ಕೃಷಿ ಭೂಮಿಯ ಸುತ್ತ ಮರ ಬೆಳೆಸಿ
Team Udayavani, May 5, 2019, 3:03 AM IST
ಬೆಂಗಳೂರು: ರೈತರು ತಮ್ಮ ಕೃಷಿ ಭೂಮಿಯಲ್ಲಿ ದ್ವಿದಳ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಇದರಿಂದ ಅವರು ಆರ್ಥಿಕವಾಗಿಯೂ ಲಾಭಗಳಿಸಲಿದ್ದಾರೆ ಎಂದು ಸಿರಿಧಾನ್ಯ ಬೆಳೆಗಾರ ಬಾಲನ್ ಹೇಳಿದರು.
ಲಾಲ್‌ಬಾಗ್‌ನಲ್ಲಿ ಗ್ರಾಮೀಣ ನ್ಯಾಚುರಲ್ ಮತ್ತು ಗ್ರಾಮೀಣ ಕುಟುಂಬ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಸಿರಿಧಾನ್ಯಗಳ ವೈಭವ ಹಾಗೂ ಸಾವಯುವ ಆಹಾರ ಮೇಳದಲ್ಲಿ ನಡೆದ “ಸಿರಿಧಾನ್ಯ ಹಾಗೂ ಕಾಡುಕೃಷಿ ಕುರಿತು ತರಬೇತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರು ಮೂರು ತಿಂಗಳು, ಆರು ತಿಂಗಳಿಗೆ ಒಂದು ಬೆಳೆಯನ್ನು ಬೆಳೆಯುವುದರಿಂದ ಭೂಮಿ ಸದಾ ಸಮೃದ್ಧಿಯಾಗಿರುತ್ತದೆ. ಎರೆಹುಳುವಿನ ಸಂಖ್ಯೆ ಸಹ ಹೆಚ್ಚಾಗುತ್ತದೆ. ಗೊಬ್ಬರದ ಕೊರತೆಯನ್ನೂ ಕಡಿಮೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಕೃಷಿ ಭೂಮಿಯ ಸುತ್ತ ಲಾಭ ನೀಡುವ ಮರಗಳನ್ನು ಬೆಳೆಸಿದರೆ ಅದರಿಂದಲೂ ಲಾಭ ಸಿಗುತ್ತದೆ ಎಂದರು. “ಸಿರಿಧಾನ್ಯದ ಬೆಳೆಗೆ ಉತ್ತಮ ಮಾರುಕಟ್ಟೆ ಇದೆ. ಇದನ್ನು ಬೆಳೆಯುವಾಗ ಯಾವುದೇ ರಾಸಾಯನಿಕಗಳನ್ನು ಬಳಸಬೇಡಿ’ ಎಂದು ಸಿರಿಧಾನ್ಯ ಬೆಳೆದು ಉತ್ತಮ ಲಾಭಗಳಿಸಿರು ಬೆಳೆಗಾರ ಲಕ್ಷ್ಮೀನಾರಾಯಣ್ ಸಲಹೆ ನೀಡಿದರು.
ಚಿಕ್ಕಬಳ್ಳಾಪುರದ ಕೃಷಿ ಭೂಮಿಯಲ್ಲಿ ಐದು ರೀತಿಯ ಸಿರಿಧಾನ್ಯಗಳನ್ನು ಬೆಳೆಯಲಾಗಿತ್ತು. ಹೆಚ್ಚು ನೀರಿನ ಅವಶ್ಯಕತೆ ಇಲ್ಲದೆ ಇದನ್ನು ಬೆಳೆಯಬಹುದು. ಸಿರಿಧಾನ್ಯಗಳ ಇಳುವರಿ ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ, ನಷ್ಟವಿಲ್ಲದಷ್ಟು ಇಳುವರಿ ಸಿಕ್ಕಿದೆ ಎಂದು ಹೇಳಿದರು.
ಗ್ರಾಮೀಣ ಕುಟುಂಬದ ಸಂಸ್ಥಾಪಕ ಎಂ.ಎಚ್. ಶ್ರೀಧರಮೂರ್ತಿ ಮಾತನಾಡಿ, ಕೃಷಿ ವಿವಿಗಳು ನೈಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ಸಂಶೋಧನೆ ನಡೆಸುತ್ತಿಲ್ಲ. ಈಗ ಸಿರಿಧಾನ್ಯ ಬೆಳೆಗಳನ್ನು ಹೈಬ್ರಿಡ್ ಮಾಡಲು ಪ್ರಾರಂಭಿಸಿದ್ದು, ಬೆಳೆಯ ಪ್ರಮಾಣವನ್ನಷ್ಟೇ ಪರಿಗಣಿಸಲಾಗುತ್ತಿದೆ. ಆದರೆ, ಅದರ ಸತ್ವವನ್ನು ನೋಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.