ಕಳವಿನ ನಂತರ ತಲೆ ಮಾಂಸದೂಟ!
Team Udayavani, Dec 1, 2018, 12:33 PM IST
ಬೆಂಗಳೂರು: ಮನೆಕಳ್ಳತನ ಈತನ ವೃತ್ತಿ. ಕದ್ದ ಚಿನ್ನಾಭರಣಗಳ ಬಚ್ಚಿಡಲು “ಮೋರಿ’ ಗೌಪ್ಯ ಸ್ಥಳ. ಪ್ರತಿ ಯಶಸ್ವಿ ಕಳವಿನ ನಂತರ ತಲೆ ಮಾಂಸದ ಊಟ ಕಡ್ಡಾಯ… ಕೋರಮಂಗಲ ಠಾಣೆ ಪೊಲೀಸರ ಬಲೆಗೆ ಬಿದ್ದಿರುವ ಕುಖ್ಯಾತ ಮನೆಕಳ್ಳ ಕಾಂತರಾಜ್ ಅಲಿಯಾಸ್ ಮೋರಿ ಕಾಂತ (42)ನ ವಿಶೇಷತೆಗಳಿವು.
ಮಹಿಳೆಯೊಬ್ಬರ ಸರಕಳವು ಪ್ರಕರಣದ ಜಾಡು ಹಿಡಿದು ತನಿಖೆ ಆರಂಭಿಸಿದ ಪೊಲೀಸರು, ಆರೋಪಿ ಕಾಂತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಆತ ನಗರದ ವಿವಿಧ ಭಾಗಗಳಲ್ಲಿ ನಡೆಸಿದ್ದ 13 ಮನೆ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಮನೆಯಲ್ಲೂ ಕಳವು ಮಾಡಿದ್ದ ಎಂಬ ಸಂಗತಿ ಬಾಯ್ಬಿಟ್ಟಿದ್ದಾನೆ.
ಆರೋಪಿ ಕಾಂತ, ಹಲವು ತಿಂಗಳಿಂದ ಪೀಣ್ಯ, ತಿಪಟೂರು, ಎಲೆಕ್ಟ್ರಾನಿಕ್ ಸಿಟಿ ಸೇರಿ 8 ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ನಡೆಸಿದ್ದ 13 ಮನೆಕಳವು ಪ್ರಕರಣಗಳಲ್ಲಿ 31 ಲಕ್ಷ ರೂ. ಮೌಲ್ಯದ 1 ಕೆ.ಜಿ. ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
“ಮೋರಿ’ ರಹಸ್ಯ: ಹಲವು ವರ್ಷಗಳಿಂದ ಕಳ್ಳತನವನ್ನೇ ಕಸುಬಾಗಿಸಿಕೊಂಡಿರುವ ಚಿಕ್ಕಬಳ್ಳಾಪುರ ಮೂಲದ ಕಾಂತನಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪೀಣ್ಯದಲ್ಲಿ ಮನೆ ಮಾಡಿಕೊಂಡಿರುವ ಕಾಂತ, ಹಗಲು ವೇಳೆ ನಗರದ ವಿವಿಧ ಭಾಗಗಳಲ್ಲಿ ಸುತ್ತಾಡಿ, ಬೀಗ ಹಾಕಿದ ಒಂಟಿ ಮನೆಗಳನ್ನು ಗುರುತಿಸುತ್ತಿದ್ದ. ಬಳಿಕ ರಾತ್ರಿ ಹೊತ್ತು ಬೀಗ ಮುರಿದು ಒಳ ಪ್ರವೇಶಿಸಿ ಚಿನ್ನಾಭರಣ ದೋಚುತ್ತಿದ್ದ.
