ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ
Team Udayavani, Oct 24, 2021, 10:50 AM IST
ಬೆಂಗಳೂರು: ರಾಜ್ಯದ ಕರಕುಶಲ ಅಭಿ ವೃದ್ಧಿ ನಿಗಮವು ಇತ್ತೀಚೆಗೆ ದುಬೈನಲ್ಲಿ ಆಯೋಜಿಸಿದ್ದ ಎಕ್ಸ್ ಪೋಗೆ ಅಭೂತ ಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಮೌದ್ಗಿಲ್ ಸಂತಸ ವ್ಯಕ್ತಪಡಿಸಿದ್ದಾರೆ. ದುಬೈ ಎಕ್ಸ್ ಪೋದಲ್ಲಿ ನಿಗಮದಿಂದ ಮಳಿಗೆಯನ್ನು ತೆರೆಯಲಾಗಿತ್ತು.
ಶ್ರೀಗಂಧದ ಎಣ್ಣೆ, ಚನ್ನಪಟ್ಟಣದ ಆಟಿಕೆಗಳು ಸೇರಿದಂತೆ ಅನೇಕ ರಾಜ್ಯದ ಕರಕುಶಲತೆಗೆ ದೇಶ ವಿದೇಶಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಕಾವೇರಿ ಬ್ರ್ಯಾಂಡ್ ಅನ್ನು ಬೇರೆಡೆ ಕೂಡ ತೆರೆಯಲು ಆಸಕ್ತಿ ತೋರಿದ್ದಾರೆ ಎಂದು ಹೇಳಿದ್ದಾರೆ. ಹಲವರು ಪ್ರಾಂಚೈಸಿಗಳನ್ನು ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.
ಮುಂದಿನ ದಿನಗಳಲ್ಲಿ ಹೊರ ರಾಜ್ಯಗಳಲ್ಲಿಯೂ ನಿಗಮದ ವಹಿವಾಟುಗಳನ್ನು ನಡೆಸಲು ಅವಕಾಶ ದೊರಕಿಸಿಕೊಡಲಾಗುವುದು. ದುಬೈ ಎಕ್ಸ್ ಪೋನಲ್ಲಿ ಭಾಗವಹಿಸಲು ಅವಕಾಶ ನೀಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ:- ಕಸಾಪ ಅಧ್ಯಕ್ಷ ಸ್ಥಾನ ಮಹಿಳೆಗೆ ನೀಡಿ: ಸರಸ್ವತಿ
ಹೂಡಿಕೆದಾರರ ಆಕರ್ಷಣೆಗೆ ಸಜ್ಜು: ದುಬೈನಲ್ಲಿ ಒಂದು ವಾರಗಳ ಕಾಲ ಪ್ರದರ್ಶನ- ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ದುಬೈ ಎಕ್ಸ್ ಪೋದಲ್ಲಿ ಭಾಗವಹಿಸಿದ್ದ 192ಕ್ಕೂ ಹೆಚ್ಚಿನ ಸದಸ್ಯ ರಾಷ್ಟ್ರಗಳಿಗೆ ಶ್ರೀಮಂತ ಪ್ರವಾಸೋ ದ್ಯಮ ಮತ್ತು ಸಾಂಸ್ಕೃತಿಕ ವೈವಿದ್ಯತೆ ಜೊತೆಗೆ ವ್ಯಾಪಾರ ಮತ್ತು ಹೂಡಿಕೆ ಸಾಮರ್ಥ್ಯವನ್ನು ಪ್ರದರ್ಶಿಸಿತು. 2020ರ ನವೆಂ ಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಭೆ ಘೋಷಿಸಲಾಗಿದ್ದು, ಅದರಲ್ಲಿಯೂ ಭಾಗವಹಿಸಲಿದ್ದು ಹೆಚ್ಚಿನ ವ್ಯಾಪಾರ ವಹಿ ವಾಟಿಗೆ ಕಾರಣವಾಗಬಹುದು. ಅದೇ ರೀತಿ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆದಾರರನ್ನು ಆಕರ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.