ಶಾಸಕರ ಹೆಗಲಿಗೆ ಜವಾಬ್ದಾರಿ
Team Udayavani, Jan 6, 2019, 12:30 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರು ಹೊಣೆಗಾರಿಕೆ ವಹಿಸಿಕೊಳ್ಳಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಎರಡು ತಿಂಗಳು ಮಾತ್ರ ಇದ್ದು ತಳಮಟ್ಟದಿಂದ ಪಕ್ಷ ಸಂಘಟಿಸಿ ನಮ್ಮನ್ನು ನಾವು ಬಲಪಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಪರಿಷತ್ ಸದಸ್ಯರಿಗೂ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಮಂಗಳವಾರದಿಂದ ಶಾಸಕರ ಸಭೆ ನಡೆಸಿ ಲೋಕಸಭೆ ಕ್ಷೇತ್ರಾವಾರು ಹೊಣೆಗಾರಿಕೆ ವಹಿಸಲಾಗುವುದು. ಅಧ್ಯಕ್ಷರಾದ ವಿಶ್ವನಾಥ್, ಪ್ರಚಾರ ಸಮಿತಿ ಅಧ್ಯಕ್ಷ ದತ್ತಾ ಜತೆಗೂಡಿ ನಾನೂ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಸರ್ಕಾರ ಮುನ್ನಡೆಸುವ ಜವಾಬ್ದಾರಿ ಇದೆ. ಹೀಗಾಗಿ, ಅವರು ಪಕ್ಷದ ಕಡೆ ಹೆಚ್ಚು ಗಮನ ನೀಡಲು ಆಗುವುದಿಲ್ಲ. ನಾವು ಪಕ್ಷದ ಕೆಲಸ ಮಾಡಬೇಕಾಗಿದೆ ಎಂದರು.
ನಾನು ರಾಷ್ಟ್ರೀಯ ಮಟ್ಟದಲ್ಲಿಯೂ ಪಾತ್ರ ವಹಿಸಬೇಕಾಗಿದೆ. ರಾಜ್ಯದಲ್ಲೂ ಪಕ್ಷ ಗಟ್ಟಿಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ನಾವು ಸಮಸ್ಯೆ ಮಾಡಿಕೊಳ್ಳಲು ಹೋಗುವುದಿಲ್ಲ. ಜೆಡಿಎಸ್‌ದು ಈಗ ಎರಡು ಇದೆಯೋ, ಮೂರು ಇದೆಯೋ ಮತ್ತಷ್ಟು ಸಂಖ್ಯೆ ಹೆಚ್ಚಿಸಿಕೊಳ್ಳಬೇಕಾಗಿದೆ. ಕಾಂಗ್ರೆಸ್ ಮಿತ್ರರೂ ಉದಾರತೆ ತೋರಬೇಕು ಎಂದು ಹೇಳಿದರು.
ಈ ತಿಂಗಳಾಂತ್ಯಕ್ಕೆ ಸೀಟು ಹಂಚಿಕೆ ಸುಸೂತ್ರವಾಗಿ ಮುಗಿಯಲಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ, ದಿನೇಶ್ ಗುಂಡೂರಾವ್, ಪರಮೇಶ್ವರ್, ವಿಶ್ವನಾಥ್ ಎಲ್ಲರೂ ಮಾತನಾಡಿ ತೀರ್ಮಾನ ಮಾಡಲಿದ್ದಾರೆ. ನಾನೂ ರಾಹುಲ್‌ಗಾಂಧಿಯವರ ಜತೆ ಚರ್ಚಿಸುತ್ತೆನೆ ಎಂದು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ, ಮುಖಂಡರಾದ ಜಫ್ರುಲ್ಲಾ ಖಾನ್, ಪ್ರಕಾಶ್, ಶಫೀವುಲ್ಲಾ ಉಪಸ್ಥಿತರಿದ್ದರು.
