Engineers:150 ಎಂಜಿನಿಯರ್‌ಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
Team Udayavani, Sep 5, 2023, 3:40 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರ್ ವಿಭಾಗದ ಅಧಿಕಾರಿಗಳ ಕಾರ್ಯದೊತ್ತಡ ಮತ್ತಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ (ಬಿಬಿಎಂಪಿ)ಮುಂದಾಗಿದೆ. ಈ ಹಿಂದೆ ಮಂಜೂರಾ ಗಿಯೂ ಖಾಲಿಯಿರುವ 150 ಎಂಜಿನಿ ಯರ್‌ಗಳನ್ನು ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಮೂಲಕ ನೇರ ನೇಮ ಕಾತಿ ಮಾಡಿಕೊಳ್ಳಲು ಸಹಮತಿ ನೀಡಿದೆ.
ಆ.21ರಂದು ಆರ್ಥಿಕ ಇಲಾಖೆ ಕೂಡ ಎಂಜಿನಿಯರ್‌ಗಳ ನೇಮಕಾತಿಗೆ ಸಹಮತಿ ನೀಡಿದ್ದು, ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅನುಮೋದಿಸಿ ದ್ದಾರೆ. ಹೀಗಾಗಿ, ಶೀಘ್ರ ಪಾಲಿಕೆಯಲ್ಲಿ ಖಾಲಿಯಿರುವ 100 ಸಹಾಯಕ ಅಭಿಯಂತರರು (ಸಿವಿಲ್)ಮತ್ತು 50 ಕಿರಿಯ ಎಂಜಿನಿಯರ್‌ಗಳ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
2009-10ರಲ್ಲಿ ನೇಮಕಾತಿ ನಡೆದಿತ್ತು: 13 ವರ್ಷ ನಂತರ ನಾಗರಾಭಿವೃದ್ಧಿ ಇಲಾ ಖೆ ಬಿಬಿಎಂಪಿಯಲ್ಲಿ ಖಾಲಿರುವ 150 ಎಂಜಿನಿಯರಿಂಗ್ ಹುದ್ದೆಗಳ ನೇಮಕಾತಿ ಮುಂದಾಗಿದೆ. ಈ ಹಿಂದೆ 2009-10ರಲ್ಲಿ ನೇಮಕಾತಿ ನಡೆದಿತ್ತು. ಆಗ ಬಿಬಿಎಂಪಿಗೆ 120 ಕಾಯಂ ಎಂಜಿನಿಯರ್‌ಗಳನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಂಡಿ ತ್ತು. ಅದೇ ಕೊನೆ. ಆ ನಂತರ ಅಲ್ಪಾವಧಿಗೆ ನಿಯೋ ಜಿತ ಎಂಜಿನಿಯರ್‌ಗಳಿಂದ ಖಾಲಿ ಹುದ್ದೆ ಭರ್ತಿ ಮಾಡಲಾಗಿತ್ತು.
ಕೆಪಿಎಸ್‌ಸಿ ಮೂಲಕ ನೇಮಕ ಕುತೂಹಲ: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಮೂಲಕ ಗುತ್ತಿಗೆ ಆಧಾರದಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ ನಡೆಸಿತ್ತು. ಆದರೆ, ಇದೀಗ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಸಹಾಯಕ ಮತ್ತು ಕಿರಿಯ ಎಂಜಿನಿ ಯರ್‌ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿ ರುವುದು ಕುತೂಹಲ ಮೂಡಿಸಿದೆ. ಮೊದಲ ಹಂತದಲ್ಲಿ ಪಾಲಿಕೆಯಲ್ಲಿ ಮಂಜೂರಾಗಿ ಖಾಲಿ ಇರುವ ನೂರು ಸಹಾಯಕ ಅಭಿಯಂತ ರರು ಮತ್ತು ಐವತ್ತು ಕಿರಿಯ ಅಭಿಯಂ ತರರನ್ನು ಕೆಪಿಎಸ್‌ಸಿ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸಹ ಮತ ನೀಡಿದ್ದು, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ (ಬಿಬಿಎಂಪಿ)ಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀ ಸಾಗರ್ ಸುತ್ತೋಲೆಯನ್ನೂಹೊರ ಡಿಸಿ ದ್ದಾರೆ. ಜತೆಗೆ ಈ ಹುದ್ದೆಗಳು ಭರ್ತಿ ಯಾದ ನಂತರ ಪಾಲಿಕೆಯಲ್ಲಿ ನಿಯೋಜ ನೆ ಮತ್ತು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಸಹಾಯಕ ಮತ್ತು ಕಿರಿಯ ಎಂಜಿನಿಯರ್‌ಗಳನ್ನು ಪ್ರಮಾಣಕ್ಕೆ ಅನುಗುಣವಾಗಿ ಕಡ್ಡಾಯವಾಗಿ ಕಡಿಮೆ ಮಾಡಿ ಕೊಳ್ಳುವಂತೆ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.