ಎಚ್‌ಡಿಕೆ-ಗೌಡರು ಸಮಯ ಸಾಧಕರು

Team Udayavani, Nov 21, 2018, 6:00 AM IST

w-29.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ದೇಶ ದಲ್ಲೇ ದೊಡ್ಡ  ಸಮಯ ಸಾಧಕ ರಾಜಕಾರಣಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಾಗ್ಧಾಳಿ ನಡೆಸಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಬಿಕೆ ದ್ರೋಹ, ವಿಶ್ವಾಸ ದ್ರೋಹಕ್ಕೆ ಮತ್ತೂಂದು ಹೆಸರು ದೇವೇಗೌಡರು ಹಾಗೂ ಕುಮಾರಸ್ವಾಮಿ. ನನ್ನನ್ನು ಮಂತ್ರಿ ಮಾಡಿ ಎಂದು ಅವರ ಮನೆ ಬಾಗಿಲಿಗೆ ಹೋಗಿದ್ದೇನಂತೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು. ಧರ್ಮಸಿಂಗ್‌ ಅವರಿಗೆ ಕೈಕೊಟ್ಟು ನನ್ನೊಂದಿಗೆ 20 ತಿಂಗಳ ಆಡಳಿತ ನಡೆಸಲು ಬಂದಿದ್ದು ನಿಜ. ಆಮೇಲೆ ದ್ರೋಹ ಮಾಡಿದಿರಿ. 20 ತಿಂಗಳ ಆಡಳಿತ ನಡೆಸಿ ಬಳಿಕ ಕೈಕೊಟ್ಟವರು ನೀವು. ಈಗ ನನ್ನನ್ನೇ ಟೀಕೆ ಮಾಡುತ್ತೀರಾ. ಒಬ್ಬ ಮಾಜಿ ಪ್ರಧಾನಿಯಾಗಿದ್ದವರು ಆಡುವಂತಹ ಮಾತುಗಳೇ ಇವು? ಎಂದು ಕಿಡಿ ಕಾರಿದರು. ಈ ಮೂಲಕ ಕುಮಾರ ಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದರು. 

ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದಿದೆ. ಅಪ್ಪ, ಮಕ್ಕಳೆಲ್ಲ ಸೇರಿ ಗೆದ್ದಿರುವುದು 38. ಇದೆಲ್ಲ ಗೊತ್ತಿದ್ದರೂ ದುರಹಂಕಾರ, ದರ್ಪದಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಬೆಂಬಲ ನೀಡದಿದ್ದರೆ ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು ಎಂಬ ಅರಿವು ಕುಮಾರಸ್ವಾಮಿ ಅವ‌ರಿಗಿರಬೇಕು. ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಅನಂತರ ರಾಜ್ಯದಲ್ಲಿ 225ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 100ಕ್ಕೂ ಹೆಚ್ಚು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿದೆ. ಸಾಲ ಮನ್ನಾ ಮಾಡಿರುವ ಮೊತ್ತ ಎಷ್ಟು? ಬರ ನಿರ್ವಹಣೆಗೆ ಬಿಡುಗಡೆ ಮಾಡಿದ ಅನುದಾನವೆಷ್ಟು ಎಂಬುದನ್ನು ಬಹಿರಂಗಪಡಿಸಲಿ ಎಂದು ಹೇಳಿದರು.

ಸಹಕಾರ ಕ್ಷೇತ್ರ ದಿವಾಳಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಮಾಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಾ, ಜಮೀನು ಹರಾಜು ಮಾಡುತ್ತಿವೆ. ಸಾಲ ಮನ್ನಾ ಮಾಡಿರುವುದಾಗಿ ಬುರುಡೆ ಹೊಡೆದುಕೊಂಡು ಸುಳ್ಳು ಹೇಳುತ್ತಾ ಕಾಲ ಹರಣ ಮಾಡುತ್ತಿರುವುದು ಖಂಡನೀಯ. ಈ ರೀತಿಯ ರಾಜಕೀಯ ದೊಂಬರಾಟ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಕೊಡಲಿ. ಮಾತೆತ್ತಿದ್ದರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎನ್ನುವ ಕುಮಾರಸ್ವಾಮಿಯವರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ಅವಮಾನ ಎಂಬುದು ತಿಳಿದಿರಲಿ ಎಂದು ಹೇಳಿದರು.

ಗೌಡರಿಗೆ ಸರಣಿ ಪ್ರಶ್ನೆ
“1994ರಲ್ಲಿ ರಾಮಕೃಷ್ಣ ಹೆಗಡೆಯವರಿಗೆ ಚಪ್ಪಲಿಯಲ್ಲಿ ಹೊಡೆಸಿದವರು ಯಾರು?
1993ರಲ್ಲಿ ರಾಮಕೃಷ್ಣ ಹೆಗಡೆಯವರ ಕಾಲು ಹಿಡಿದು ಜನತಾದಳದ ಅಧ್ಯಕ್ಷರಾದವರು ಯಾರು ದೇವೇಗೌಡರೇ?
1998-99ರಲ್ಲಿ ಹೆಗಡೆ ಅವರನ್ನು ಪಕ್ಷದಿಂದ ಹೊರ ಹಾಕಿದವರು ಯಾರು?
1988ರಲ್ಲಿ ಎಸ್‌.ಆರ್‌. ಬೊಮ್ಮಾಯಿ ಅವರಿಗೆ ದೇವೇಗೌಡರು ಮಾಡಿದ ಉಪಕಾರ ಏನು?’ ಎಂದು ಮಾರ್ಮಿಕವಾಗಿ ನುಡಿದರು. ಕಳೆದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರನ್ನು ಕಣಕ್ಕಿಳಿಸಿ ಸಿದ್ದರಾಮಯ್ಯರನ್ನು ಸೋಲಿಸಿ ಅವಮಾನ ಮಾಡಿದರು. ಒಂದೊಮ್ಮೆ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಗೆಲ್ಲದಿದ್ದರೆ ಅವರ ಪರಿಸ್ಥಿತಿ, ಭವಿಷ್ಯ ಏನಾಗುತ್ತಿತ್ತೋ ಏನೋ? ಸಿದ್ದರಾಮಯ್ಯ ಅವರು ಎಲ್ಲ ಅವಮಾನ ಸಹಿಸಿಕೊಂಡು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದುಕೊಂಡಿದ್ದೇನೆ ಎಂದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.