ಒಎಫ್ಸಿ ಕೇಬಲ್‌ ತೆರವುಗೊಳಿಸಿ ಟೆಲಿಕಾಂ ಸಂಸ್ಥೆಗಳಿಗೆ ಪಾಲಿಕೆ ಬಿಸಿ 


Team Udayavani, Aug 9, 2017, 11:44 AM IST

ofc-cable.jpg

ಬೆಂಗಳೂರು: ರಾಜಧಾನಿ ನಗರಿಯ ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವ ಬೇಕಾಬಿಟ್ಟಿ ಅಳವಡಿಸಿದ ಆಪ್ಟಿಕಲ್‌ ಫೈಬರ್‌ ಕೇಬಲ್‌ಗ‌ಳ (ಓಎಫ್ಸಿ) ತೆರವು ಕಾರ್ಯಾಚರಣೆ ಪುನಾರಂಭಿಸಿರುವ ಬಿಬಿಎಂಪಿ, ಮಂಗಳವಾರ ಕನ್ನಿಂಗ್‌ಹ್ಯಾಂ ರಸ್ತೆ ಹಾಗೂ ಅಕ್ಕಪಕ್ಕ ಅಳವಡಿಸಿದ್ದ ಕೇಬಲ್‌ಗ‌ಳನ್ನು ತೆರವುಗೊಳಿಸಿದೆ.

ಕನ್ನಿಂಗ್‌ಹ್ಯಾಂ ರಸ್ತೆಯಲ್ಲಿ ಟೆಂಡರ್‌ ಶ್ಯೂರ್‌ ಯೋಜನೆಯಲ್ಲಿ ನಿರ್ಮಿಸಿರುವ ಪಾದಚಾರಿ ಮಾರ್ಗದಲ್ಲಿನ ಡೆಕ್‌ಗಳಲ್ಲಿ ಓಎಫ್ಸಿಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ನೀಡಿದ್ದ ಸೂಚನೆಗಳನ್ನು ಉಲ್ಲಂ ಸಿ ಮತ್ತೆ ರಸ್ತೆಯ ಮೇಲೆ ಅಳವಡಿಸಿದ್ದ ಕೇಬಲ್‌ಗ‌ಳನ್ನು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೆರವುಗೊಳಿಸಿದರು.

ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ ಗುಣಶೇಖರ್‌ ಹಾಗೂ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದು ತೆರವು ಕಾರ್ಯಾಚರಣೆ ಕುರಿತು ಪರಿಶೀಲನೆ ನಡೆಸಿದರು. ಕನ್ನಿಂಗ್‌ಹ್ಯಾಂ ರಸ್ತೆಯ ಚಂದ್ರಿಕಾ ಹೋಟೆಲ್‌ ಬಳಿ ಪಾದಚಾರಿ ಮಾರ್ಗದಲ್ಲಿ ಅಳವಡಿಸಲಾಗಿದ್ದ ಐಡಿಯಾ, ಏರ್‌ಟೆಲ್, ವೊಡಾ ಫೋನ್‌ ಸೇರಿದಂತೆ ಹಲವು ಕಂಪನಿಗಳ ಕೇಬಲ್‌ಗ‌ಳನ್ನು ಕಿತ್ತು ಹಾಕಲಾಯಿತು.

ಅಲ್ಲದೆ, ಇದೇ ಹೋಟೆಲ್‌ ಮುಂಭಾಗದಲ್ಲಿ ಖಾಸಗಿ ಸಂಸ್ಥೆಯೊಂದು ಅನಧಿಕೃತವಾಗಿ ಕೇಬಲ್ ಅಳವಡಿಸಿದ್ದು, ಈ ಬಗ್ಗೆ ಪಾಲಿಕೆ ನೋಟಿಸ್‌ ಜಾರಿ ಮಾಡಿದ್ದರೂ ಅದಕ್ಕೆ ಮಾನ್ಯತೆ ನೀಡಿರಲಿಲ್ಲ. ಅಲ್ಲದೆ, ಪೊಲೀಸ್‌ ದೂರು ನೀಡಿದರೂ ತೆರವುಗೊಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಆ ಕಂಪನಿಯ ಕೇಬಲ್‌ಗ‌ಳನ್ನು ಕೂಡ ತೆರವುಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ$ಎಂ.ಕೆ.ಗುಣಶೇಖರ್‌ ಯಾವುದೇ ಮುಲಾಜಿಗೆ ಒಳಗಾಗದೆ ದಿಟ್ಟತನದಿಂದ ಓಎಫ್ಸಿಗಳನ್ನು ತೆರವುಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಇತರ ಟೆಂಡರ್‌ ಶ್ಯೂರ್‌ ರಸ್ತೆಗಳಲ್ಲೂ ಇದೇ ರೀತಿಯ ಕಾರ್ಯಾಚರಕಣೆ ನಡೆಸಲಾಗುವುದು ಎಂದರು.

ಅನಧಿಕೃತ ಓಎಫ್ಸಿ ತೆರವು ವಿಚಾರದಲ್ಲಿ ಯಾವುದೇ ಕಂಪನಿಗಳ ಒತ್ತಡಕ್ಕೆ ಮಣಿಯುವುದಿಲ್ಲ. ಬಿಬಿಎಂಪಿ ಕೋಟ್ಯಂತರ ರೂ. ವೆಚ್ಚದಲ್ಲಿ ಟೆಂಡರ್‌ ಶ್ಯೂರ್‌ ರಸ್ತೆಗಳನ್ನು ನಿರ್ಮಿಸುತ್ತದೆ. ಆ ವೇಳೆ ಕೇಬಲ್ ಕಂಪನಿಗಳ ಅನುಕೂಲಕ್ಕಾಗಿ ಡೆಕ್‌ಗಳನ್ನು ನಿರ್ಮಿಸಲಾಗುತ್ತದೆ.

ಆದರೆ, ಪಾಲಿಕೆಯನ್ನು ವಂಚಿಸಿ ಕಂಪೆನಿಗಳು ಕೇಬಲ್‌ಗ‌ಳನ್ನು ಡೆಕ್‌ಗಳಲ್ಲಿ ಅಳವಡಿಸದೆ ರಸ್ತೆಯ ಹೊರ ಭಾಗದಲ್ಲೇ ಬಿಡುತ್ತಿವೆ. ಈ ಬಗ್ಗೆ ಹಲವು ಸಭೆಗಳನ್ನು ನಡೆಸಿ ಎಚ್ಚರಿಕೆ ನೀಡಿದ್ದರೂ ಹಲವು ಕಂಪನಿಗಳು ನಿರ್ಲಕ್ಷ್ಯ ವಹಿಸಿವೆ. ಅಂತಹ ಕಂಪೆನಿಗಳ ವಿರುದ್ಧದ ಕಾರ್ಯಾಚರಣೆ ತೀರ್ವಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.