ಹೇರಿಕೆ ವಿರುದ್ಧ ಎಚ್ಎಎಲ್ ಕನ್ನಡ ಸಂಘದ ಪ್ರತಿಭಟನೆ
Team Udayavani, Sep 15, 2017, 11:48 AM IST
ಬೆಂಗಳೂರು: ಹಿಂದಿ ದಿವಸ್ ಆಚರಣೆ ನೆಪದಲ್ಲಿ ಹಿಂದಿ ಹೇರಿಕೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಎಚ್ಎಎಲ್ ಕೇಂದ್ರೀಯ ಕನ್ನಡ ಸಂಘ ಎಚ್ಎಎಲ್ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು. ಕೇಂದ್ರೀಯ ಕನ್ನಡ ಸಂಘದ ಪದಾಧಿಕಾರಿಗಳು, ಸದಸ್ಯರು ಮಾತ್ರವಲ್ಲದೆ ಎಚ್ಎಎಲ್ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಿಂದಿ ಹೇರಿಕೆ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದರು.
ಅಲ್ಲದೆ, ಹಿಂದಿ ಹೇರಿಕೆ ಕೈಬಿಡಬೇಕು ಎಂದು ಆಗ್ರಹಿಸಿದರು. ಇದರಿಂದ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಿಗೆ ಕಂಟಕವಾಗುತ್ತಿದೆ. ಅದೇ ರೀತಿ ಹಿಂದಿ ದಿವಸ್ ಮೂಲಕ ಪರೋಕ್ಷವಾಗಿ ಹಿಂದಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ನೀತಿ ಕೈಬಿಟ್ಟು ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು. ತ್ರಿಭಾಷಾ ಸೂತ್ರದ ಅನ್ವಯ ರಾಜ್ಯದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.