ಈ ಹಿಂದೆ ಕಳ್ಳತನ ಮಾಡುವಾಗ ಜನರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿ ಕಾಂತ, ಮೋರಿಯೊಂದರಲ್ಲಿ ಅಡಗಿಕೊಂಡು ತಪ್ಪಿಸಿಕೊಂಡಿದ್ದ. ನಂತರ ಮೋರಿಯಿಂದಲೇ ತಾನು ಬಚಾವಾದೆ ಎಂದು ಬಲವಾಗಿ ನಂಬಿಕೆ ಬೆಳೆಸಿಕೊಂಡಿದ್ದ ಆತ, ಕಳವು ಮಾಡಿದ ಚಿನ್ನಾಭರಣಗಳನ್ನು ಬಟ್ಟೆಯೊಂದರಲ್ಲಿ ಸುತ್ತಿ ಮೋರಿಯಲ್ಲಿ ಬಚ್ಚಿಡುತ್ತಿದ್ದ. ಕೆಲ ದಿನಗಳ ಬಳಿಕ ಆ ಚಿನ್ನಾಭರಣಗಳನ್ನು ತೆಗೆದುಕೊಂಡು ಮಾರಾಟ ಮಾಡುತ್ತಿದ್ದ. ಅಂದಿನಿಂದ ಆತನಿಗೆ ಮೋರಿ ಕಾಂತ ಎಂಬ ಅಡ್ಡ ಹೆಸರು ಬಿದ್ದಿದೆ.
ಕುಡಿತ, ತಲೆಮಾಂಸದ ಊಟ ಕಡ್ಡಾಯ: ಮದ್ಯ ವ್ಯಸನಿ, ಮಾಂಸಾಹಾರ ಪ್ರಿಯನಾದ ಕಾಂತ, ಕಳವು ಮಾಡುವ ಮುನ್ನ ಮದ್ಯ ಸೇವಿಸುತ್ತಿದ್ದ. ಚಿನ್ನಾಭರಣ ಕಳವು ಮಾಡಿದ ಬಳಿಕ ಕಡ್ಡಾಯವಾಗಿ ತಲೆ ಮಾಂಸದ ಊಟ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ. ಹೀಗಾಗಿ, ರಾತ್ರಿ ಎಷ್ಟೇ ಸಮಯವಾದರೂ ತಲೆ ಮಾಂಸ ಸಿಗುವ ಹೋಟೆಲ್‌ಗಳನ್ನು ಹುಡುಕಿಕೊಂಡು ಹೋಗುತ್ತಿದ್ದ. ತಿಪಟೂರಿನಲ್ಲಿ ಕಳ್ಳತನ ಮಾಡಿದ ಬಳಿಕ ತಲೆ ಮಾಂಸದ ಊಟ ಸಿಗಲಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿಗೆ ಬಂದು ಹೋಟೆಲ್ ಒಂದರಲ್ಲಿ ಊಟ ಮಾಡಿದ್ದಾಗಿ ಕಾಂತ ಹೇಳಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಜೈಲಿನಿಂದ ಬಂದ ಬಳಿಕವೂ ಕಳವು: ಆರೋಪಿ ಮೋರಿ ಕಾಂತ, ಈ ಹಿಂದೆ ರಾಜಗೋಪಾನಗರ, ಮಂಡ್ಯ, ತುಮಕೂರು ಸೇರಿ ಹಲವೆಡೆ ನಡೆಸಿದ 10 ಮನೆಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದಾನೆ. ಆದರೆ, ಪ್ರತಿ ಬಾರಿ ಜಾಮೀನಿನ ಆಧಾರದಲ್ಲಿ ಬಿಡುಗಡೆಯಾಗುತ್ತಿದ್ದ. ಜೈಲಿನಿಂದ ಹೊರಬಂದ ಬಳಿಕ ಪುನಃ ತನ್ನ ಹಳೇ ಕಸುಬು ಮುಂದುವರಿಸುತ್ತಿದ್ದ. ಈ ವಿಚಾರ ಆತನ ಮನೆಯವರಿಗೂ ಗೊತ್ತಿತ್ತು ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.