ಜನ ಸೇರುವಲ್ಲಿ ಕ್ಯಾಂಟೀನ್ ಇರಲಿ
Team Udayavani, Jan 27, 2018, 12:43 PM IST
ಬೆಂಗಳೂರು: ನಗರದ ಬಸ್ ನಿಲ್ದಾಣ, ಆಸ್ಪತ್ರೆ, ರೈಲು ನಿಲ್ದಾಣ, ಕಾಲೇಜುಗಳು ಸೇರಿ ಜನಸಂದಣಿ ಪ್ರದೇಶಗಳಲ್ಲಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸೌಧದ ಆವರಣದಲ್ಲಿ ಶುಕ್ರವಾರ “ಸಂಚಾರಿ ಇಂದಿರಾ ಕ್ಯಾಂಟೀನ್’ ವಾಹನಗಳಿಗೆ ಚಾಲನೆ ನೀಡಿದ ಅವರು, ಪಾಲಿಕೆಯಿಂದ 170 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಈವರೆಗೆ 2.50 ಕೋಟಿ ಜನರಿಗೆ ಆಹಾರ ವಿತರಿಸಲಾಗಿದೆ. ಪ್ರಸ್ತುತ 18 ಮೊಬೈಲ್ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಿದ್ದು, ಇಂದಿನಿಂದ ನಿತ್ಯ 2.50 ಲಕ್ಷ ಬಡವರು ಇಂದಿರಾ ಕ್ಯಾಂಟೀನ್ ಆಹಾರ ಸೇವಿಸಲಿದ್ದಾರೆ ಎಂದರು.
ನಗರದಲ್ಲಿ ವಾರ್ಡ್‌ಗೊಂದು ಕ್ಯಾಂಟೀನ್ ನಿರ್ಮಿಸುವಂತೆ ತಿಳಿಸಲಾಗಿದೆ. ಆದರೆ ಪಾಲಿಕೆ ಅಧಿಕಾರಿಗಳು 198 ಕ್ಯಾಂಟೀನ್ ಆರಂಭಿಸುವ ಗುರಿಗೆ ಸೀಮಿತವಾಗದೆ, ಬಸ್ ನಿಲ್ದಾಣ, ಆಸ್ಪತ್ರೆ, ರೈಲು ನಿಲ್ದಾಣ ಸೇರಿದಂತೆ ಅತಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕ್ಯಾಂಟೀನ್ ತೆರೆಯಬೇಕು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಒದಗಿಸುವ ಭರವಸೆ ನೀಡಿದರು.
“ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇಂದಿರಾ ಕ್ಯಾಂಟೀನ್ ಯೋಜನೆಗೆ ಅಡ್ಡಿಪಡಿಸಿದ್ದರಿಂದ ಎಲ್ಲ ಕಡೆ ಒಟ್ಟಿಗೆ ಕ್ಯಾಂಟೀನ್ ಆರಂಭಿಸಲು ಸಾಧ್ಯವಾಗಲಿಲ್ಲ. ಒಳ್ಳೆ ಕೆಲಸಗಳಿಗೆ ಅಡ್ಡಿ ಪಡಿಸುವವರು ಎಲ್ಲ ಕಾಲದಲ್ಲೂ ಇದ್ದಾರೆ. ಬಡವರಿಗೆ ಒಳ್ಳೆಯದಾಗುವ ಕೆಲಸ ಮಾಡುವುದಕ್ಕೆ ಅಸೂಯೆ, ರಾಜಕೀಯವಾಗಿ ವಿರೋಧ ಮಾಡುವವರಿಗೆ ಬಡವರ ಕಷ್ಟ ತಿಳಿಯಲು ಹೇಗೆ ಸಾಧ್ಯ?’ ಎಂದು ಸಿಎಂ ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಮೇಯರ್ ಆರ್.ಸಂಪತ್‌ರಾಜ್, ಶಾಸಕ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್, ಪಿ.ಆರ್.ರಮೇಶ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಹಾಜರಿದ್ದರು.
ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್!: ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬರಿಗೆ ಉಚಿತವಾಗಿ 7 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ಜತೆಗೆ, ಮಕ್ಕಳಿಗೆ ಹಾಲು, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಕಾರ್ಯಕ್ರಮ ಜಾರಿಗೊಳಿಸಿಲಾಗಿದೆ. ಇದರ ಉದ್ದೇಶ, ಎಲ್ಲರಿಗೂ ಎರಡು ಹೊತ್ತು ಊಟ ದೊರೆಯಬೇಕು ಮತ್ತು ಯಾರೂ ಅಪೌಷ್ಠಿಕತೆಗೆ ಒಳಗಾಗಬಾರದು ಎಂಬುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಇಂದಿರಾ ಕ್ಯಾಂಟೀನ್‌ನಂತಹ ಯೋಜನೆಯಲ್ಲಿ ರಾಜಕೀಯ ಮಾಡುವವರು ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್ ಎಂದು ಗುಡುಗಿದರು.
ಅವರದು ಕಾಂಗ್ರೆಸ್ ಮುಕ್ತ, ನಮ್ಮದು ಹಸಿವು ಮುಕ್ತ: “ಅವರು (ಬಿಜೆಪಿ) ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ನಮ್ಮ ಘೋಷಣೆ “ಹಸಿವು ಮುಕ್ತ ಕರ್ನಾಟಕ’ವಾಗಿದೆ,’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಹಸಿವನ್ನು ಅನುಭವಿಸಿದವರಿಗೆ ಮಾತ್ರ ಹಸಿದವರ ಬಳಲಿಕೆ ಗೊತ್ತಾಗುತ್ತದೆ. ಹೊಟ್ಟೆ ತುಂಬಿದವರಿಗೆ ಹಸಿದವರ ಕಷ್ಟ ಗೊತ್ತಾಗುವುದಿಲ್ಲ. ಒಂದು ಪಕ್ಷವನ್ನು ಲ್ಲದಂತೆ ಮಾಡುವುದು ಮುಖ್ಯವಲ್ಲ. ಬದಲಿಗೆ ಸಮಾಜದಲ್ಲಿ ಹಸಿದವರಿಗೆ ಊಟ ಕೊಡುವುದು ಮುಖ್ಯ. ಆ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಮಾಧ್ಯಮದವರಿಗೂ ಕ್ಯಾಂಟೀನ್: ಇಂದಿರಾ ಕ್ಯಾಂಟೀನ್ ಕುರಿತು ಅಂತಾರಾಷ್ಟ್ರೀಯ ಮಟ್ಟದ ಬಿಬಿಸಿ ಸುದ್ದಿ ವಾಹಿನಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಯಶಸ್ಸಿನ ಬೆನ್ನಲ್ಲೇ ಮಾಧ್ಯಮದವರಿಗಾಗಿ ವಿಧಾನಸೌಧದ ಯಾವುದಾದರೂ ಒಂದು ಭಾಗದಲ್ಲಿ ಕ್ಯಾಂಟೀನ್ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದರು. ಕಾರ್ಯಕ್ರಮದ ನಂತರ ಸಂಚಾರಿ ಇಂದಿರಾ ಕ್ಯಾಂಟೀನ್ ಬಳಿ ತೆರಳಿದ ಮುಖ್ಯಮಂತ್ರಿಗಳು, ಟೋಕನ್ ಪಡೆದು, ಒಂದು ಪ್ಲೇಟ್ ಸೇವಿಸಿದರು. ಜತೆಗೆ ಮೈಸೂರು ಪಾಕ್ ತಿಂದು ಬಾಯಿ ಸಿಹಿ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.