ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ

Team Udayavani, Jul 24, 2018, 6:00 AM IST

23bnp-17.jpg

ಬೆಂಗಳೂರು: ಕಳೆದ ಕೆಲ ದಿನಗಳು ಅಬ್ಬರಿಸಿದ್ದ ಮಳೆ ಈಗ ಮರೆಯಾಗಿದ್ದು, ಕೇವಲ ಕರಾವಳಿ ಮತ್ತು ಮಲೆನಾಡಿಗೆ ಮಾತ್ರ ಸೀಮಿತವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ,
ಚಿಕ್ಕಮಗಳೂರಿನ ಅಲ್ಲಲ್ಲಿ ಮುಂದಿನ 48 ಗಂಟೆಗಳಲ್ಲಿ ಚದುರಿದಂತೆ ಮಳೆ ಬೀಳುವ ನಿರೀಕ್ಷೆಯಿದೆ.

ಉಳಿದಂತೆ ದಕ್ಷಿಣದ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಬರೀ ಮೋಡಕವಿದ ವಾತಾವರಣ ಅಥವಾ ಜಿಟಿಜಿಟಿ ಮಳೆ ಹನಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಧ್ಯೆ ಸೋಮವಾರ ಬೆಳಗ್ಗೆ ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ ಅತಿ ಹೆಚ್ಚು 100 ಮಿ.ಮೀ. ಮತ್ತು ತೀರ್ಥಹಳ್ಳಿಯ ಆಗುಂಬೆಯಲ್ಲಿ 90 ಮಿ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ 70 ಮಿ.ಮೀ., ಮಡಿಕೇರಿ, ಶೃಂಗೇರಿ 60 ಮಿ.ಮೀ. ಮಳೆಯಾಗಿದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಕೆಲ ಮನೆಗಳು ಕುಸಿದು ಹಾನಿಯಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್‌, ಜಾವಳಿ, ಮಾಗುಂಡಿ, ಕಳಸ,ಹೊರನಾಡು, ಕೊಟ್ಟಿಗೆಹಾರದಲ್ಲಿ ಸತತ ಮಳೆಯಾಗುತ್ತಿದೆ. ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಮತ್ತೆ ಮಳೆ ಆರಂಭಗೊಂಡಿದ್ದು, ತುಂಗಾ ಹಾಗೂ ಮಾಲತಿ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ. ಆಗುಂಬೆ ಭಾಗದಲ್ಲಿ 2 ದಿನಗಳಿಂದ ಭಾರೀ ಗಾಳಿ-ಮಳೆಯಾಗುತ್ತಿದ್ದು
ಅಡಿಕೆ ತೋಟಗಳಿಗೆ ಅಪಾರ ಹಾನಿಯಾಗಿದೆ.

ರೈಲು ಹಳಿ ಮೇಲೆ ಭೂಕುಸಿತ: ಸಕಲೇಶಪುರ ತಾಲೂಕಿನ ಆಲುವಳ್ಳಿ ಸಮೀಪ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ಹಳಿಯ ಮೇಲೆ ಮಣ್ಣು ಕುಸಿದಿದ್ದನ್ನು ರೈಲ್ವೆ ಸಿಬ್ಬಂದಿ ಸತತ ಕಾರ್ಯಾಚರಣೆ ಮುಖಾಂತರ ತೆರವುಗೊಳಿಸಿದ್ದಾರೆ.

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

vidhana-Soudha

Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ

Nikhil-JDS

New Office Bearers: ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷ ಜತೆಗೆ ಮೂರು ಕಾರ್ಯಾಧ್ಯಕ್ಷ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.