ಸಿಡಿಲಬ್ಬರದ ಮಳೆಗೆ 6 ಬಲಿ
Team Udayavani, Sep 26, 2018, 6:00 AM IST
ಬೆಂಗಳೂರು: ರಾಜ್ಯದ ಕೆಲವೆಡೆ ಮಂಗಳವಾರವೂ ಮಳೆ ಅಬ್ಬರಿಸಿದ್ದು, ಸಿಡಿಲಬ್ಬರದ ಮಳೆಗೆ ಆರು ಮಂದಿ ಬಲಿಯಾಗಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕಾನಿಹಾಳದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು
ಯಲಗೂರಪ್ಪ ಯರಝರಿ (25) ಹಾಗೂ ವಿಠ್ಠಲ ವಡವಡಗಿ (20) ಮೃತಪಟ್ಟಿದ್ದಾರೆ. ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮದಲ್ಲಿ ಮಂಗಳಾ ಜಲಪುರ (38) ಎಂಬುವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲಿಗೆ ಬಲಿಯಾಗಿದ್ದಾರೆ.
ಕೊಪ್ಪಳ ತಾಲೂಕಿನ ಹಲುವಾಗಲಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸುರೇಶ ಹಳ್ಳಿ (42) ಎಂಬುವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಮುಳಗುಂದ ಪಟ್ಟಣದ ಹೊರವಲಯದಲ್ಲಿ ಹೊಲದಲ್ಲಿ ಶೇಂಗಾ ಕೀಳುತ್ತಿದ್ದಾಗ ಸಿಡಿಲು ಬಡಿದು ಪಟ್ಟಣದ ಶೇಖ ಓಣಿ ನಿವಾಸಿ ನೂರಜಾನ ಹುಸೇನಸಾಬ ಕಿಂಡ್ರಿ (40) ಎಂಬುವರು ಅಸುನೀಗಿದ್ದಾರೆ. ಇನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿ ಅಲ್ತಾಬ್ ನಾಯ್ಕರ್
(20) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.
ಈ ಮಧ್ಯೆ, ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಹೆಸರಘಟ್ಟದಲ್ಲಿ ರಾಜ್ಯದಲ್ಲಿಯೇ ಅಧಿಕ, 6 ಸೆಂ.ಮೀ. ಮಳೆ ಸುರಿಯಿತು. ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.