10ದಿನದಲ್ಲಿ ಮೂವರಿಗೆ ಗುಂಡೇಟು


Team Udayavani, Jun 26, 2019, 3:05 AM IST

10dina

ಬೆಂಗಳೂರು: ಉತ್ತರ ಭಾರತದವರನ್ನೇ ಗುರಿಯಾಗಿಸಿಕೊಂಡು ದರೋಡೆ, ಸುಲಿಗೆ ಮಾಡುತ್ತಿದ್ದ ರೌಡಿಶೀಟರ್‌ಗೆ ಬಾಣಸವಾಡಿ ಪೊಲೀಸರು ಮಂಗಳವಾರ ಗುಂಡೇಟಿನ ರುಚಿ ತೋರಿಸಿದ್ದಾರೆ. ಈ ಘಟನೆಯಿಂದ 10 ದಿನದಲ್ಲಿ ಒಟ್ಟು ಮೂರು ಗುಂಡೇಟು ಪ್ರಕರಣಗಳು ಜರುಗಿದಂತಾಗಿದೆ.

ಬಾಗಲೂರು ನಿವಾಸಿ ಅಶೋಕ್‌ ಅಲಿಯಾಸ್‌ ಅರ್ಜುನ್‌(22) ಎಂಬಾತನ ಬಲಗಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆತನ ದಾಳಿಯಿಂದ ಹಲ್ಲೆಗೊಳಗಾದ ಕಾನ್‌ಸ್ಟೆಬಲ್‌ ಸೌದಾಗರ್‌ ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ಕೈದು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಅಶೋಕ್‌ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದರೋಡೆ, ಸುಲಿಗೆ ಪ್ರಕರಣಗಳು ದಾಖಲಾಗಿದ್ದವು. 2016ರಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದ.

ಪರಿಣಾಮ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆತನ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ರೌಡಿಪಟ್ಟಿ ಕೂಡ ತೆರೆಯಲಾಗಿತ್ತು.

ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಭಾನುವಾರ ಮಧ್ಯಾಹ್ನ ಲಿಂಗಾರಾಜಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಸ್ಸಾಂ ಮೂಲದ ನೆಹರ್‌ ಆಲಿ ಎಂಬುವರ ಮನೆಗೆ ನುಗ್ಗಿ ಚಾಕು ತೋರಿಸಿ ಒಂದು ಮೊಬೈಲ್‌, ಆರು ಸಾವಿರ ರೂ. ಕಸಿದುಕೊಂಡು, ಹೊರಭಾಗದಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದರು.

ನಂತರ ಮನೆ ಮಾಲೀಕರನ್ನು ಕೂಗಿ ಬಾಗಿಲು ತೆರೆಸಿಕೊಂಡಿದ್ದ ನೆಹರ್‌ ಅಲಿ, ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಬಾಸಣವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಹರೆ ಪತ್ತೆಯಾಗಿತ್ತು.

ಈ ವೇಳೆ ಅರವಿಂದ್‌ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ಅಶೋಕ್‌ ಬಗ್ಗೆ ಹೇಳಿಕೆ ನೀಡಿದ್ದ. ಈ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಆರೋಪಿಯ ಬಲಗಾಲಿಗೆ ಗುಂಡು: ಎರಡು ದಿನಗಳಿಂದ ಆರೋಪಿ ಚಲವಲನಗಳ ಮೇಲೆ ನಿಗಾವಹಿಸಿದ್ದ ವಿಶೇಷ ತಂಡ ಸೋಮವಾರ ರಾತ್ರಿ 11.30ರ ಸುಮಾರಿಗೆ ಪುಲಕೇಶಿನಗರದ ಗಜೇಂದ್ರ ನಗರದಲ್ಲಿ ಅಡಗಿರುವ ಮಾಹಿತಿ ಸಂಗ್ರಹಿಸಿತ್ತು.

ನಂತರ ಇನ್‌ಸ್ಪೆಕ್ಟರ್‌ ವಿರೂಪಾಕ್ಷಸ್ವಾಮಿ ನೇತೃತ್ವದ ಎರಡು ತಂಡಗಳು ಆರೋಪಿಯನ್ನು ಬಂಧಿಸಲು ಹೋಗಿದ್ದು, ಪೊಲೀಸರನ್ನು ಕಂಡ ಆರೋಪಿ ಬೈಕ್‌ ಏರಿ ತಪ್ಪಿಸಿಕೊಂಡು ಓಡುತ್ತಿದ್ದ. ನಂತರ ಪೊಲೀಸ್‌ ವಾಹನದಲ್ಲಿ ಆರೋಪಿಯನ್ನು ಬೆನ್ನಟ್ಟಿದ್ದರು.

