ಜಿಎಸ್‌ಟಿ ರಿಟರ್ನ್ಸ್ ದಂಡ ಅವಧಿ ವಿಸ್ತರಣೆಗೆ ಆಗ್ರಹ

Team Udayavani, Oct 6, 2017, 11:45 AM IST

gst.jpg

ಬೆಂಗಳೂರು: ನೂತನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ಮಾಸಿಕ ವಹಿವಾಟಿನ ವಿವರ (ರಿಟರ್ನ್ಸ್) ಸಲ್ಲಿಕೆಯಲ್ಲಿನ ವಿಳಂಬಕ್ಕೆ ದಂಡ ಹಾಕುವುದನ್ನು 2018ರ ಮಾರ್ಚ್‌ವರೆಗೆ ಮುಂದೂಡುವಂತೆ ವ್ಯಾಪಾರ- ವಹಿವಾಟುದಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಫ್ಕೆಸಿಸಿಐ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಎಸ್‌ಟಿ ಕುರಿತ ಸಂವಾದದಲ್ಲಿ ಜಿಎಸ್‌ಟಿ ವ್ಯವಸ್ಥೆಯಲ್ಲಿನ ಲೋಪಗಳು, ಅಡಚಣೆಗಳ ಬಗ್ಗೆ ವ್ಯಾಪಾರ, ವಹಿವಾಟುದಾರರು ಅಳಲು ತೋಡಿಕೊಂಡರು.

ಎಫ್ಕೆಸಿಸಿಐ ಅಧ್ಯಕ್ಷ ಕೆ.ರವಿ ಮಾತನಾಡಿ, “ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆದಾರರು ಜಿಎಸ್‌ಟಿಯಡಿ ವ್ಯವಹರಿಸಲು ಅಗತ್ಯವಾದ ಮಾಹಿತಿ ತಂತ್ರಜ್ಞಾನ ಕೌಶಲ್ಯವನ್ನು ಇನ್ನಷ್ಟೇ ಅಳವಡಿಸಿಕೊಳ್ಳಬೇಕಿದೆ. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಲಿದೆ. ಮಾಹಿತಿ ಹಾಗೂ ನಿರ್ವಹಣೆ ಸಮಸ್ಯೆಯಿಂದಾಗಿ ವ್ಯಾಪಾರಿಗಳು ಮಾಸಿಕ ವಹಿವಾಟಿನ ವಿವರ ದಾಖಲಿಸುವಲ್ಲಿ ಲೋಪಗಳಾಗುತ್ತಿವೆ.

ಇದನ್ನು ಸರಿಪಡಿಸಿಕೊಳ್ಳುವ ಕಾರ್ಯಕ್ಕೆ ಅಧಿಕಾರಿಗಳು ನೆರವಾಗಬೇಕು. ರಿಟರ್ನ್ಸ್ ಸಲ್ಲಿಕೆಯಲ್ಲಿನ ವಿಳಂಬಕ್ಕೆ ದಂಡ ಹಾಕುವುದನ್ನು ಮುಂದಿನ ಮಾರ್ಚ್‌ವರೆಗೆ ವಿನಾಯ್ತಿ ನೀಡಿದರೆ ಅನುಕೂಲವಾಗಲಿದೆ ಎಂದು ಹೇಳಿದರು. ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಸಂಪತ್‌ರಾಮನ್‌, “ನೂತನ ಜಿಎಸ್‌ಟಿ ವ್ಯವಸ್ಥೆಯಡಿ ವ್ಯವಹರಿಸುವಲ್ಲಿ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮೊದಲೇ ಅಂದಾಜು ಮಾಡದ ಕಾರಣ ಸಮಸ್ಯೆಗಳು ತೀವ್ರವಾಗಿವೆ.

ಇವುಗಳಿಗೆ ಪರಿಹಾರ ಕಂಡುಕೊಳ್ಳದೆ ವ್ಯಾಪಾರಿಗಳ ಮೇಲೆ ದಂಡ ವಿಧಿಸುವುದು ಎಷ್ಟು ಸರಿ ಎಂದು ಹೇಳಿದರು. ರಾಜ್ಯ ಬಿಜೆಪಿ ಆರ್ಥಿಕ ವಿಭಾಗ ಮುಖ್ಯಸ್ಥ ವಿಶ್ವನಾಥ್‌ ಭಟ್‌ ಮಾತನಾಡಿ, ಜಿಎಸ್‌ಟಿ ವ್ಯವಸ್ಥೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳದೆ ಅನಗತ್ಯವಾಗಿ ವಿರೋಧಿಸುವುದು ಸರಿಯಲ್ಲ. ಹೊಸ ವ್ಯವಸ್ಥೆಯಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಆದಾಯ ಹೆಚ್ಚಾಗಲಿದೆ. ಇದನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದು. ಒಂದು ವರ್ಷದ ಬಳಿಕ ಜಿಎಸ್‌ಟಿಯು ಆರ್ಥಿಕ ಪ್ರಗತಿಗೆ ನೆರವಾಗಲಿದೆ ಎಂದು ತಿಳಿಸಿದರು.

ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ಜಿಎಸ್‌ಟಿ ವ್ಯವಸ್ಥೆಯನ್ನು ಆರ್‌ಬಿಐ ಮಾಜಿ ಗವರ್ನರ್‌ ರಂಗರಾಜನ್‌ ಸ್ವಾಗತಿಸಿದ್ದಾರೆ. ಆರಂಭದಲ್ಲಿ ಕೆಲ ಸಮಸ್ಯೆಗಳು ಎದುರಾದರೂ ಅವುಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ವ್ಯಾಪಾರ- ವ್ಯವಹಾರಸ್ಥರ ಸಮಸ್ಯೆ, ಅಳಲು, ಸಲಹೆಯನ್ನು ಜಿಎಸ್‌ಟಿ ಪರಿಷತ್‌ನ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಲೆಹರ್‌ಸಿಂಗ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.