ರಾಜ್ಯದ ಹಲವೆಡೆ ಮಳೆ,ಸಿಡಿಲಿಗೆ ಕುರಿಗಾಹಿ ಬಲಿ
Team Udayavani, May 18, 2018, 6:55 AM IST
ಮಂಗಳೂರು/ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ರೋಣದ ಹಳಕಾರಿ ಕಾಲೋನಿ ನಿವಾಸಿ ಸೋಮಶೇಖರ ಕೊಳ್ಳಿ (24) ಎಂದು ಗುರುತಿಸಲಾಗಿದೆ. ಕುರಿ ಮೇಯಿಸುತ್ತಿರುವಾಗ ಸಿಡಿಲು ಬಡಿದಿದೆ. ಇದೇ ವೇಳೆ, ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ 8 ಕುರಿಗಳು ಸಿಡಿಲಿಗೆ ಆಹುತಿಯಾಗಿವೆ.
ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶ, ಬಳ್ಳಾರಿ ಜಿಲ್ಲೆ ಹೊಸಪೇಟೆ ಸುತ್ತಮುತ್ತ ಗುಡುಗು ಸಹಿತ ಸುರಿದ ಮಳೆಗೆ ಗಿಡಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕುಂದಾಪುರ, ಶಿರಹಟ್ಟಿ ಮತ್ತು ಬೇಗೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ ತಲಾ 3 ಸೆಂ.ಮೀ.ಮಳೆ ಸುರಿಯಿತು.
ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 41 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಇನ್ನೆರಡು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.