ಸ್ಪರ್ಧೆ ಬಗ್ಗೆ ಸ್ಪಷ್ಟತೆ ಇಲ್ಲ
*ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ ದೇವೇಗೌಡರು ಅಡ್ಡ ಗೋಡೆ ಮೇಲೆ ದೀಪ ವಿಟ್ಟಂತೆ ಮಾತನಾಡಿದ್ದಾರೆ. ನಮಗೆ ಲೋಕಸಭೆಯಲ್ಲಿ ಕೊಡುವುದು ಮೂರು ನಿಮಿಷ. ಅಲ್ಲಿ ಹೋಗಿ ಏನು ಮಾಡಬೇಕು. ಪಕ್ಷದ ಸಂಖ್ಯೆ ಹೆಚ್ಚಿಸಬೇಕಾಗಿದೆ. ಗೌಡರು ಮತ್ತೆ ಲೋಕಸಭೆಗೆ ಹೋಗಲು ಇಷ್ಟೆಲ್ಲಾ ಮಾತಾಡ್ತಾರೆ ಅಂತ ನೀವು ಎಂದುಕೊಳ್ಳಬಹುದು. ನನಗೆ ಅಧಿಕಾರ ಮುಖ್ಯವಲ್ಲ, ಅದಕ್ಕೆ ಅಂಟಿಕೊಂಡು ಕೂರುವುದೂ ಇಲ್ಲ ಎಂದು ಹೇಳಿದರು.
ಸರ್ಕಾರದಲ್ಲಿ ಸಣ್ಣ ಪುಟ್ಟ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡಿ ಸಮಸ್ಯೆ ಸೃಷ್ಟಿಸಿಕೊಳ್ಳುವುದು ಸರಿಯಲ್ಲ. ಅದು ದಿನೇಶ್‌ಗುಂಡೂರಾವ್ ಆಗಲಿ, ರೇವಣ್ಣ ಆಗಲಿ. ಏನೇ ಸಮಸ್ಯೆ ಇದ್ದರೂ ಕುಳಿತು ಬಗೆಹರಿಸಿಕೊಳ್ಳಬೇಕು. ಸಮ್ಮಿಶ್ರ ಸರ್ಕಾರಕ್ಕೆ ಬಾಧಕವಾಗುವ ರೀತಿ ಯಾರೂ ನಡೆದುಕೊಳ್ಳಬಾರದು. ಒಂದೆರಡು ದಿನಗಳಲ್ಲಿ ಜೆಡಿಎಸ್ ಪಾಲಿನ ನಿಗಮ ಮಂಡಳಿ ಅಧ್ಯಕ್ಷರು, ಸದಸ್ಯರ ನೇಮಕ ಮಾಡಲಾಗುವುದು.
– ಎಚ್.ಡಿ.ದೇವೇಗೌಡ
ಕನ್ನಡದ ಆಸ್ಮಿತೆ ಹಾಗೂ ಅಸ್ತಿತ್ವ ಉಳಿಸುವ ವಿಚಾರದಲ್ಲಿ ಕುಮಾರಸ್ವಾಮಿಯವರು ವಡ್ಡಾರಾಧನೆಯ ಸುಕುಮಾರಸ್ವಾಮಿಯೂ ಆಗುವುದಿಲ್ಲ, ಚಂಪಾ ಹೇಳಿದಂತೆ ಕುಠಾರಸ್ವಾಮಿಯೂ ಆಗುವುದಿಲ್ಲ, ಕಠೊರಸ್ವಾಮಿಯಾಗಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಸಂಬಂಧ ಸರ್ಕಾರದ ತೀರ್ಮಾನ ಹೇಳಿದ್ದಾರೆ. ಜತೆಗೆ ಮತ್ತೂಮ್ಮೆ ಸಾಹಿತಿ ಚಿಂತಕರ ಜತೆ ಚರ್ಚಿಸುವುದಾಗಿಯೂ ಹೇಳಿದ್ದಾರೆ.
– ವೈ.ಎಸ್.ವಿ.ದತ್ತಾ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.