಿಸಿದರು. ಮೋಜಿಣಿದಾರ ಮರಿಗೌಡ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ತೆರಯಲಾಗಿರುವ ಬಾರ್ ಅನ್ನು ತೆರವು ಮಾಡಲು ಮಂಡೂರು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಒಮ್ಮತದೊಂದಿಗೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಗ್ರಾಮಸಭೆಗೆ 29 ಇಲಾಖೆಯ ಬಹುತೇಕ ಅಧಿಕಾರಿಗಳು ಹಾಜರಾಗಿದ್ದರು. ಗೈರಾಗಿದ್ದ ಆಹಾರ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಪರಾಜು ಒತ್ತಾಯಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿಕೃಷ್ಣಪ್ಪನೋಟಿಸ್ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ರಿಜಾನ್ ಅರ್ಷದ್, ನಾರಾಯಣ ಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ನರಸಿಂಹ ಮೂರ್ತಿ, ಮಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ್ ಗೌಡ, ಸದಸ್ಯ ಬೊಮ್ಮನಹಳ್ಳಿ ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.