ಅದಮ್ಯ ಚೇತನದಿಂದ ಹಸಿರು ಜೀವನ ಕ್ರಮ
Team Udayavani, Sep 11, 2018, 12:28 PM IST
ಬೆಂಗಳೂರು: “ಹಸಿರು ಜೀವನ ಕ್ರಮ’ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಅದನ್ನು ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಣೆ ನೀಡುವ ಉದ್ದೇಶದಿಂದ ಅದಮ್ಯ ಚೇತನ ಸಂಸ್ಥೆಯು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ಗ್ರೂಪ್‌ನ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ “ನೇಚರ್-ಸೈನ್ಸ್ ಅವೇರ್‌ನೆಸ್ ಟೆಸ್ಟ್-2018’ರಲ್ಲಿ ನೂರಾರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಅದಮ್ಯ ಚೇತನ ಸಂಸ್ಥೆಯ ಮಹಾ ಪೋಷಕರು ಹಾಗೂ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್, ಜುಲೈ 29ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಭಾನುವಾರ (ಸೆ.9) ನಡೆದ “ನೇಚರ್-ಸೈನ್ಸ್ ಅವೇರ್‌ನೆಸ್ ಟೆಸ್ಟ್-2018’ರಲ್ಲಿ ಬೆಂಗಳೂರಿನ ವಿವಿಧ 30ಕ್ಕೂ ಹೆಚ್ಚು ಶಾಲೆಗಳಿಂದ 1,300ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಈ ವೇಳೆ ಅದಮ್ಯ ಚೇತನದ ಶೂನ್ಯ ತ್ಯಾಜ್ಯ ಮತ್ತು ಹೊಗೆ ಮುಕ್ತ “ಬೃಹತ್ ಅಡುಗೆ ಮನೆ’ ಗೆ (ಮೆಗಾ ಕಿಚನ್) ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡರು.
ಈ ಸಂದರ್ಭದಲ್ಲಿ ಐಐಎಸ್ಸಿಯ ಪ್ರೊ. ಟಿ.ವಿ. ರಾಮಚಂದ್ರ ಅವರು ತಮ್ಮ ತಜ್ಞರ ತಂಡದೊಂದಿಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಜೊತೆಗೆ ಸಂವಾದ ನಡೆಸಿದರು. ಬಳಿಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಮ್ಮ ದಿನನಿತ್ಯದ ಬದುಕಿನಲ್ಲಿ ಹಸಿರು ಜೀವನ ಕ್ರಮ ಅಳವಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಂಡರು.
ಅದ್ಯಮ ಚೇತನದ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್, ಯುವ ಮನಸ್ಸುಗಳಲ್ಲಿ ಹಸಿರುವ ಜೀವನ ಕ್ರಮದ ಬಗ್ಗೆ ಅರಿವು ಮೂಡಿಸುವುದು ನಮ್ಮ ಕಾರ್ಯಕ್ರಮದ ಉದ್ದೇಶವಾಗಿದೆ. ಆ ಮೂಲಕ ವಿದ್ಯಾರ್ಥಿ-ಯುವಕರು ಹಸಿರು ಜೀವನ ಕ್ರಮವನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಒಂದು ಹೆಜ್ಜೆ ಮುಂದಿಡಬೇಕು ಮತ್ತು ಈ ಪ್ರಯಾಣವನ್ನು ಅವರು ಮುಂದುವರಿಸಬೇಕು ಅನ್ನುವುದು ನಮ್ಮ ಗುರಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.