ಅತಿಥಿ ಉಪನ್ಯಾಸಕರ ಕಾಯಂಗೆ ಒತ್ತಡ: ಭರವಸೆ
Team Udayavani, Apr 28, 2017, 12:08 PM IST
ಬೆಂಗಳೂರು: ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರ ಸೇವೆ ಕಾಯಂಗೊಳಿಸುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ತರಲು ಪ್ರಯತ್ನಿಸುವುದಾಗಿ ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಭರವಸೆ ನೀಡಿದ್ದಾರೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಶೀಘ್ರವೇ ಸಂಘದ ಪದಾಧಿಕಾರಿಗಳನ್ನು ಒಳಗೊಂಡ ನಿಯೋಗ ಕರೆದೊಯ್ದು, ಮುಖ್ಯಮಂತ್ರಿಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಡುತ್ತೇವೆ. ಸದನದಲ್ಲೂ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಹೇಳಿದರು.
ಪರಿಷತ್ ಜೆಡಿಎಸ್ ಉಪನಾಯಕ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ, ಕೋರ್ಟ್ ಆದೇಶದಂತೆ ಅರೆಕಾಲಿಕ ಉಪನ್ಯಾಸಕರ, ಜೆಒಸಿ ಕೋರ್ಸ್ಗಳ ಅಧ್ಯಾಪಕರನ್ನು ಕಾಯಂ ಮಾಡಲಾಗಿತ್ತು. ಅದರಂತೆ ಈಗ ಅತಿಥಿ ಉಪನ್ಯಾಸಕರನ್ನೂ ಕಾಯಂ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ 13,557 ಅತಿಥಿ ಉಪನ್ಯಾಸಕರಿದ್ದು, ಹಿರಿತನದ ಆಧಾರದಲ್ಲಿ ಕಾಯಂಗೆ ಆದೇಶ ಹೊರಡಿಸುವಂತೆ ಸದನದಲ್ಲಿ ಆಗ್ರಹಿಸಲಾಗುವುದು ಎಂದರು.
ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಎಚ್.ಸೋಮಶೇಖರ್ ಶಿಮೊಗ್ಗಿ, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ ಕಾಯಂ ಮಾಡಬೇಕು. ಯುಜಿಸಿ 2010ರ ನಿಯಮಗಳನ್ನು ಉಲ್ಲಂ ಸಿ ಮಾಡಿರುವ ಸಹಾಯಕ ಪ್ರಾಧ್ಯಾಪಕರ ಅಕ್ರಮ ನೇಮಕ ತಡೆಹಿಡಿದು ಉನ್ನತ ಮಟ್ಟದ ತನಿಖೆಗೆ ಶಿಫಾರಸು ಮಾಡಬೇಕು. 10 ತಿಂಗಳ ಬದಲಾಗಿ 12 ತಿಂಗಳ ಸಂಬಳ ನೀಡಬೇಕು. ತಿಂಗಳಿಗೊಂದು ಸಿಎಲ್(ರಜೆ) ಹಾಗೂ ಉಪನ್ಯಾಸಕಿಯರಿಗೆ ಹೆರಿಗೆ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ 414 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12859ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾ ಭದ್ರತೆಗಾಗಿ ಸರ್ಕಾರ ಶಾಶ್ವತ ನಿಯಮಾವಳಿ ರಚನೆ ಮಾಡಬೇಕು. ಪ್ರಸ್ತುತ ಶಿಕ್ಷಣ ಇಲಾಖೆ 2160 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಪರಿಣಾಮ 4320 ಅತಿಥಿ ಉಪನ್ಯಾಸಕರು ಬೀದಿಗೆ ಬೀಳಲಿದ್ದಾರೆ. ಇದನ್ನು ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.