ಆಡಳಿತ ಸುಧಾರಣೆಗೆ ಗ್ರೂಪ್ ಮೊಬೈಲ್ ಆ್ಯಪ್
Team Udayavani, Aug 28, 2018, 12:46 PM IST
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಬಾಕಿ ಇರುವ ಖಾತೆ ಅರ್ಜಿಗಳ ಶೀಘ್ರ ವಿಲೇವಾರಿ ಮಾಡಲು ಹಾಗೂ ಕಾಲಕಾಲಕ್ಕೆ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ “ಗ್ರೂಪ್ ಮೊಬೈಲ್ ಆ್ಯಪ್’ಗೆ ಚಾಲನೆ ನೀಡಿದೆ.
ಮುಖ್ಯವಾಗಿ ಕಂದಾಯ ಇಲಾಖೆಯಲ್ಲಿ ಹಲವು ಬದಲಾವಣೆ ತರುವ ಸಂಬಂಧ ಈ ಆ್ಯಪ್ ರೂಪಿಸಿದ್ದು, ನಗರದ ವಿಶ್ವೇಶ್ವರಯ್ಯ ಗೋಪುರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕರೀಗೌಡ ಅವರು ಸರ್ವೇ ಮತ್ತು ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವ ಮೂಲಕ ಆ್ಯಪ್‌ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಖಾತೆಗಳ ಅರ್ಜಿ ವಿಲೇವಾರಿ ವಿಳಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಲೇ ಇವೆ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರ ಅರ್ಜಿ ವಿಲೇವಾರಿಗೆ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಕಾಲ ಕಾಲಕ್ಕೆ ಸಂಪರ್ಕ ಸಾಧಿಸಲು ಈ ವಿಶಿಷ್ಟ ಆ್ಯಪ್ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆಗಳಲ್ಲೂ ಇದನ್ನು ಜಾರಿಗೊಳಿಸುವುದಾಗಿ ತಿಳಿಸಿದರು.
ಕಾನ್ಫರೆನ್ಸ್ ಕಾಲ್ ಮೂಲಕ ಸಭೆ: ಶೀಘ್ರ ಅರ್ಜಿ ವಿಲೇವಾರಿ ಮಾಡುವ ಸಂಬಂಧ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಸೋಮವಾರ ಬೆಳಗ್ಗೆ 9.30ಕ್ಕೆ ಎಲ್ಲ ಸಿಬ್ಬಂದಿಗಳೊಂದಿಗೆ ಕಾನ್ಫರೆನ್ಸ್ ಕಾಲ್ ಮೂಲಕ ಸಭೆ ನಡೆಯಲಿದೆ. ಅಧಿಕಾರಿಗಳು ತಾವಿರುವ ಸ್ಥಳದಿಂದಲೇ ಖಾತೆ ವಿಲೇವಾರಿ ಸೇರಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ನಿರ್ಲಕ್ಷ್ಯ ತೋರಿದರೆ ಕ್ರಮ: ಆಸ್ತಿಗಳಿಗೆ ಸಂಬಂಧಿಸಿದಂತೆ ಮ್ಯುಟಿಷನ್‌ಗಾಗಿ ಬಂದ 8,256 ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ. ಇದರಲ್ಲಿ ಹಲವು ಪ್ರಕರಣಗಳು ಎರಡು ದಶಕಗಳಷ್ಟು ಹಳೆಯವು. ಇವುಗಳ ಶೀಘ್ರ ವಿಲೇವಾರಿಗೆ ಪಣತೊಡಲಾಗಿದೆ. ಆಯಾ ತಾಲೂಕುಗಳಲ್ಲಿ ಆಗಿರುವ ಖಾತೆ ವಿಲೇವಾರಿ ಬಗ್ಗೆ ಕಂದಾಯ ಇಲಾಖೆ ವೈಬ್‌ಸೈಟ್‌ನಲ್ಲಿ ಮಾಹಿತಿ ದೊರೆಯಲಿದೆ. ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದರು.
ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು: ಭೂ ವ್ಯಾಜ್ಯ ಪ್ರಕರಣ ಇತ್ಯರ್ಥಕ್ಕೆ ಜಿಲ್ಲಾಡಳಿತ ಮುಂದಾಗಿದೆ. ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ 9,614 ಭೂ ವ್ಯಾಜ್ಯ ಪ್ರಕರಣಗಳಿದ್ದು, ಇದರಲ್ಲಿ 464 ಪ್ರಕರಣಗಳು ಹತ್ತು ವರ್ಷಗಳಷ್ಟು ಹಳೆಯದಾಗಿವೆ. ಈ ಎಲ್ಲ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥ ಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ಸ್ಪಷ್ಟಪಡಿಸಿದರು.
ಗ್ರೂಪ್ ಟಾಕ್‌ನಲ್ಲಿ ತಾಕೀತು: ಇದೇ ವೇಳೆ ಕೆಲ ಹೊತ್ತು ತಾಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ವೇ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಸಂಭಾಷಣೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ವೇ ಸ್ವೀಕೃತ ಅರ್ಜಿ ವಿಲೇವಾರಿ ವಿಳಂಬ ಸಂಬಂಧ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಯಾವುದೇ ರೀತಿಯ ನೆಪ ಹೇಳದ ಅರ್ಜಿಗಳ ಶೀಘ್ರ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು. ಈ ವೇಳೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.