ಮಾಜಿ, ಹಾಲಿ ಸಿಎಂಗಳ ವಾಕ್ಸಮರ
Team Udayavani, Oct 16, 2018, 6:00 AM IST
ಮೂವರು ಮಾಜಿ ಸಿಎಂಗಳ ಪುತ್ರರು ಕಣದಲ್ಲಿರುವ ಶಿವಮೊಗ್ಗ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದೆ. ಈ ನಡುವೆಯೇ ಹಾಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಡುವಿನ ಮಾತಿನ ಸಮರವೂ ತಾರಕಕ್ಕೇರುತ್ತಿದೆ.
ಎಚ್‌ಡಿಕೆ ಯೋಗ್ಯತೆ ಬಯಲು:ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡಿ ಈಗ ಅದನ್ನು ನಿಭಾಯಿಸಲಾಗದೆ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾತನಾಡುತ್ತಿದ್ದಾರೆ. ಇದರಿಂದ ಅವರ ಯೋಗ್ಯತೆ ಏನು ಎಂಬುದು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 10 ಕೋಟಿ ರೂ. ಬಿಲ್ ಪಾವತಿ ಬಾಕಿ ಇರುವುದರಿಂದ ಯಾವುದೇ ಗುತ್ತಿಗೆದಾರರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮುಂದೆ ಬರುತ್ತಿಲ್ಲ.ಶಿವಮೊಗ್ಗದಲ್ಲೇ ಹಲವು ಕಾಮಗಾರಿಗಳು ನನೆಗುದಿಗೆ ಬಿದ್ದಿವೆ ಎಂದು ಆರೋಪಿಸಿದರು.
ಚುನಾವಣೆ ಬಳಿಕ ಬಿಜೆಪಿ ಆಟ ಬಂದ್: ಸಿಎಂ ಕುಮಾರಸ್ವಾಮಿ
ಉಪ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯ ಎಲ್ಲ ಆಟಗಳು ಬಂದ್ ಆಗಲಿವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.10ರ ನಂತರ ಸರ್ಕಾರ ಬೀಳುತ್ತದೆ ಎಂದು ಡೆಡ್‌ಲೈನ್ ನೀಡುತ್ತಿರುವ ಬಿಜೆಪಿ ನಾಯಕರಿಗೆ ಉಪ ಚುನಾವಣೆ ಫಲಿತಾಂಶ ಸೂಕ್ತ ಪಾಠವಾಗಲಿದೆ. ಆ ನಂತರವಾದರೂ ಬಿಜೆಪಿಯವರು ಹಗಲು ಕನಸು ಕಾಣುವುದು ಬಿಡಲಿ ಎಂದಿದ್ದಾರೆ. ರಾಷ್ಟ್ರ ರಾಜಕಾರಣದ ಹಿತದೃಷ್ಟಿಯಿಂದ ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದು ದೇವರ ಆಟ. ಯಾರೂ ಊಹಿಸದ ರೀತಿಯಲ್ಲಿ ನಡೆದ ಬೆಳವಣಿಗೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.