ಲಂಚಕ್ಕೆ ಬೇಡಿಕೆ: ಹೆಲ್ತ್ಇನ್ಸ್ಪೆಕ್ಟರ್ ಲೋಕಾ ಬಲೆಗೆ
Team Udayavani, Mar 5, 2023, 11:19 AM IST
ಬೆಂಗಳೂರು: ಸ್ಪಾ ಟ್ರೇಡ್ ಪರವಾನಗಿ ನವೀಕರಣಕ್ಕೆ 20 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಲ್ತ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಬಿಬಿಎಂಪಿ ಸಿ.ವಿ.ರಾಮನ್ನಗರದ ಹೆಲ್ತ್ ಇನ್ಸ್ಪೆಕ್ಟರ್ ರಾಮಯ್ಯ ಬಂಧಿತ. ಸ್ಪಾವೊಂದರ ಟ್ರೇಡ್ ಪರವಾನಗಿ ನವೀಕರಣಕ್ಕೆ ಕೋರಮಂಗಲದ ಸುಬ್ರಹ್ಮಣ್ಯ, ರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಕೆಲಸ ಮಾಡಿಸಿ ಕೊಡಲು ರಾಮಯ್ಯ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ಇಚ್ಛಿಸದ ಸುಬ್ರಹ್ಮಣ್ಯ ಲೋಕಾಯುಕ್ತಕ್ಕೆ ಈ ಬಗ್ಗೆ ದೂರು ನೀಡಿದ್ದರು.
ಸಿ.ವಿ. ರಾಮನ್ ನಗರದ ಬಿಬಿಎಂಪಿ ಕಚೇರಿಯಲ್ಲಿ ಶನಿವಾರ ದೂರುದಾರರಿಂದ ರಾಮಯ್ಯ 20 ಸಾವಿರ ಪೈಕಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ರಾಮಯ್ಯನನ್ನು ಬಂಧಿಸಿ ಲಂಚದ ಹಣ ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.