ಜೆಡಿಎಸ್‌ ಸಿಡಿದೆದ್ದು ಬರಲಿದೆ: ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ


Team Udayavani, May 2, 2021, 11:23 PM IST

HD Kumaraswamy Confidence about JDS

ಬೆಂಗಳೂರು: ದೇಶದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು, ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಪ್ರಾದೇಶಿಕ ಪಕ್ಷಗಳ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ಋಜುವಾತುಪಡಿಸಿದ್ದಾರೆ. ಜೆಡಿಎಸ್‌ ಕೂಡ ಎರಡೂ ರಾಷ್ಟ್ರೀಯ ಪಕ್ಷದ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿದರಿಗೆ ಧನ್ಯವಾದ ತಿಳಿಸಿರುವ ಅವರು ನಾನಾ ಪ್ರಾದೇಶಿಕ ಪಕ್ಷಗಳ ನಾಯಕರ ಯಶಸ್ಸಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ನಲ್ಲಿ ಕುಮಾರಸ್ವಾಮಿಯವರು ಭಾನುವಾರ ಅಭಿಪ್ರಾಯ ಹಂಚಿಕೊಂಡಿದ್ದು ವಿವರ ಹೀಗಿದೆ.

“ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜತೆಗೆ ಐದು ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ’ ಎಂದು ಹೇಳಿದ್ದಾರೆ.

“ಅಧಿಕಾರ ದುರ್ಬಳಕೆ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ಋಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿ ಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇಂದಿನ ಫಲಿತಾಂಶವೇ ತಾಜಾ ನಿದರ್ಶನ’ ಎಂದು ತಿಳಿಸಿದ್ದಾರೆ.

“ಜೆಡಿಎಸ್‌ ತನ್ನ ಸಾಮರ್ಥಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ’ ಎಂದು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಟಾಪ್ ನ್ಯೂಸ್

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.