ನನ್ನ ಮೇಲೂ ಹಲ್ಲೆ ನಡೆಸಿದರು

Team Udayavani, Mar 5, 2018, 12:03 PM IST

nannamele.jpg

ಬೆಂಗಳೂರು: ಮೊಹಮ್ಮದ್‌ ನಲಪಾಡ್‌ ವಿರುದ್ಧದ ಹಲ್ಲೆ ಪ್ರಕರಣ ಸಂಬಂಧ ಶನಿವಾರ ಸಿಸಿಬಿ ಪೊಲೀಸರು ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಸಹೋದರ ಸಾತ್ವಿಕ್‌ ಹೇಳಿಕೆ ಪಡೆದಿದ್ದಾರೆ. “ಮೊಹಮ್ಮದ್‌ ನಲಪಾಡ್‌ ಮತ್ತು ಸಹಚರರು ಸಹೋದರ ವಿದ್ವತ್‌ ಮಾತ್ರವಲ್ಲದೇ, ಆಸ್ಪತ್ರೆಗೆ ಹೋದಾಗ ನನ್ನ ಮೇಲೂ ಹಲ್ಲೆ ನಡೆಸಿªದ್ದಾರೆ’ ಎಂದು ಅಂದು ಆಸ್ಪತ್ರೆಯಲ್ಲಿ ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ.

ವಿದ್ವತ್‌ ಮೇಲೆ ಹಲ್ಲೆ ಬಳಿಕ ಆತನ ಸ್ನೇಹಿತರು ಕರೆ ಮಾಡಿ ವಿಷಯ ತಿಳಿಸಿದರು. ಕೂಡಲೇ ಆಸ್ಪತ್ರೆಗೆ ತೆರಳಿದೆ. ತುರ್ತು ನಿಗಾ ಘಟಕದಲ್ಲಿ ವಿದ್ವತ್‌ ದಾಖಲಾಗಿದ್ದ. ಇದೇ ವೇಳೆ ತನ್ನ ಸಹಚರರ ಜತೆ ಆಸ್ಪತ್ರೆಗೆ ಬಂದ ಮೊಹಮ್ಮದ್‌ ನಲಪಾಡ್‌, ಆಸ್ಪತ್ರೆ ಸಿಬ್ಬಂದಿ ಮತ್ತು ವಿದ್ವತ್‌ ಸ್ನೇಹಿತರ ವಿರುದ್ಧ ಕೂಗಾಡುತ್ತಿದ್ದ  ಇದನ್ನು ಗಮನಿಸಿದ ನಾನು ಇದು ಆಸ್ಪತ್ರೆ, ಹೊರಗೆ ಹೋಗಿ ಎಂದು ಹೇಳಿದೆ.

ಆಗ ಮತ್ತಷ್ಟು ಏರು ಧ್ವನಿಯಲ್ಲಿ ಧಮ್ಕಿ ಹಾಕಲು ಯತ್ನಿಸಿದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿದರು. ಅಲ್ಲದೇ, ಘಟನೆ ಸಂಬಂಧ ಪೊಲೀಸ್‌ ಕಂಪ್ಲೆಟ್‌ ಏನಾದರು ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಸಿದರು ಎಂದು ಸಾತ್ವಿಕ್‌ ಹೇಳಿಕೆ ನೀಡಿದ್ದಾರೆ.

ಅಲ್ಲದೇ, ಇದೇ ಸಂದರ್ಭದಲ್ಲಿ ಡಾ ರಾಜ್‌ಕುಮಾರ್‌ ಮೊಮ್ಮಗ ಗುರು ಬಂದರು. ಆಗ ಆತನ ಜತೆ ಅನುಚಿತವಾಗಿ ವರ್ತಿಸುತ್ತಿರುವಾಗ ಗುರು, ನಾನು ರಾಜ್‌ಕುಮಾರ್‌ ಮೊಮ್ಮಗ ಎಂದು ಹೇಳುತ್ತಿದ್ದಂತೆ ಎಲ್ಲರೂ ಸ್ಥಳದಿಂದ ಹೊರಟು ಹೋದರು ಎಂದು ಸಾತ್ವಿಕ್‌ ಹೇಳಿದ್ದಾರೆ.

ಇನ್ನು ವಿದ್ವತ್‌ ತಂದೆ ಲೋಕನಾಥ್‌ ಹೇಳಿಕೆ ಕೂಡ ಪಡೆಯಲಾಗಿದ್ದು, ಘಟನೆ ಬಗ್ಗೆ ಪುತ್ರ ಸಾತ್ವಿಕ್‌ ಕರೆ ಮಾಡಿ ವಿಷಯ ತಿಳಿಸಿದ ಕೂಡಲೇ ಸ್ಥಳಕ್ಕೆ ಬಂದಿದ್ದೇನೆ ಎಂದಷ್ಟೇ ಹೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಮೀನು ಅರ್ಜಿ ಸಲ್ಲಿಕೆ: ಆರೋಪಿ ಮೊಹಮ್ಮದ್‌ ಮತ್ತು ಇತರೆ 7 ಮಂದಿ ಆರೋಪಿಗಳು ಸೋಮವಾರ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಶುಕ್ರವಾರ 63ನೇ ಸೆಷನ್ಸ್‌ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. 

ಮತ್ತೂಂದೆಡೆ ಇದುವರೆಗೂ ಗಾಯಾಳು ವಿದ್ವತ್‌, ಈತನ ಸ್ನೇಹಿತರು ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಸೋಮವಾರ ಎಲ್ಲ ಸಾಕ್ಷ್ಯಾಧಾರಗಳ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru Crime: ವಾಟರ್‌ ಹೀಟರ್‌ನಿಂದ ಸ್ನೇಹಿತನ ಕೊಲೆಗೈದವ ಸೆರೆ

8

State Govt: ಸರ್ಕಾರದ ಬಳಿಯೇ ಇದೆ ಪಂಚಾಯತ್‌ ಅಧಿಕಾರ!

Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ

Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ

Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್‌ಐ ವಿರುದ್ಧ ಕೇಸ್‌

Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್‌ಐ ವಿರುದ್ಧ ಕೇಸ್‌

Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!

Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.