ಮಾರ್ಗ ಮಧ್ಯೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ವರ್ತುಲ ರಸ್ತೆಯಲ್ಲಿ ವೇಗವಾಗಿ ಬೈಕ್‌ ಚಾಲನೆ ಮಾಡುತ್ತಿದ್ದ ಆತ, ನಿಯಂತ್ರಣ ಕಳೆದುಕೊಂಡು ಕಸ್ತೂರಿನಗರ ಸಮೀಪದ ಮಣ್ಣಿನ ಗುಡ್ಡಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಆಗ ಕಾನ್‌ಸ್ಟೆಬಲ್‌ ಸೌದಾಗರ್‌ ಆತನನ್ನು ಹಿಡಿಯಲು ಮುಂದಾಗಿದ್ದು,

ಆರೋಪಿ ತನ್ನ ಬಳಿಯಿದ್ದ ಡ್ಯಾಗರ್‌ನಿಂದ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಇನ್‌ಸ್ಪೆಕ್ಟರ್‌ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಆತನಿಗೆ ಸೂಚಿಸಿದ್ದಾರೆ. ಆದರೂ ಆತ ಮತ್ತೂಮ್ಮೆ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಪಿಐ ವಿರೂಪಾಕ್ಷಸ್ವಾಮಿ ಅಶೋಕನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಹಿಂದಿ ಭಾಷಿಕರೇ ಟಾರ್ಗೆಟ್‌: ಆರೋಪಿ ಅಶೋಕ್‌ ಹಿಂದಿ ಭಾಷಿಗರನ್ನೇ ಗುರಿಯಾಗಿಸಿಕೊಂಡು ದರೋಡೆ, ಸುಲಿಗೆ ಮಾಡುತ್ತಿದ್ದ. ಹಿಂದಿ ಮಾತನಾಡುವವರನ್ನು ಸುಲಿಗೆ ಮಾಡಿದರೆ ದೂರು ನೀಡುವುದಿಲ್ಲ ಎಂಬ ನಂಬಿಕೆ ಮೇಲೆ ಕೃತ್ಯ ಎಸಗುತ್ತಿದ್ದ. ಆದರೆ, ನೆಹರ್‌ ಅಲಿ ಮನೆ ಮಾಲೀಕರು ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂವರು ರೌಡಿ ಶೀಟರ್‌ಗಳು: ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಅಧಿಕಾರವಧಿಯಲ್ಲಿ ಬರೋಬರಿ 43ಕ್ಕೂ ಅಧಿಕ ಆರೋಪಿಗಳಿಗೆ ಗುಂಡೇಟಿನ ರುಚಿ ತೋರಿಸಿದ್ದ ನಗರ ಪೊಲೀಸರು, ಅಲೋಕ್‌ ಕುಮಾರ್‌ ನೂತನ ಪೊಲೀಸ್‌ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕೇವಲ 10 ದಿನಗಳಲ್ಲೇ ಮೂವರು ರೌಡಿಶೀಟರ್‌ಗಳು, ಸುಲಿಗೆ ಹಾಗೂ ದರೋಡೆಕೋರರಿಗೆ ಗುಂಡಿನ ರುಚಿ ತೋರಿಸುತ್ತಿದ್ದಾರೆ.

ಜೂನ್‌ 23(ಭಾನುವಾರ) ಸಿಸಿಬಿ ಪೊಲೀಸರು ಶಿವಾಜಿನಗರ ರೌಡಿಶೀಟರ್‌ ಅಮಿರ್‌ ಖಾನ್‌, ಜೂನ್‌ 24(ಸೋಮವಾರ) ಬ್ಯಾಟರಾಯನಪುರರ ಪೊಲೀಸರಿಂದ ಸುಲಿಗೆ, ದರೋಡೆಕೋರ ರಾಹುಲ್‌ ಹಾಗೂ ಜೂನ್‌ 25(ಮಂಗಳವಾರ) ಬಾಣಸವಾಡಿ ಪೊಲೀಸರಿಂದ ಅಶೋಕ್‌ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.