Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Team Udayavani, Oct 24, 2024, 12:36 PM IST

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

ಬೆಂಗಳೂರು: ಯಲಹಂಕದ ಕೇಂದ್ರೀಯ ವಿಹಾರ್‌ ಅಪಾರ್ಟ್‌ಮೆಂಟ್‌, ಜಕ್ಕೂರು ಬಳಿಯ ಡೈನಸ್ಟಿ ಬಡಾವಣೆಗಳು ಸೋಮವಾರದ ಮಳೆಯಿಂದಾಗಿ ಇನ್ನೂ ದ್ವೀಪದಂತಾಗಿದ್ದು, ದಾಸರಹಳ್ಳಿ, ಮಹದೇವಪುರ ವಲಯಗಳ ಕೆಲವು ಬಡಾವಣೆಗಳಲ್ಲಿ ಕೆರೆಯಂತೆ ತುಂಬಿರುವ ನೀರನ್ನು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನ ಯಲಹಂಕ ವ್ಯಾಪ್ತಿಯ ಚೌಡೇಶ್ವರಿಯಲ್ಲಿ ಸೋಮವಾರ ರಾತ್ರಿ 12 ರಿಂದ ಮುಂಜಾನೆ 6 ಗಂಟೆಯವರೆಗೆ ಬರೋಬ್ಬರಿ 15 ಸೆಂ. ಮೀ.ಗೂ ಅಧಿಕ ಮಳೆ ಸುರಿದ ಪರಿಣಾಮ ದ್ವೀಪದಂತಾಗಿದ್ದ ಯಲಹಂಕದ ಕೇಂದ್ರೀಯ ವಿಹಾರ್‌ ಅಪಾರ್ಟ್‌ಮೆಂಟ್‌ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇಲ್ಲಿನ ಕಾರುಗಳು ಅರ್ಧ ನೀರಿನಲ್ಲಿ ಮುಳುಗಿ ಹೋದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳ ವಸ್ತುಗಳೆಲ್ಲ ನೀರಿನಲ್ಲಿ ಕೊಚ್ಚಿ ಹೋಗಿವೆ.

ಇಲ್ಲಿನ ನಿವಾಸಿಗಳಿಗೆ ಊಟ, ಉಪಾಹಾರ ನೀಡುತ್ತಿರುವ ಬಿಬಿಎಂಪಿಯು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ರಕ್ಷಣೆ ನೀಡಿದೆ. ಇನ್ನು ಈ ಅಪಾರ್ಟ್‌ಮೆಂಟ್‌ನ ನೀರು ತೆರವುಗೊಳಿಸಿ ಸಹಜ ಸ್ಥಿತಿಗೆ ಬರಲು ಇನ್ನೂ ಒಂದು ವಾರಗಳೇ ಉರುಳಬಹುದು ಎನ್ನುತ್ತಾರೆ ಅಧಿಕಾರಿಗಳು. ಇದರ ಜೊತೆಗೆ ಜಕ್ಕೂರು ಬಳಿಯ ಡೈನಸ್ಟಿ ಬಡಾವಣೆಗಳು ಜಲಾವೃತಗೊಂಡಿದ್ದು, ಇಲ್ಲೂ ಬಿಬಿಎಂಪಿ ಕಾರ್ಯಾಚರಣೆ ಮುಂದುವರಿಸಿದೆ.

ಇನ್ನು ಮಹದೇವಪುರದ ಸಾಯಿ ಲೇಔಟ್‌ ಹಾಗೂ ವಡ್ಡರಪಾಳ್ಯದಲ್ಲಿ ನೀರನ್ನು ಹೊರ ಹಾಕುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಇಲ್ಲಿ ಬಡಾವಣೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಇನ್ನೂ ನೀರಿನ ತೆರವು ಕಾರ್ಯ ನಡೆಯುತ್ತಿದೆ. ಇಲ್ಲಿ ನೆಲೆಸಿರುವ ಮನೆಗಳಲ್ಲಿ ಅಪಾರ ಪ್ರಮಾಣದ ವಸ್ತುಗಳು ನೀರು ಪಾಲಾಗಿದೆ. ಇಲ್ಲಿನ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದ್ದು, ಇಲ್ಲಿ ಸಂಪೂರ್ಣ ನೀರು ತೆರವಾದ ಬಳಿಕವೇ ಇಲ್ಲಿಗೆ ಅವರನ್ನು ಕಳುಹಿಸಲಾಗುವುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಇನ್ನು ಆರ್‌ಜಿಎ ಟೆಕ್‌ ಪಾರ್ಕ್‌ ರಸ್ತೆ ಕೆರೆಯಂತಾಗಿದೆ. ಮೇಲ್ಸೇತುವೆ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ. ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯಗಳಲ್ಲಿ ಭಾರೀ ಮಳೆಯಾಗಿದ್ದು, ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಗಳಲ್ಲಿ ಹೆಚ್ಚು ನೀರು ಹರಿದಿರುವ ಪರಿಣಾಮ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ. ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಇರುವುದರಿಂದ ಬಾಧಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಹಾಗೂ ಯಾವುದೇ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸುವ ಸಲುವಾಗಿ ಪಾಲಿಕೆಯ ಅಧಿಕಾರಿ, ನೌಕರರ ತಂಡಗಳ ಜೊತೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅಗ್ನಿ ಶಾಮಕ ದಳ ಹಾಗೂ ಸಿವಿಲ್‌ ಡಿಫೆನ್ಸ್‌ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ದಾಸರಹಳ್ಳಿ ವಲಯ ನಿಸರ್ಗ ಲೇಔಟ್‌, ಪಾರ್ವತಿ ಬಡಾವಣೆ, ಮಿತ್ರಾ ಬಡಾವಣೆ, ಪೀಣ್ಯ ಕೈಗಾರಿಕಾ ಪ್ರದೇಶ, ಬೆಲ್ಮಾರ್ಗ್‌ ಲೇಔಟ್‌, ಮಹದೇವಪುರದ ಬೆಸ್ಲಿಂಗ್‌ ಗಾರ್ಡನ್‌, ಮಧುರಾನಗರ, ಚೆನ್ನಪ್ಪನಹಳ್ಳಿ, ಸಪ್ತಗಿರಿ ಲೇಔಟ್‌, ಚಿನ್ನಸಂದ್ರ ಮುಖ್ಯ ರಸ್ತೆ, ಗ್ರೀನ್‌ ಲೇಔಟ್‌ನಲ್ಲಿ ನೀರು ತೆರವುಗೊಳಿಸಲಾಗಿದೆ. ಮಹದೇವಪುರ ವಲಯದ ಸಾಯಿ ಲೇಔಟ್‌ನಲ್ಲಿ ಸುಮಾರು 300 ಜನ ನಾಗರಿಕರಿಗೆ ಬೆಳಗಿನ ಉಪಾಹಾರ. ಮಧ್ಯಾಹ್ನ ಊಟ, ರಾತ್ರಿಯ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.