ಸೇವೆ ಕಾಯಂಗೆ ಆರೋಗ್ಯ ನೌಕರರ ಧರಣಿ

Team Udayavani, Oct 26, 2018, 12:30 PM IST

seve.jpg

ಬೆಂಗಳೂರು: ಉದ್ಯೋಗ ಭದ್ರತೆ, ಆರೋಗ್ಯ ಕ್ಷೇತ್ರಕ್ಕೆ ನಿಗದಿಪಡಿಸಿರುವ ಅನುದಾನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟಿಸಲಾಯಿತು. ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಗುತ್ತಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಆಗ್ರಹಿಸಿದರು.

ಹರ್ಯಾಣ ಮತ್ತು ದೆಹಲಿ ರಾಜ್ಯ ಸರ್ಕಾರಗಳು ತಮ್ಮಲ್ಲಿ ಕೆಲಸ ಮಾಡುವ ಗುತ್ತಿಗೆ ಆಧಾರಿತ ನೌಕರರ ವೇತನವನ್ನು ದುಪ್ಪಟ್ಟು ಮಾಡಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ ಗುತ್ತಿಗೆ ನೌಕರರ ವೇತನ ಪರಿಷ್ಕರಿಸಬೇಕು. ಇದರೊಂದಿಗೆ ಸಿಬ್ಬಂದಿಗೆ ಅಗತ್ಯ ಸೌಕರ್ಯ ಹಾಗೂ ಕೆಲಸ ಮಾಡಲು ಆರೋಗ್ಯಕರ ವಾತಾವರಣ ನಿರ್ಮಿಸಬೇಕೆಂದರು. 

ಸಂಘದ ಅಧ್ಯಕ್ಷ ಡಾ.ವಾಸು ಮಾತನಾಡಿ, ಸರ್ಕಾರಿ ನೌಕರರಿಗೆ ನೀಡುವಂತಹ ಜ್ಯೋತಿ ಸಂಜೀವಿನಿ, ವೈದ್ಯಕೀಯ ಯೋಜನೆಗಳನ್ನು ಎಲ್ಲಾ ಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ಜತೆಗೆ ಕಾರಣ ನೀಡದೆ ಕೆಲಸದಿಂದ ತೆಗೆದಿರುವ ಗುತ್ತಿಗೆ ನೌಕರರನ್ನು ಮರು ನೇಮಿಸಿಕೊಳ್ಳಬೇಕು ಎಂದರು.

ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರಿಂದ ಗುರುವಾರ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಮಿಷನ್‌ ಕಚೇರಿ ಸೇರಿದಂತೆ ಹೆಚ್ಚಿನ ಸಂಖ್ಯೆಯ ಗುತ್ತಿಗೆ ನೌಕರರು ಕೆಲಸ ಮಾಡುವ ಆರೋಗ್ಯ ಇಲಾಖೆ ಕಚೇರಿಗಳು ಬಿಕೋ ಎನ್ನುತ್ತಿದ್ದವು. ಆದರೆ, ತುರ್ತು ಸೇವೆ 108 ಆ್ಯಂಬುಲೆನ್ಸ್‌ಗಳು ಎಂದಿನಂತೆಯೇ ಸಂಚಾರಿಸಿದವು.

ಸಾರ್ವಜನಿಕರ ಪರದಾಟ: ಕೆ.ಸಿ.ಜನರಲ್‌ ಆಸ್ಪತ್ರೆಗೆ ಬರುತ್ತಿದ್ದ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿ ಹೊರರೋಗಿ ವಿಭಾಗ ಸೇವೆಯಿಲ್ಲವೆಂದು ವಾಪಸ್‌ ಕಳುಹಿಸುತ್ತಿದ್ದರಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಇದರೊಂದಿಗೆ ಆರೋಗ್ಯ ಕಾರ್ಡ್‌ ವಿತರಣೆ ಮಾಡುವುದು ಸ್ಥಗಿತಗೊಳಿಸಿದರಿಂದ ಆರೋಗ್ಯ ಕಾರ್ಡ್‌ ಪಡೆಯಲು ಬಂದ ಜನರು ವಾಪಸ್‌ ಹೋದರು.

ಆರೋಗ್ಯ ಇಲಾಖೆಯಲ್ಲಿ ಶೇ.70ರಷ್ಟು ಕಾಯಂ ನೌಕರರು ಇರುವುದರಿಂದ ಪ್ರತಿಭಟನೆಯಿಂದ ಯಾವುದೇ ತೊಂದರೆಯಾಗಿಲ್ಲ. ಕಾಯಂ ನೌಕರರಿಗೆ 2 ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡುವಂತೆ ತಿಳಿಸಲಾಗಿತ್ತು. ಕಾಯಮಾತಿ ನಿರ್ಧಾರ ಸರ್ಕಾರಕ್ಕೆ ಬಿಟ್ಟಿದ್ದು.
-ಪಂಕಜ್‌ ಕುಮಾರ್‌ ಪಾಂಡೆ, ಆರೋಗ್ಯ ಇಲಾಖೆ ಆಯುಕ್ತ 

ಟಾಪ್ ನ್ಯೂಸ್

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿ ಭವಿಷ್ಯ ನಿಜವಾಯ್ತು

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು

Nidhi-TVK

Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

US Result: ಭಾರತೀಯ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವಾನ್ಸ್ ಉಪಾಧ್ಯಕ್ಷ ಪಟ್ಟ…ಟ್ರಂಪ್

US Result: ಭಾರತೀಯ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವಾನ್ಸ್ ಉಪಾಧ್ಯಕ್ಷ…ಟ್ರಂಪ್

12

Nivin Pauly: ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್‌ ಪೌಲಿಗೆ ಕ್ಲೀನ್‌ ಚಿಟ್  

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಭೆ

Kaup: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಭೆ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿ ಭವಿಷ್ಯ ನಿಜವಾಯ್ತು

Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು

Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ

Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ

Nidhi-TVK

Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.