ಎಚ್ಡಿಕೆ ಮನವಿ ಮಾಡಿರಲಿಲ್ಲ
Team Udayavani, Mar 7, 2018, 12:33 PM IST
ಬೆಂಗಳೂರು: ರಾಜ್ಯಸಭೆಗೆ ಚುನಾವಣೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಕೋರಿಕೆ ಇಟ್ಟಿರಲಿಲ್ಲ ಎಂದು ಜೆಡಿಎಸ್ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ರಮೇಶ್ಬಾಬು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಇದುವರೆಗೂ ನಡೆದಿರುವ ಸಂಪ್ರದಾಯದ ಪ್ರಕಾರ ಅವಿರೋಧ ಆಯ್ಕೆ ಮೂಲಕ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವುದು ಬೇಡ ಎಂಬುದು ಕುಮಾರಸ್ವಾಮಿಯವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕವಾಗಿ ಮನವಿ ಮಾಡಲಾಗಿತ್ತು. ಆದರೆ, ಇದನ್ನು ಮನವಿ, ಕೋರಿಕೆ ಎಂದು ಅರ್ಥೈಸುವ ಅಗತ್ಯವಿಲ್ಲ.
ಜೆಡಿಎಸ್ಗೆ ಅಂತಹ ಅನಿವಾರ್ಯವೂ ಇಲ್ಲ ಎಂದು ಹೇಳಿದ್ದಾರೆ. ಕಳೆದ ಬಾರಿ ಜೆಡಿಎಸ್ ಶಾಸಕರನ್ನು ಸೆಳೆದು ಉದ್ಯಮಿಯೊಬ್ಬರನ್ನು ಕಾಂಗ್ರೆಸ್ನಿಂದ ರಾಜ್ಯಸಭೆಗೆ ಕಳುಹಿಸಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ. ಈಗಲಾದರೂ ಹಠಮಾರಿತನ ತೋರದೆ ಸಂಪ್ರದಾಯ ಪಾಲಿಸಲಿ ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.