ಶಾಸಕ ವಿಶ್ವನಾಥ್‌ ಮೇಲೆ ಶ್ರೀನಿವಾಸ್‌ ನೇರ ಆರೋಪ


Team Udayavani, Feb 17, 2017, 11:59 AM IST

kadabagere.jpg

ಬೆಂಗಳೂರು: ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲಿನ ಶೂಟೌಟ್‌ ಪ್ರಕರಣ ಹೊಸ ತಿರುವು ಪಡೆದಿದ್ದು, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ವಿರುದ್ಧ ಆರೋಪ ಕೇಳಿಬಂದಿದೆ. ಗುಂಡಿನ ದಾಳಿಯಿಂದ ಆಸ್ಪತ್ರೆಗೆ ಸೇರಿ ಚೇತರಿಸಿಕೊಳ್ಳುತ್ತಿರುವ ಶ್ರೀನಿವಾಸ್‌ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿ, “”ನನ್ನ ಮೇಲಿನ ಗುಂಡಿನ ದಾಳಿಗೆ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕಾರಣ,” ಎಂದು ಹೇಳಿದ್ದಾರೆ. 

“ರೈತ ಸಂತೆಗೆ ಹೋಗಿ ವಾಪಸ್‌ ಆಗುವ ಸಂದರ್ಭದಲ್ಲಿ ನನಗೆ ಗೊತ್ತಿಲ್ಲದಂತೆ ಗನ್‌ನಿಂದ ಫೈರ್‌ ಮಾಡಿದ್ದಾರೆ. ಶೂಟೌಟ್‌ಗೆ ಎಂಎಲ್‌ಎ ವಿಶ್ವನಾಥ್‌, ಡಾನ್‌ ಸತೀಶ್‌ ಹಾಗೂ ಬೂನ್‌ ಬಾಬು ಕಾರಣ. ಈ ವಿಚಾರವನ್ನು ನಾನು ಎಲ್ಲಿಗೆ ಬೇಕಾದರು ಬಂದು ದೂರು ಕೊಡಲು ಸಿದ್ಧ. ಈ ಮಾಹಿತಿಯನ್ನು ಈಗಾಗಲೇ ಪೊಲೀಸರಿಗೆ ಮತ್ತು ನನ್ನ ಪರ ವಕೀಲರಿಗೆ ತಿಳಿಸಿದ್ದೇನೆ,” ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

“ಗನ್‌ನಿಂದ ಮೂರು ಬಾರಿ ನನಗೆ ಹೊಡೆಯಲಾಯಿತು. ಮೂರು ಭಾಗದಲ್ಲಿ ಗಾಯವಾಗಿದೆ. ಈಗಷ್ಟೇ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದೇನೆ. ಪೂರ್ತಿ ಆರೋಗ್ಯವಾದರೆ  ಈ ಬಗ್ಗೆ ದೂರು ಕೊಡುತ್ತೇನೆ,” ಎಂದು ಹೇಳಿಕೆಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಫೆ.3ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಯಲಹಂಕದ ಕೋಗಿಲು ಕ್ರಾಸ್‌ ಬಳಿ ಕಡಬಗೆರೆ ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ನಡೆದಿತ್ತು. ದಾಳಿಯಿಂದ ಶ್ರೀನಿವಾಸ್‌ ದೇಹಕ್ಕೆ 3 ಗುಂಡು ಹೊಕ್ಕಿದ್ದವು. 

ಹೊಟ್ಟೆಯ ಭಾಗಕ್ಕೆ ಎರಡು ಮತ್ತು ಭುಜಕ್ಕೆ ಒಂದು ಗುಂಡು ತಗುಲಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಜೈಲಿನಲ್ಲಿರುವ ಆರೋಪಿಗಳು: ಕಡಬಗೆರೆ ಶ್ರೀನಿವಾಸ್‌ ಆರೋಪಿಸಿರುವಂತೆ ಡಾನ್‌ ಸತೀಶ್‌ ಅಲಿಯಾಸ್‌ ನಾಗಶೆಟ್ಟಿಹಳ್ಳಿ ಸತೀಶ್‌ ಹಾಗೂ ಬೂನ್‌ ಬಾಬು ಈಗಾಗಲೇ ಬಂಧಿತರಾಗಿದ್ದಾರೆ. 

ಟಾಪ್ ನ್ಯೂಸ್

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.