ಎಚ್.ಡಿ ಬಾಲಕೃಷ್ಣೇಗೌಡರಿಗೆ ಹೈಕೋರ್ಟ್ ನೋಟೀಸ್
Team Udayavani, Mar 4, 2017, 12:11 PM IST
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ ಪುತ್ರ ನಿವೃತ್ತ ಕೆಎಎಸ್ ಅಧಿಕಾರಿ ಎಚ್.ಡಿ ಬಾಲಕೃಷ್ಣೇಗೌಡ ಅವರಿಗೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
ಲೋಕಾಯುಕ್ತ ಪೊಲೀಸರು 2012ರಲ್ಲಿ ಎಚ್.ಡಿ ಬಾಲಕೃಷ್ಣೇಗೌಡ ವಿರುದ್ಧ ದಾಖಲಿಸಿದ್ದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ,ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ, ಆರೋಪಮುಕ್ತ ಗೊಳಿಸಿ 2016ರಲ್ಲಿ ಆದೇಶ ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಎಚ್.ಡಿ ಬಾಲಕೃಷ್ಣೇಗೌಡ ಅವರಿಗೆ ನೋಟೀಸ್ ನೀಡಿ ವಿಚಾರಣೆ ಮುಂದೂಡಿತು
ಏನಿದು ಪ್ರಕರಣ?: ವಿಶ್ವೇಶ್ವರಯ್ಯ ಉಕ್ಕು ಹಾಗೂ ಕಬ್ಬಿಣ ಕಾರ್ಖಾನೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ್ದ ಕೆಎಎಸ್ ಅಧಿಕಾರಿ ಎಚ್. ಡಿ. ಬಾಲಕೃಷ್ಣೇಗೌಡ ವಿರುದ್ಧ 2012ರಲ್ಲಿ 5 ಕೋಟಿ ರೂ.ಗೂ ಹೆಚ್ಚು ಅಕ್ರಮ ಆದಾಯ ಗಳಿಸಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಅಲ್ಲದೆ ಈ ಸಂಬಂಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಬಾಲಕೃಷ್ಣೇಗೌಡವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 2016ರಲ್ಲಿ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಮುಕ್ತಗೊಳಿಸಿ, ಅವರ ಮನೆಯಲ್ಲಿ ದಾಳಿ ವೇಳೆ ವಶಪಡಿಸಿಕೊಂಡಿದ್ದ ದಾಖಲೆಗಳು ಹಾಗೂ ವಸ್ತುಗಳನ್ನು ಹಿಂತಿರುಗಿಸುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.