ಬಿಎಂಟಿಸಿ ಅಧ್ಯಕ್ಷರಾಗಿ ಹ್ಯಾರೀಸ್ ಅಧಿಕಾರ
Team Udayavani, Jan 12, 2019, 7:09 AM IST
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ನೂತನ ಅಧ್ಯಕ್ಷರಾಗಿ ಶುಕ್ರವಾರ ಶಾಸಕ ಎನ್.ಎ. ಹ್ಯಾರೀಸ್ ಅಧಿಕಾರ ಸ್ವೀಕರಿಸಿದರು.
ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, “ನಷ್ಟದಲ್ಲಿರುವ ಬಿಎಂಟಿಸಿಯನ್ನು ಲಾಭದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು. ಅದಕ್ಕಿಂತ ಹೆಚ್ಚಾಗಿ ನನಗೆ ಲಾಭ-ನಷ್ಟ ಮುಖ್ಯವಲ್ಲ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸಂಪರ್ಕ ಕಲ್ಪಿಸುವುದು ಮೊದಲ ಆದ್ಯತೆ’ ಎಂದರು.
ಬಿಎಂಟಿಸಿಯಲ್ಲಿ ತಂತ್ರಜ್ಞಾನ ಅಳವಡಿಕೆ ಹಾಗೂ “ನಮ್ಮ ಮೆಟ್ರೋ’ಗೆ ಪೂರಕವಾಗಿ ಬಿಎಂಟಿಸಿ ಸಂಪರ್ಕ ಸೇವೆ ಕಲ್ಪಿಸಲಾಗುವುದು. ಪ್ರತಿಯೊಬ್ಬರಿಗೂ ಬಿಎಂಟಿಸಿ ಜನಸ್ನೇಹಿಯನ್ನಾಗಿ ಮಾಡುತ್ತೇನೆ ಎಂದ ಅವರು, ಸುಮಾರು 45 ಲಕ್ಷ ಜನ ನಿತ್ಯ ಬಸ್ಗಳಲ್ಲಿ ಸಂಚರಿಸುತ್ತಾರೆ. ಅವರಿಗೆ ಉತ್ತಮ ಸಾರಿಗೆ ನೀಡುವುದು ನಮ್ಮ ಉದ್ದೇಶ ಎಂದು ಹೇಳಿದರು.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಭಿನಂದಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.