ಜಿಎಸ್‌ಟಿ: ಕೇಂದ್ರದ ವಿರುದ್ಧ ಎಚ್‌ಡಿಡಿ ಅಸಮಾಧಾನ
Team Udayavani, Apr 9, 2018, 6:05 AM IST
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ಜಾರಿ(ಜಿಎಸ್‌ಟಿ) ಮತ್ತು ನೋಟು ಅಮಾನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಇದರಿಂದ ವ್ಯಾಪಾರಿಗಳು ಮಾತ್ರವಲ್ಲದೆ, ಜನಸಾಮಾನ್ಯರಿಗೂ ಸಾಕಷ್ಟು ತೊಂದರೆಯಾಗಿದೆ ಎಂದು ಹೇಳಿದ್ದಾರೆ.
ಬಸವನಗುಡಿ ವಿಧಾನಸಭಾ ಕ್ಷೇತ್ರದ ಗಿರಿನಗರ ಅವಧಾನಿ ಕನ್ವೆನÒನ್ ಸೆಂಟರ್‌ನಲ್ಲಿ ಭಾನುವಾರ ಜೈನ್ ಮೈನಾರಿಟಿ ಟ್ರಸ್ಟ್ ಹಮ್ಮಿಕೊಂಡಿದ್ದ ಮಾರ್ವಾರ (ಮಾರ್ವಾಡಿ) ಜನಾಂಗದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಿಎಸ್‌ಟಿ ಜಾರಿಗೆ ತಂದಿದ್ದು, ಇದರಿಂದ ಸಾಕಷ್ಟು ಗೊಂದಲಗಳುಂಟಾಗಿ ಜನ ಸಾಮಾನ್ಯರು ಮತ್ತು ವ್ಯಾಪಾರಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಈಗ ಇದು ಕೇಂದ್ರ ಸರ್ಕಾರಕ್ಕೆ ಮನವರಿಕೆಯಾಗಿದೆ. ಮೊದಲೇ ಯೋಚಿಸಿದ್ದರೆ ಸಮಸ್ಯೆಯಾಗದಂತೆ ನೋಡಿಕೊಳ್ಳಬಹುದಿತ್ತು ಎಂದರು.
ಅದೇರೀತಿ ನೋಟು ಅಮಾನ್ಯ ಕ್ರಮವೂ ಸಾಕಷ್ಟು ತೊಂದರೆಗಳನ್ನುಉಂಟುಮಾಡಿತು. ನಗದು ರಹಿತ ವಹಿವಾಟಿಗೆ ಆದ್ಯತೆ ನೀಡುವುದಾಗಿ ಕೇಂದ್ರ ಭರವಸೆ ನೀಡಿತಾದರೂ ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ. ಅದೇ
ರೀತಿ ಮೇಕ್ ಇನ್ ಇಂಡಿಯೂ ಕೂಡ ಯಶಸ್ಸು ಕಂಡಿಲ್ಲ. ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿದ್ದ ಕೆಲವು ಪಕ್ಷಗಳು ಸರ್ಕಾರದ ಕೆಲವು ಜನವಿರೋಧಿ ನೀತಿಗಳ ವಿರುದ್ಧ ತಿರುಗಿ ಬಿದ್ದಿರುವ ಕಾರಣ 2014ರಲ್ಲಿ ಕೇಂದ್ರ ಸರ್ಕಾರಕ್ಕಿದ್ದ ಅಧಿಕಾರ ಈಗ
ಇಲ್ಲದಂತಾಗಿದೆ ಎಂದು ಹೇಳಿದರು.
ಈ ಬಾರಿ ಜೆಡಿಎಸ್ ಸರ್ಕಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆಂಬ ಭರವಸೆಯಿದೆ. ರಾಜ್ಯದಲ್ಲಿ ಕಳೆದ 10 ವರ್ಷ ಅಧಿಕಾರ ನಡೆಸಿದ ರಾಷ್ಟ್ರೀಯ ಪಕ್ಷಗಳು ಮತ್ತು ಅವುಗಳ ಕಾರ್ಯವೈಖರಿ ಬಗ್ಗೆ ಜನ ಬೇಸರಗೊಂಡಿದ್ದು, ರಾಜ್ಯದಲ್ಲಿ ಸ್ಥಳೀಯರಿಗೆ ಅನುಕೂಲವಾಗಬೇಕಾದರೆ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಹೀಗಾಗಿಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿ ಹಲವರು
ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.