KSMCA Server: ಕೆಎಸ್‌ಎಂಸಿಎ ಸರ್ವರ್ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು!
Team Udayavani, Aug 14, 2024, 11:02 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಆಡ್ವಟೈìಸಿಂಗ್ ಲಿಮಿ ಟೆಡ್ (ಕೆಎಸ್‌ಎಂಸಿಎ)ನ ಹಣಕಾಸು ಮತ್ತು ಲೆಕ್ಕಪತ್ರ ಕಾರ್ಯಗಳ ದಾಖಲೆಗಳ ಸರ್ವರ್ ಅನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ಡೇಟಾ ಕಳುವು ಮಾಡಿ ರುವುದಾಗಿ ಕಚೇರಿಯ ಇ-ಮೇಲ್ ಮಾಹಿತಿ ನೀಡಿ, ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಕೆಎಸ್‌ಎಂಸಿಎನ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಅತೀಕುಲ್ಲಾ ಷರೀಫ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೆಎಸ್‌ಎಂಸಿಎ ಸರ್ಕಾರಿ ಸ್ವಾಮ್ಯದ ಕಂಪನಿ ಯಾಗಿದ್ದು, ಗಣಕೀಕೃತವಾಗಿ ನಿರ್ವಹಿಸುತ್ತಿರುವ ವ್ಯವಹರಣೆಯ ಪೈಕಿ ಪ್ರಮುಖವಾದ ಹಣಕಾಸು ಮತ್ತು ಲೆಕ್ಕಪತ್ರ ಕಾರ್ಯಗಳ ದಾಖಲೆಗಳ ನಿರ್ವಹಣೆ ಯನ್ನು ಈ ಕಚೇರಿಯ ಸರ್ವರ್‌ನಲ್ಲಿ ಇರಿಸಲಾಗಿದೆ. ಈ ಮಧ್ಯೆ ಆ. 7ರಂದು ಸವರ್ ಅನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು, ನಿಮ್ಮ ಡೇಟಾಗಳನ್ನು ಕಳವು ಮಾಡಿದ್ದೇವೆ ಮತ್ತು ಎನ್‌ಕ್ರಿಪ್ಟ್ ಮಾಡಲಾಗಿದೆ. ಈ ಬಗ್ಗೆ Email Us ithelp24okaol.com or ithelp24okcyberfear.com ಎಂದು ಗಣಕ ಯಂತ್ರದಲ್ಲಿ ತೋರಿಸುತ್ತಿರುತ್ತದೆ. ಅಲ್ಲದೆ ಸರ್ವರ್‌ನಲ್ಲಿರುವ File type&ZBRT ಎಂದು ‘We downloaded to our servers and encrypted all your database and personal information’ಎಂದು ಸಂದೇಶ ನೀಡಿದ್ದಾರೆ. ಅಲ್ಲದೆ ಡೇಟಾ ಬಿಡುಗಡೆಗೆ ಹಣಕ್ಕೆ ಬೇಡಿಕೆಯಿಟ್ಟಿದ್ದು, ತಪ್ಪಿದ್ದರೆ ಮಾಹಿತಿ ಸೋರಿಕೆ ಹಾಗೂ ಡೇಟಾ ನಾಶಪಡಿಸುವುದಾಗಿ ಬೆದರಿಸಿದ್ದಾರೆ ಎಂದು ಮೊಹಮ್ಮದ್ ಅತೀಕುಲ್ಲಾ ಷರೀಷ್ ದೂರಿನಲ್ಲಿ ಆರೋಪಿಸಿದ್ದಾರೆ.
ಈ ದೂರಿನನ್ವಯ ಮಾಹಿತಿ ಹಕ್ಕು ಕಾಯ್ದೆಯಡಿ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.