ಮಳೆಗೆ ಕೃಷ್ಣಾ, ಮಲಪ್ರಭಾ ಒಡಲು ಭರ್ತಿ


Team Udayavani, Jun 11, 2018, 6:05 AM IST

180610kpn85.jpg

ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. 

ಗಾಳಿ, ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ಅಪಾರ ನಷ್ಟ ಉಂಟಾಗಿದೆ. ಇನ್ನೂ ಎರಡು-ಮೂರು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ದಿನವಿಡಿ ಮಳೆ ಹನಿಯಿತು. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ
ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಜಿಲ್ಲಾಧಿಕಾರಿ ಮನೆಯ ಮೇಲೆ ಮರಗಳು ಉರುಳಿ ಬಿದ್ದಿದ್ದು, ಜಿಲ್ಲಾಧಿಕಾರಿ ಕಾವಲು ಸಿಬ್ಬಂದಿಯ ಕೋಣೆ ಸಂಪೂರ್ಣ ಜಖಂಗೊಂಡಿದೆ. 

ಜಿಲ್ಲಾಧಿಕಾರಿ ನಿವಾಸಕ್ಕೂ ಹಾನಿಯಾಗಿದೆ. ಸಂಗಮದಲ್ಲಿರುವ ಕೇಶಮುಂಡನ ಸ್ಥಳ ಮತ್ತು ಬಟ್ಟೆ ಬದಲಿಸುವ ಕಟ್ಟಡ, ಮೂರ್ನಾಡು ಬಲಮುರಿಯ ಹಳೆಯ ಸೇತುವೆ ಜಲಾವೃತವಾಗಿದೆ. ವಿರಾಜಪೇಟೆ ತಾಲೂಕಿನ ಹಲವೆಡೆ ಗುಡ್ಡ ಕುಸಿತ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲಾವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ 10 ಕ್ರೆಸ್ಟ್‌ಗೇಟ್‌ ತೆರೆದು ಸುಮಾರು 13 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.

ಗಾಜನೂರಿನ ಜಲಾಶಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ತುಂಗಾ, ಭದ್ರಾ ನದಿಯಲ್ಲಿ ಕೂಡ ನೀರಿನ ಮಟ್ಟ ಏರುತ್ತಿದ್ದು, ನದಿ ಪಾತ್ರದಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ತುಂಗಾ ಜಲಾಶಯ ಸಮೀಪದ ಮಂಡಗದ್ದೆ ಪಕ್ಷಿಧಾಮದಲ್ಲಿ ವಿದೇಶಿ ಬಾನಾಡಿಗಳು ಅಪಾಯಕ್ಕೆ ಸಿಲುಕಿವೆ. ಶರಾವತಿ ನದಿ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 9384 ಕ್ಯೂಸೆಕ್‌ ಒಳಹರಿವಿದೆ. ಜಲಾಶಯದ ಮಟ್ಟ 1753.05 ಅಡಿಗೆ ತಲುಪಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಶನಿವಾರ ರಾತ್ರಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಭಾನುವಾರ ಬೆಳಗ್ಗೆವರೆಗೂ ನೂರಾರು ವಾಹನಗಳು ರಸ್ತೆಯಲ್ಲಿಯೇ ನಿಲ್ಲುವಂತಾಯಿತು.

ಉತ್ತರ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಕೃಷ್ಣಾ ಹಾಗೂ ಮಲಪ್ರಭಾ ನದಿಯ ಒಡಲು ತುಂಬಿಕೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ನಾರಾಯಣಪುರ ಜಲಾಶಯದ ಹಿನ್ನೀರಿನ ಕೃಷ್ಣಾ ಹಾಗೂ ಮಲಪ್ರಭಾ ನದಿಯ
ಒಡಲು ಸಂಪೂರ್ಣ ತುಂಬಿಕೊಂಡಿದೆ. ಹೀಗಾಗಿ, ಕೂಡಲಸಂಗಮಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ನದಿಯಲ್ಲಿ ಸ್ನಾನ ಮಾಡಿ, ದೇವರ ದರ್ಶನ ಪಡೆದು, ದೋಣಿ ಸಂಚಾರ ಮಾಡುತ್ತಿದ್ದಾರೆ. ಇದೇ ವೇಳೆ, ವಾಡಿ,ಚಿಂಚೋಳಿ, ಚಿತ್ರದುರ್ಗ, ಶಿರಸಿ, ಸಿದ್ದಾಪುರ,ಯಲ್ಲಾಪುರ, ಸಾಗರ ಸೇರಿದಂತೆ ರಾಜ್ಯದ
ಇತರೆಡೆಯೂ ಮಳೆಯಾದ ವರದಿಯಾಗಿದೆ.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.