ಎಚ್‌ಡಿಕೆಗೆ ಬಂಧನ ಭೀತಿ? ಜಾಮೀನಿಗಾಗಿ ಹೈಕೋರ್ಟ್ ಮೊರೆ
Team Udayavani, Jun 14, 2017, 8:39 AM IST
ಬೆಂಗಳೂರು: ಜಂತಕಲ್ ಕಂಪೆನಿಗೆ ಅಕ್ರಮ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೀಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಬಂಧನ ಭೀತಿ ಎದುರಿಸುತ್ತಿರುವ ಕುಮಾರಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನ್ಯಾ| ಗೋಪಾಲ್ ಅವರು, ನಿರೀಕ್ಷಣ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದರು. ಈ ಬೆನ್ನಲ್ಲೇ ಕುಮಾರಸ್ವಾಮಿ, ನಿರೀಕ್ಷಣ ಜಾಮೀನು ಮಂಜೂರು ಕೋರಿ ಹೈಕೋರ್ಟ್ ಮೊರೆಹೋಗಿದ್ದು, ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಆದರೆ ಇದುವರೆಗೆ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಯಾವುದೇ ವಾರಂಟ್ ಅನ್ನು ಜಾರಿಗೊಳಿಸಿಲ್ಲ ಎಂದು ತಿಳಿದುಬಂದಿದೆ. ಗಣಿ ಹಗರಣಗಳಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಗಣಿ ಹಗರಣಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸು ತ್ತಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅರ್ಜಿದಾರರು, ಮಾಜಿ ಮುಖ್ಯಮಂತ್ರಿಗಳಾಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಅಥವಾ ಸಾಕ್ಷ್ಯನಾಶಕ್ಕೆ ಯತ್ನಿಸುವ ಸಾಧ್ಯತೆಯಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಲಾಗಿತ್ತು ಎಂದು ಎಸ್‌ಐಟಿ ಪರ ವಕೀಲರು ‘ಉದಯವಾಣಿ’ಗೆ ತಿಳಿಸಿದರು.
ಸುಪ್ರೀಂಕೋರ್ಟ್ ಆದೇಶದನ್ವಯ ಅಕ್ರಮ ಗಣಿ ಪ್ರಕರಣ ಗಳ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾರನ್ನು ಬಂಧಿಸಿತ್ತು. ಇದೇ ಪ್ರಕರಣ ಸಂಬಂಧ ಕುಮಾರಸ್ವಾಮಿಗೂ ನೋಟಿಸ್ ಜಾರಿಗೊಳಿಸಿತ್ತು. ಹೀಗಾಗಿ ಬಂಧನ ಭೀತಿಯಿಂದ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮೇ 16ರಂದು ಹಲವು ಷರತ್ತು ಗಳೊಂದಿಗೆ ಏಳು ದಿನಗಳವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಇದಾದ ಬಳಿಕ ಎಸ್‌ಐಟಿ ಪರ ವಕೀಲರ ಆಕ್ಷೇಪಣೆ, ಅರ್ಜಿದಾರರ ಪರ ವಕೀಲರ ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆ ಪೂರ್ತಿಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.