![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 27, 2024, 1:47 PM IST
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಪ್ರಕರಣ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಸವೇಶ್ವರನಗರದ ನಿವಾಸಿ ರಾಬಿನ್ (22) ಮೃತಪಟ್ಟ ಯುವಕ.
ಗಣ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಬ್ಯಾಂಕ್‌ವೊಂದ ರಿಂದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ರಾಬಿನ್ ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಬಿನ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಇವರ ಕ್ರಿಕೆಟ್ ತಂಡದ ಗೆಲುವಿನಲ್ಲೂ ಹೆಚ್ಚಿನ ಪಾತ್ರ ನಿರ್ವಹಿಸಿದ್ದರು. ಮಧ್ಯಾಹ್ನ ಬಹುಮಾನ ವಿತರಣೆ ವೇಳೆ ವೇದಿಕೆ ಮೇಲೆ ರಾಬಿನ್ ಕುಸಿದು ಬಿದ್ದಿದ್ದರು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಅಷ್ಟರಲ್ಲಿ ರಾಬಿನ್ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಜ್ಞಾನ ಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.