ನಲಪಾಡ್ ಡ್ರಗ್ಸ್ ಸೇವಿಸಿದ್ದನೇ?
Team Udayavani, Mar 3, 2018, 12:26 PM IST
ಬೆಂಗಳೂರು: “ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಸಕ ಹ್ಯಾರಿಸ್ ಪುತ್ರ, ಆರೋಪಿ ಮೊಹಮ್ಮದ್ ನಲಪಾಡ್ ಮಾದಕ ವಸ್ತು ಸೇವನೆ ಮಾಡಿದ್ದನೇ ಎಂಬ ಬಗ್ಗೆ ತನಿಖೆ ನಡೆಸಬೇಕು,’ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ನಡೆದ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ರಾಜಕೀಯ ಒತ್ತಡ ಇತ್ತು ಎಂಬುದನ್ನು ನಿವೃತ್ತ ಐಪಿಎಸ್ ಅಧಿಕಾರಿ ಬಿ.ಎನ್.ಎಸ್.ರೆಡ್ಡಿ ಹೇಳಿದ್ದಾರೆ.
ಅಲ್ಲದೆ, ವಿಠಲ ಮಲ್ಯ ರಸ್ತೆಯಲ್ಲಿ ಸುಮಾರು ಎಂಟು ಕಡೆ ಡ್ರಗ್ಸ್ ದಂಧೆ ನಡೆಯುತ್ತಿರುವ ಬಗ್ಗೆಯೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಕೂಡ ಡ್ರಗ್ಸ್ ಸೇವಿಸಿದ್ದನೇ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣದಲ್ಲಿ ಡ್ರಗ್ಸ್ ದಂಧೆ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಡ್ರಗ್ಸ್ ದಂಧೆ ಅವ್ಯಾಹತವಾಗಿ ಹಬ್ಬುತ್ತಿರುವುದು ಕೂಡ ಪತ್ತೆಯಾಗಿದೆ. ಈ ಎಲ್ಲ ಕಾರಣಗಳಿಂದ ಡ್ರಗ್ಸ್ ದಂಧೆ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.